ತುಮಕೂರು ಬಿಸಿಎಂ ಹಾಸ್ಟೇಲ್​ಗಳಿಗೆ ಸಿದ್ದಗಂಗಾ ಮಠದ ಅಕ್ಕಿ: ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಸ್ಪೆಂಡ್​​​

ಬಿಸಿಎಂ ಹಾಸ್ಟೆಲ್​ಗಳಿಗೆ ಕರ್ನಾಟಕ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ. ಹೀಗಾಗಿ ಶ್ರೀ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಾಲವಾಗಿ ಪಡೆದಿದೆ ಎಂದು ವರದಿಯಾಗಿತ್ತು. ಇದೀಗ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ.

ತುಮಕೂರು ಬಿಸಿಎಂ ಹಾಸ್ಟೇಲ್​ಗಳಿಗೆ ಸಿದ್ದಗಂಗಾ ಮಠದ ಅಕ್ಕಿ: ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಸ್ಪೆಂಡ್​​​
ತುಮಕೂರು ಸಿದ್ದಗಂಗಾ ಮಠ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ

Updated on: Feb 21, 2024 | 10:44 AM

ತುಮಕೂರು, ಫೆಬ್ರವರಿ 21: ಸಿದ್ದಗಂಗಾ ಮಠದಿಂದ (Siddaganga Mutt) ಬಿಸಿಎಂ ಹಾಸ್ಟೆಲ್​ಗಳಿಗೆ (BCM Hostel) ಅಕ್ಕಿ (Rice) ಸಾಲ‌ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ (Backward Classes Welfare Department) ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ ದಯಾನಂದರಿಂದ ಅಮಾನತು ಮಾಡಿ ಆದೇಶ ಹೊಡಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಸರಿಯಾದ ಸಮಯಕ್ಕೆ ಅಕ್ಕಿ ವಿತರಣೆ ಆದರೂ, ಕಲ್ಯಾಣಾಧಿಕಾರಿ ಗೀತಮ್ಮ ಹಾಸ್ಟೆಲ್​ಗಳಿಗೆ ಅಕ್ಕಿಯನ್ನು ಎತ್ತುವಳಿ ಮಾಡಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

2-3 ತಿಂಗಳಿನಿಂದ ಸಾಲ ನೀಡುತ್ತಿರುವ ಮಠ

ಬಿಸಿಎಂ ಹಾಸ್ಟೆಲ್​ಗಳಿಗೆ ಕರ್ನಾಟಕ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ. ಹೀಗಾಗಿ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಾಲವಾಗಿ ಪಡೆದಿದೆ ಎಂದು ವರದಿಯಾಗಿತ್ತು. ಬಗ್ಗೆ ಮಠದ ಆಡಳಿತಾಧಿಕಾರಿ ವಿಶ್ವನಾಥ್ ಸ್ಪಷ್ಟನೆ ನೀಡಿದ್ದು, ಮಠದಿಂದ ಅಕ್ಕಿಯನ್ನು ಸಾಲವಾಗಿ ನೀಡಿದ್ದು ನಿಜ ಎಂದಿದ್ದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅನ್ನಭಾಗ್ಯ ನಂತರ ಕ್ಷೀರಭಾಗ್ಯಕ್ಕೆ ಕುತ್ತು: ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲು ಯತ್ನ

ಸಮಯಕ್ಕೆ ಸರಿಯಾಗಿ ಅಕ್ಕಿ ಪೂರೈಕೆ ಆಗಿಲ್ಲ. ಹೀಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಳೆದ 2-3 ತಿಂಗಳಿನಿಂದ ಅಕ್ಕಿಯನ್ನು ಸಾಲವಾಗಿ ಪಡೆಯುತ್ತಿತ್ತು. ಸುಮಾರು 80 ಚೀಲ ಅಕ್ಕಿಯನ್ನು ಶ್ರೀಮಠ ಸಾಲವಾಗಿ ನೀಡಿದೆ. ಬಿಸಿಎಂ ಹಾಸ್ಟೆಲ್​ಗಳಿಗೆ ಮಠದಿಂದ ಅಕ್ಕಿ ಸಾಲವಾಗಿ ಕೊಟ್ಟಿರುವುದು ನಿಜ. ಕಳೆದ ಎರಡು ಮೂರು ತಿಂಗಳ ಹಿಂದೆ ಅಕ್ಕಿ ಕೊಟ್ಟಿದ್ದೇವೆ. ಬಿಸಿಎಂ ಹಾಸ್ಟೆಲ್, ಶಾಲೆಗಳಿಗೆ ಅಕ್ಕಿ ಪೂರೈಕೆ ವಿಳಂಬವಾಗಿ ಮಠದಿಂದ ಪಡೆದುಕೊಂಡಿದ್ದಾರೆ. ಹಲವು ಬಾರಿ ಸಾಲ ತೆಗೆದುಕೊಂಡು ಹೋಗಿದ್ದಾರೆ. ನಮಗೆ ಅದರ ಲೆಕ್ಕ ಇಲ್ಲ. ಅಕ್ಕಿ ತೆಗೆದುಕೊಂಡು ಹೋಗಿರುವುದು ಮಾತ್ರ ಗ್ಯಾರಂಟಿ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್