Siddaganga Mutt: ನಾಳೆ ಶಿವಕುಮಾರ ಸ್ವಾಮೀಜಿ 3ನೇ ವರ್ಷದ ಪುಣ್ಯಸ್ಮರಣೆ: ಸರಳ ಆಚರಣೆಗೆ ಸಿದ್ದಗಂಗೆ ಮಠ ನಿರ್ಧಾರ

Shivakumara Swamiji: ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಠದ ದೇವರಾದ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ರುದ್ರಾಭಿಷೇಕ ನಡೆಯಲಿದೆ.

Siddaganga Mutt: ನಾಳೆ ಶಿವಕುಮಾರ ಸ್ವಾಮೀಜಿ 3ನೇ ವರ್ಷದ ಪುಣ್ಯಸ್ಮರಣೆ: ಸರಳ ಆಚರಣೆಗೆ ಸಿದ್ದಗಂಗೆ ಮಠ ನಿರ್ಧಾರ
ಶಿವಕುಮಾರ ಶ್ರೀಗಳು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 20, 2022 | 8:55 PM

ತುಮಕೂರು: ಸಿದ್ದಗಂಗೆ ಮಠಾಧೀಶರಾಗಿದ್ದ ದಿವಂಗತ ಶಿವಕುಮಾರ ಸ್ವಾಮೀಜಿ ಅವರ 3ನೇ ವರ್ಷದ ಪುಣ್ಯ ಸ್ಮರಣೆ ಶುಕ್ರವಾರ (ಜ.21) ಮಠದ ಆವರಣದಲ್ಲಿ ನಡೆಯಲಿದೆ. ಕೊವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮಗಳನ್ನು ನಡೆಸಲು ಮಠದ ಆಡಳಿತ ಮಂಡಳಿ ನಿರ್ಧರಿಸಿದೆ. ಸಿದ್ದಗಂಗ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಠದ ದೇವರಾದ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ರುದ್ರಾಭಿಷೇಕ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಮಠಕ್ಕೆ ಭೇಟಿ ನೀಡಿ, ಗದ್ದುಗೆಯ ದರ್ಶನ ಪಡೆಯಲಿದ್ದಾರೆ.

ಕೊವಿಡ್ ಸೋಂಕು ಹೆಚ್ಚಳ ತುಮಕೂರು ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಕೊವಿಡ್ ಸೋಂಕು ಹೆಚ್ಚಾಗಿದೆ. ಜಿಲ್ಲೆಯಲ್ಲಿ ಸರಾಸಇ ಪಾಸಿಟಿವಿಟಿ ದರ ಶೇ 22ರಿಂದ 24ರಷ್ಟಿದೆ. ಪಾಸಿಟಿವಿಟಿ ದರ ಹೆಚ್ಚಿದ್ದರೂ ಯಾರೂ ಆತಂಕಪಡಬೇಕಾಗಿಲ್ಲ. ಶೇ 95ರಷ್ಟು ಸೋಂಕಿತರು ಹೋಂ ಐಸೋಲೇಷನ್‌ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ತುಮಕೂರಿನಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಆಕ್ಸಿಜನ್ ಮತ್ತು ಔಷಧ ಕೊರತೆಯಿಲ್ಲ ಎಂದು ಹೇಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಇಂದು 1622 ಜನರಿಗೆ ಸೋಂಕು ದೃಢಪಟ್ಟಿದ್ದು, 10,748 ಸಕ್ರಿಯ ಪ್ರಕರಣಗಳಿವೆ. ತುಮಕೂರು ತಾಲ್ಲೂಕಿನಲ್ಲಿಯೇ 572 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ತುಮಕೂರು ಜಿಲ್ಲೆಯಲ್ಲಿ ಈವರೆಗೂ 859 ಮಕ್ಕಳು ಹಾಗೂ 282 ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 37 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ತುಮಕೂರು ಜಿಲ್ಲೆಯ ಶೈಕ್ಷಣಿಕ ವಿಭಾಗದಲ್ಲಿ 32 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 5 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈವರೆಗೂ 460 ಬಾಲಕರು ಹಾಗೂ 399 ಬಾಲಕಿಯರಿಗೆ ಸೊಂಕು ಕಾಣಿಸಿಕೊಂಡಿದೆ. ಇನ್ನೂರಕ್ಕೂ ಹೆಚ್ಚು ಶಿಕ್ಷಕರಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪಾಠಗಳಿಗೆ ತೊಡಕು ಉಂಟಾಗುವ ಆತಂಕವನ್ನು ಪೋಷಕರು ವ್ಯಕ್ತಪಡಿಸಿದ್ದಾರೆ. ಕೋವಿಡ್ ನಿಯಮಗಳನ್ನು ಪಾಲಿಸಲು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎಂದು ಡಿಡಿಪಿಐ ನಂಜಯ್ಯ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 114ನೇ ಹುಟ್ಟುಹಬ್ಬ: ಗದ್ದುಗೆ ಪೂಜೆ, ಮಕ್ಕಳ ನಾಮಕರಣದ ಮೂಲಕ ಸರಳ ಆಚರಣೆ ಇದನ್ನೂ ಓದಿ: Covid 19 Karnataka Update: ಕರ್ನಾಟಕದಲ್ಲಿ 47 ಸಾವಿರ ಮಂದಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 29 ಜನರು ಸಾವು

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?