ಉಕ್ರೇನ್ ಮೇಲೆ ರಷ್ಯಾ ದಾಳಿಯಿಂದ ಅತಂತ್ರವಾದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಸಿದ್ದಲಿಂಗ ಸ್ವಾಮೀಜಿ ನಿರ್ಧಾರ
ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಯಿಂದ ವಿದ್ಯಾರ್ಥಿಗಳು ಅತಂತ್ರವಾಗಿದ್ದಾರೆ. ಹೀಗಾಗಿ ಸಿದ್ಧಗಂಗಾ ಮಠ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಿದೆ. ಸಿದ್ಧಗಂಗಾ ಮೆಡಿಕಲ್ ಕಾಲೇಜಿನಲ್ಲಿ ಉಚಿತ ವಿದ್ಯಾಭ್ಯಾಸಕ್ಕೆ ಅವಕಾಶ ನೀಡಲು ಮುಂದಾಗಿದೆ.
ತುಮಕೂರು: ವೈದ್ಯರಾಗುವ (Doctor) ಕನಸು ಹೊತ್ತಿ ರಾಜ್ಯದ ವಿದ್ಯಾರ್ಥಿಗಳು ಉಕ್ರೇನ್ (Ukraine) ದೇಶಕ್ಕೆ ತೆರಳಿದ್ದರು. ಆದರೆ ವಿದ್ಯಾರ್ಥಿಗಳ ಕನಸಿಗೆ ರಷ್ಯಾ- ಉಕ್ರೇನ್ ನಡುವಿನ ಯುದ್ಧ ಕೊಳ್ಳಿ ಇಟ್ಟಿದೆ. ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಉಕ್ರೇನ್ನಿಂದ ಮರಳಿ ತಾಯ್ನಾಡಿಗೆ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳ ಮುಂದಿನ ಭವಿಷ್ಯವೇನು? ಎಂಬ ಪ್ರಶ್ನೆ ಕಾಡುತ್ತಿದೆ. ಈ ಬಗ್ಗೆ ಹಲವರು ಧ್ವನಿ ಎತ್ತಿದ್ದಾರೆ. ಚರ್ಚೆಗಳು ಕೂಡಾ ನಡೆಯುತ್ತಿವೆ. ಈ ಎಲ್ಲದರ ನಡುವೆ ತುಮಕೂರು ಸಿದ್ಧಗಂಗಾ ಮಠ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾಗಲು ಮುಂದಾಗಿದೆ.
ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಯಿಂದ ವಿದ್ಯಾರ್ಥಿಗಳು ಅತಂತ್ರವಾಗಿದ್ದಾರೆ. ಹೀಗಾಗಿ ಸಿದ್ಧಗಂಗಾ ಮಠ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಿದೆ. ಸಿದ್ಧಗಂಗಾ ಮೆಡಿಕಲ್ ಕಾಲೇಜಿನಲ್ಲಿ ಉಚಿತ ವಿದ್ಯಾಭ್ಯಾಸಕ್ಕೆ ಅವಕಾಶ ನೀಡಲು ಮುಂದಾಗಿದೆ. ಉಕ್ರೇನ್ನಲ್ಲಿ ಎಂಬಿಬಿಎಸ್ ಓದುತ್ತಿದ್ದ 13 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಸೂಚನೆ ನೀಡಿದ್ದಾರೆ. ಜೊತೆಗೆ ಎಷ್ಟೇ ವಿದ್ಯಾರ್ಥಿಗಳು ಬಂದರು ಶಿಕ್ಷಣ ಕೊಡುವುದಾಗಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ, ಉಕ್ರೇನ್ ಯುದ್ಧದಿಂದ ಭಾರತೀಯ ಮಕ್ಕಳಿಗೆ ತೀರಾ ತೊಂದರೆಯಾಗಿದೆ. ಯುದ್ಧದ ವೇಳೆ ಉಕ್ರೇನ್ನಲ್ಲಿದ್ದ ಭಾರತೀಯರನ್ನು ಕರೆತರಲು ಸರ್ಕಾರ ಹೆಚ್ಚು ಶ್ರಮ ವಹಿಸಿದೆ. ಮಕ್ಕಳು ವಾಪಸ್ ಆದ ಬಳಿಕ ಅವರ ಭವಿಷ್ಯ ಏನು? ಎಂಬ ಚಿಂತೆ ಹೆಚ್ಚಾಗಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿದೆ. ಎಷ್ಟೇ ವಿದ್ಯಾರ್ಥಿಗಳು ಬಂದರೂ ಶಿಕ್ಷಣ ನೀಡಲಾಗುತ್ತದೆ ಎಂದಿದ್ದಾರೆ.
ಇದನ್ನೂ ಓದಿ
Basava Jayanti 2022: ಇಂದು ಬಸವ ಜಯಂತಿ; ಕಾಯಕವೇ ಕೈಲಾಸ ಎನ್ನುತ್ತ ಸಕಲರಿಗೂ ಮಾದರಿಯಾಗಿದ್ದ ಬಸವಣ್ಣ
ಅಬ್ಬಬ್ಬಾ.. ಮದುವೆಯಲ್ಲಿ ಡ್ಯಾನ್ಸ್ ಮಾಡೋಕೆ ಶಾರುಖ್, ಸಲ್ಮಾನ್, ಹೃತಿಕ್ ಪಡೆಯುವ ಸಂಭಾವನೆ ಇಷ್ಟೊಂದಾ?
Published On - 9:50 am, Tue, 3 May 22