AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವ ಪ್ರಯಕ್ತ ಸಿದ್ದಗಂಗಾ ಮಠದ ಹತ್ತು ಸಾವಿರ ಮಕ್ಕಳಿಂದ ಕನ್ನಡ ಹಾಡುಗಳ ಗಾಯನ‌

ಬಾರಿಸು ಕನ್ನಡ ಡಿಂಡಿಮವಾ, ಕವಿ ನಿಸಾರ್ ಅಹಮದ್ ರಚಿಸಿರುವ ನಿತ್ಯೋತ್ಸವದ ಜೋಗದ ಸಿರಿ ಬೆಳಕಿನಲ್ಲಿ ಹಾಡು ಹಾಗೂ ವರನಟ ಡಾ ರಾಜ್ ಕುಮಾರ್ ಹಾಡಿರುವ ಹುಟ್ಟಿದರೇ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎನ್ನುವ ಹಾಡನ್ನ ಮಠದ ವಿದ್ಯಾರ್ಥಿಗಳು ಹಾಡಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಯಕ್ತ ಸಿದ್ದಗಂಗಾ ಮಠದ ಹತ್ತು ಸಾವಿರ ಮಕ್ಕಳಿಂದ ಕನ್ನಡ ಹಾಡುಗಳ ಗಾಯನ‌
ಸಿದ್ದಗಂಗಾ ಮಠದ ಹತ್ತು ಸಾವಿರ ಮಕ್ಕಳಿಂದ ಕನ್ನಡ ಹಾಡುಗಳ ಗಾಯನ‌
TV9 Web
| Edited By: |

Updated on: Oct 28, 2021 | 2:06 PM

Share

ತುಮಕೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 66 ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಗೀತೆಗಳ ಗಾಯನವನ್ನ ಸರ್ಕಾರದ ನಿರ್ದೇಶನ ಮೇರೆಗೆ ತುಮಕೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ತುಮಕೂರಿನ ಪ್ರಸಿದ್ಧ ಕ್ಯಾತ್ಸಂದ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಕಾರ್ಯಕವನ್ನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು ಹತ್ತು ಸಾವಿರ ಮಕ್ಕಳು ಭಾಗಿಯಾಗಿ ಮೂರು ಕನ್ನಡ ಹಾಡುಗಳ ಗಾಯನ‌ ಮಾಡಿದ್ದಾರೆ.

ಬಾರಿಸು ಕನ್ನಡ ಡಿಂಡಿಮವಾ, ಕವಿ ನಿಸಾರ್ ಅಹಮದ್ ರಚಿಸಿರುವ ನಿತ್ಯೋತ್ಸವದ ಜೋಗದ ಸಿರಿ ಬೆಳಕಿನಲ್ಲಿ ಹಾಡು ಹಾಗೂ ವರನಟ ಡಾ ರಾಜ್ ಕುಮಾರ್ ಹಾಡಿರುವ ಹುಟ್ಟಿದರೇ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎನ್ನುವ ಹಾಡನ್ನ ಮಠದ ವಿದ್ಯಾರ್ಥಿಗಳು ಹಾಡಿದ್ದಾರೆ. ಏಕಕಾಲದಲ್ಲಿ ಮಠದ ವಿದ್ಯಾರ್ಥಿಗಳು ಗಾಯನ ಮಾಡಿದ ಹಿನ್ನಲೆಯಲ್ಲಿ ಕೇಳಲು ಹಾಗೂ ನೋಡಲು ಇಂಪಾಗಿತ್ತು. ಕನ್ನಡ ರಾಜ್ಯೋತ್ಸವ ಸಲುವಾಗಿ ಮಕ್ಕಳಿಗೆ ಈ‌ ಕಾರ್ಯಕ್ರಮ ಮತ್ತಷ್ಟು ಉರುಪು ತಂದಂತಿತ್ತು. ಇನ್ನೂ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರು ಶ್ರೀ ಸಿದ್ದಲಿಂಗ ಶ್ರೀಗಳು, ಡಿಸಿ ವೈಎಸ್ ಪಾಟೀಲ್ ಎಸ್ ಪಿ ರಾಹುಲ್ ಕುಮಾರ್, ಜಿಪಂ ಸಿಇಒ ವಿದ್ಯಾಕುಮಾರಿ, ಶಾಸಕ ಜಿಬಿ ಜ್ಯೋತಿ ಗಣೇಶ್ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು, ಶಿಕ್ಷಕರು ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

tmk kannada song singing 1

ಸಿದ್ದಗಂಗಾ ಮಠದ ಹತ್ತು ಸಾವಿರ ಮಕ್ಕಳಿಂದ ಕನ್ನಡ ಹಾಡುಗಳ ಗಾಯನ‌

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು; ಏನೇನಿದೆ ನಿಯಮಗಳು?

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ