ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ: ವಾಹನ ಸಂಚಾರ, ಪಾರ್ಕಿಂಗ್, ಊಟೋಪಚಾರ ವ್ಯವಸ್ಥೆಯ ಬಗ್ಗೆ ಇಲ್ಲಿದೆ ಮಾಹಿತಿ

ಕಾರ್ಯಕ್ರಮದಲ್ಲಿ ಅಮಿತ್ ಶಾ, ಸುತ್ತೂರು ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ್ ಖೂಬಾ, ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗಿ ಆಗಲಿದ್ದಾರೆ. ವೇದಿಕೆ ಮೇಲೆ ಕೂರಲು 22 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ: ವಾಹನ ಸಂಚಾರ, ಪಾರ್ಕಿಂಗ್, ಊಟೋಪಚಾರ ವ್ಯವಸ್ಥೆಯ ಬಗ್ಗೆ ಇಲ್ಲಿದೆ ಮಾಹಿತಿ
ಶಿವಕುಮಾರ ಶ್ರೀಗಳು
Follow us
| Updated By: ganapathi bhat

Updated on:Apr 01, 2022 | 10:23 AM

ತುಮಕೂರು: ಡಾ. ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ ಕಾರ್ಯಕ್ರಮ ಸಿದ್ದಗಂಗಾ ಮಠದ ಆವರಣದಲ್ಲಿ ಇಂದು (ಏಪ್ರಿಲ್ 1) ಅದ್ಧೂರಿಯಾಗಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ ಆಗಲಿದ್ದಾರೆ. ಅಮಿತ್ ಶಾ ಬೆಳಗ್ಗೆ 10.30 ಕ್ಕೆ ತುಮಕೂರು ವಿವಿಯ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಸಿದ್ದಗಂಗಾ ಮಠದತ್ತ ಪ್ರಯಾಣ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು ಶಿವಕುಮಾರಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿ ಆಗಲಿದ್ದಾರೆ. ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ್ ಖೂಬಾ, ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗಿ ಆಗಲಿದ್ದಾರೆ. ವೇದಿಕೆ ಮೇಲೆ ಕೂರಲು 22 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಸಿದ್ದಗಂಗಾ ಮಠದ ಆವರಣದಲ್ಲಿ ಇಂದು ನಡೆಯವ ಅದ್ಧೂರಿ ಕಾರ್ಯಕ್ರಮಕ್ಕೆ ಮಠದಲ್ಲಿ ‘ನಡೆದಾಡುವ ಬಸವ ಭಾರತ ವೇದಿಕೆ’ ನಿರ್ಮಾಣ ಮಾಡಲಾಗಿದೆ. ಸಿದ್ದಗಂಗಾ ಮಠದ ಸಿದ್ದಲಿಂಗಶ್ರೀಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಮುಂಭಾಗ ಒಟ್ಟು 10 ಸಾವಿರಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದೆ.

ಇಂದು ಶಿವಕುಮಾರ ಶ್ರೀಗಳ 115 ನೇ ಜಯಂತಿ ಅದ್ದೂರಿಯಾಗಿ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬಸವರಾಜ ಬೊಮ್ಮಾಯಿ, ಪ್ರಲ್ಹಾದ್ ಜೋಶಿ, ಭಗವಂತ್ ಖೂಬಾ, ವಿ. ಸೋಮಣ್ಣ, ಆರಗ ಜ್ಞಾನೇಂದ್ರ, ಮಾಧುಸ್ವಾಮಿ ಸೇರಿದಂತೆ ಹಲವರು ಬರಲಿದ್ದಾರೆ. ಬೆಳಿಗ್ಗೆ 10.30 ಸುಮಾರಿಗೆ ತುಮಕೂರಿನ ವಿವಿ ಹೆಲಿಪ್ಯಾಡ್​ಗೆ ಬರಲಿದ್ದಾರೆ. ಬಳಿಕ 10.45ಕ್ಕೆ ಹೆಲಿಪ್ಯಾಡ್ ನಿಂದ ಮಠಕ್ಕೆ ಆಗಮಿಸಲಿದ್ದಾರೆ. ಬಳಿಕ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಗದ್ದುಗೆ ದರ್ಶನ ಬಳಿಕ ನೇರವಾಗಿ ವೇದಿಕೆಗೆ ಬರ್ತಾರೆ. ವೇದಿಕೆಯಲ್ಲಿ ಅಮಿತ್ ಶಾ, ಬಿ.ಎಸ್. ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ, ಭಗವಂತ್ ಖೂಬಾ, ಜೋಶಿ, ಆರಗ ಜ್ಞಾನೇಂದ್ರ, ಸೋಮಣ್ಣ, ಜಿಲ್ಲೆಯ ಶಾಸಕರು ಭಾಗಿಯಾಗಲಿದ್ದಾರೆ. ಶಿವಕುಮಾರ ಶ್ರೀಗಳ ಜಯಂತಿ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಮಠಕ್ಕೆ ಬರ್ತಿದ್ದಾರೆ. ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಇದೆ. ಗಾಯಕ ವಿಜಯ್ ಪ್ರಕಾಶ್, ಹಂಸಲೇಖರಿಂದ ಕಾರ್ಯಕ್ರಮ ಇದೆ. ಸುಮಾರು 200 ಕ್ಕೂ ಜನರಿಂದ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಸಿದ್ದಗಂಗಾ ಮಠದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ಸ್ವಾಮೀಜಿ ಕುಳಿತುಕೊಳ್ಳುತ್ತಿದ್ದ ಪೀಠದ ಸ್ಥಳ ವಿವಿಧ ಹೂವುಗಳಿಂದ ಅಲಂಕಾರ

ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿ ಹಾಗೂ ಗುರುವಂದನ ಕಾರ್ಯಕ್ರಮ ಹಿನ್ನೆಲೆ ಸ್ವಾಮೀಜಿ ಕುಳಿತುಕೊಳ್ಳುತ್ತಿದ್ದ ಪೀಠದ ಸ್ಥಳವನ್ನ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಸ್ವಾಮೀಜಿ ಪೀಠದಲ್ಲಿ ಕುಳಿತು ಭಕ್ತರಿಗೆ ದರ್ಶನ ನೀಡುತ್ತಿದ್ದರು. ಇದೀಗ ಪೀಠದ ಬಳಿ ಸ್ವಾಮೀಜಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಬೆಳಗ್ಗಿನಿಂದಲೇ ಭಕ್ತರು ಬಂದು ದರ್ಶನ ಪಡೆಯುತ್ತಿದ್ದಾರೆ.

4 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ; ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಊಟೋಪಚಾರ ವ್ಯವಸ್ಥೆ

ಸಿದ್ದಗಂಗಾ ಮಠದ ಗುರುವಂದನಾ ಕಾರ್ಯಕ್ರಮದಲ್ಲಿ 4 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಭಕ್ತರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಮಠದ ಆವರಣದಲ್ಲಿ 8 ಕಡೆ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸಿದ್ದಗಂಗಾ ಮಠದ ಆವರಣದಲ್ಲಿರುವ ಹಳೇ ಊಟದ ಮನೆ, ಹೊಸ ಊಟದ ಮನೆ, ಕೆಂಪಹೊನ್ನಯ್ಯ ಅತಿಥಿ ಗೃಹ, ಪ್ರಾರ್ಥನಾ ಮಂದಿರ, ಸಿದ್ದಾರ್ಥ ಅತಿಥಿ ಗೃಹ, ಸೌದೆ ಕೊಪ್ಪಲು, ಉದ್ದಾನೇಶ್ವರ ಊಟದ ಮನೆ, ವಸ್ತು ಪ್ರದರ್ಶನದ ಊಟದ ಮನೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟದ ವ್ಯವಸ್ಥೆ ಇರಲಿದೆ.

20 ಎಕರೆ ಪ್ರದೇಶದಲ್ಲಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ

ಡಾ.ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯುತ್ತಿದ್ದು ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 20 ಎಕರೆ ಪ್ರದೇಶದಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಿದ್ದಗಂಗಾ ಮಠದ ಬಂಡೆಪಾಳ್ಯ ಬಳಿ ಪಾರ್ಕಿಂಗ್ ವ್ಯವಸ್ಥೆ ಇದೆ. ಮುಂಜಾನೆ 5 ಗಂಟೆಯಿಂದಲೇ ಮಠದತ್ತ ಭಕ್ತರ ಆಗಮಿಸುತ್ತಿದ್ದು ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆ ಇದೆ.

ರಸ್ತೆ ಸಂಚಾರ ಹೇಗಿರಲಿದೆ? ಯಾವೂರಿನಿಂದ ಬರುವವರಿಗೆ ಯಾವ ಮಾರ್ಗ ಸೂಕ್ತ?

ಡಾ.ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ, ಸಿದ್ದಗಂಗಾ ಮಠದಲ್ಲಿ ಇಂದು ಅದ್ಧೂರಿ ಕಾರ್ಯಕ್ರಮ ಹಿನ್ನೆಲೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ ಆಗುತ್ತಿದ್ದಾರೆ. ಈ ಕಾರಣದಿಂದ ತುಮಕೂರಿನಲ್ಲಿ ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಎಪಿಎಂಸಿ ಸರ್ವಿಸ್ ರಸ್ತೆ ಸಂಪೂರ್ಣ ಬಂದ್ ಆಗಿರಲಿದೆ. ಸಿದ್ದಗಂಗಾ ಮಠಕ್ಕೆ ಸಾರ್ವಜನಿಕ ವಾಹನ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಸಿದ್ದಗಂಗಾ ಮಠಕ್ಕೆ ಬೆಂಗಳೂರಿನಿಂದ ಬರುವ ವಾಹನಗಳು ಕ್ಯಾತ್ಸಂದ್ರ ವೃತ್ತದಿಂದ ಬಟವಾಡಿ ಬ್ರಿಡ್ಜ್ ಕೆಳಭಾಗದಿಂದ, ದೇವರಾಯಪಟ್ಟಣ ಕ್ರಾಸ್ ಮೂಲಕ ಸಿದ್ದಗಂಗಾ ಮಠಕ್ಕೆ ಬರಬೇಕು. ರಾಗಿ ಹೊಲದ ಒಳಭಾಗದಲ್ಲಿ ವಾಹನಗಳ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ.

ಕುಣಿಗಲ್ ಕಡೆಯಿಂದ ಸಿದ್ದಗಂಗಾ ಮಠಕ್ಕೆ ಬರುವ ವಾಹನಗಳು, ಕುಣಿಗಲ್ ಜಂಕ್ಷನ್-ರಿಂಗ್ ರಸ್ತೆ ಮೂಲಕ ಆಗಮಿಸಿ ರೋಟಿಗಾರ್ ಬಳಿ 80 ಅಡಿ ರಸ್ತೆ ಮೂಲಕ ಬಟವಾಡಿ ಜಂಕ್ಷನ್, ದೇವರಾಯಪಟ್ಟಣ ಕ್ರಾಸ್ ಮೂಲಕ ಸಿದ್ದಗಂಗಾ ಮಠಕ್ಕೆ ಬರಬೇಕು. ಶಿರಾ-ಮಧುಗಿರಿ ಕಡೆಯಿಂದ ಸಿದ್ದಗಂಗಾ ಮಠದ ಮಾರ್ಗ, ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ಬಂದು, ಭಾರತಿ ನಗರ ಬ್ರಿಡ್ಜ್ ಬಳಿ ಸರ್ವಿಸ್ ರಸ್ತೆಯಿಂದ ದೇವರಾಯಪಟ್ಟಣ ವೃತ್ತದ ಮೂಲಕ ಸಿದ್ದಗಂಗಾ ಮಠಕ್ಕೆ ಆಗಮಿಸಬೇಕು.

ಗುಬ್ಬಿ ಚೇಳೂರು ಕಡೆಯಿಂದ ಬರುವ ವಾಹನಗಳಿಗೆ, ಗುಬ್ಬಿ ಜಂಕ್ಷನ್-ಲಕ್ಕಪ್ಪ ವೃತ್ತ, ಬಿಜಿಎಸ್ ವೃತ್ತ, ಅಶೋಕ ರಸ್ತೆ, ಕೋಡಿ ವೃತ್ತ, ಅಮಾನಿಕೆರೆ ಕೋತಿ ತೋಪು ರಸ್ತೆ ಮೂಲಕ, ಹನುಮಂತ ಪುರ ಬ್ರಿಡ್ಜ್, ಭಾರತಿ ನಗರ ಬ್ರಿಡ್ಜ್ ಬಳಿ ಸರ್ವಿಸ್ ರಸ್ತೆ ತೆಗೆದುಕೊಂಡು, ದೇವರಾಯಪಟ್ಟಣ ಸರ್ಕಲ್ ಮೂಲಕ ಸಿದ್ದಗಂಗಾ ಮಠಕ್ಕೆ ಬರಬೇಕು. ತುಮಕೂರು ನಗರದ ಪ್ರಮುಖ ರಸ್ತೆಗಳಾದ ಬಿ.ಹೆಚ್.ರಸ್ತೆ, ರಾಷ್ಟ್ರೀಯ ಹೆದ್ದಾರಿ 48, ರಿಂಗ್ ರಸ್ತೆ ಸೇರಿ ಪ್ರಮುಖ ರಸ್ತೆಗಳಲ್ಲಿ ಯಾವುದೇ ಸಾರ್ವಜನಿಕ ವಾಹನಗಳನ್ನು ನಿಲ್ಲಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: ಡಾ.ಶಿವಕುಮಾರ ಶ್ರೀಗಳ 115ನೇ ಜಯಂತಿ ಹಿನ್ನೆಲೆ; ಗುರುವಂದನಾ ಕಾರ್ಯಕ್ರಮದಲ್ಲಿ 4 ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ

ಇದನ್ನೂ ಓದಿ: ಅಮಿತ್ ಶಾ ತುಮಕೂರಿಗೆ ಭೇಟಿ ಹಿನ್ನೆಲೆ, ಮತ್ತೆ ಮುನ್ನೆಲೆಗೆ ಬಂದ ಡಾ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡುವ ವಿಚಾರ

Published On - 9:19 am, Fri, 1 April 22

ತಾಜಾ ಸುದ್ದಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್