ತುಮಕೂರು ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ, ಸಚಿವ ಮಾಧುಸ್ವಾಮಿಯವರಿಂದ ವಿಶ್ವ ಜ್ಯೋತಿ ಪುಸ್ತಕ ಬಿಡುಗಡೆ

TV9kannada Web Team

TV9kannada Web Team | Edited By: Ayesha Banu

Updated on: Jan 21, 2023 | 1:32 PM

ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತುಮಕೂರು ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ, ಸಚಿವ ಮಾಧುಸ್ವಾಮಿಯವರಿಂದ ವಿಶ್ವ ಜ್ಯೋತಿ ಪುಸ್ತಕ ಬಿಡುಗಡೆ
ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸ್ಮರಣೆ

ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಜೊತೆ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಎಸ್​​.ಟಿ.ಸೋಮಶೇಖರ್, ವಿ.ಸೋಮಣ್ಣ ಸೇರಿ ಹಲವರು ಭಾಗಿಯಾಗಿದ್ದರು.

ಇನ್ನು ಸಿದ್ದಗಂಗಾ ಮಠಕ್ಕೆ ಬಿಎಲ್ ಸಂತೋಷ್, ವಸತಿ ಸಚಿವ ವಿ ಸೋಮಣ್ಣ‌, ಬಿವೈ ವಿಜಯೇಂದ್ರ‌ ಹಾಗೂ ಸಚಿವ ಬಿ.ಸಿ. ನಾಗೇಶ್ ಕೂಡ ಆಗಮಿಸಿದ್ದಾರೆ. ಇನ್ನು ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಶಿವಕುಮಾರಶ್ರೀಗಳ ಪುಣ್ಯ ಸ್ಮರಣೆಯಲ್ಲಿ ಭಾಗಿಯಾಗಲು ಬಂದಿದ್ದೇನೆ. ಫೆಬ್ರವರಿ ತಿಂಗಳಿನಲ್ಲಿ ಶಿವಕುಮಾರ ಶ್ರೀಗಳಿಗೆ ಗೌರವ ಸಲ್ಲಿಸಿ ಸರ್ಕಾರದಿಂದ ದಾಸೋಹ ದಿನ ಆಚರಿಸಲಾಗುತ್ತೆ ಎಂದರು. ಇದೇ ವೇಳೆ ಶಿವಕುಮಾರ ಶ್ರೀಗಳ ಪುತ್ಥಳಿ ನಿರ್ಮಾಣ ಕಾಮಗಾರಿ ಸ್ಥಗಿತ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಮೊನ್ನೆ ಶ್ರೀಗಳ ಹುಟ್ಟೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಶೀಘ್ರದಲ್ಲಿ ಕಾಮಗಾರಿ ಮತ್ತೆ ಆರಂಭಿಸಲಾಗುವುದು ಎಂದರು.

Basavaraj bommai

ಮತ್ತೊಂದೆಡೆ ಸಿದ್ಧಗಂಗಾ ಮಠದ ಗೋಸಲ ಸಿದ್ದೇಶ್ವರ ರಂಗಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಲ್​.ಸಂತೋಷ್, ಸಚಿವರಾದ ಆರಗ ಜ್ಞಾನೇಂದ್ರ, ಮಾಧುಸ್ವಾಮಿ, ಎಸ್​​.ಟಿ.ಸೋಮಶೇಖರ್, ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ಭಗವಂತ್ ಖೂಬಾ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಸೇರಿ ಹಲವರು ಭಾಗಿಯಾಗಲಿದ್ದಾರೆ.

ವಿಶ್ವ ಜ್ಯೋತಿ ಪುಸ್ತಕ ಬಿಡುಗಡೆ ಮಾಡಿದ ಸಚಿವ ಮಾಧುಸ್ವಾಮಿ

ಶಿವಕುಮಾರ ಸ್ವಾಮೀಜಿ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಚಿವ ಮಾಧುಸ್ವಾಮಿ ವಿಶ್ವ ಜ್ಯೋತಿ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಶಿವಕುಮಾರ ಶ್ರೀಗಳ ಕುರಿತ ಲೇಖನ ಸಂಗ್ರಹ ಪುಸ್ತಕ ಇದಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada