ಶಿರಾ: ಕಳೆಪೆ ಗುಣಮಟ್ಟದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪ್ರೆಸಿಡೆನ್ಸಿ ಖಾಸಗಿ ವಸತಿ ಶಾಲೆಯ ಹಾಸ್ಟೆಲ್ನಲ್ಲಿ ಊಟ ಮಾಡಿದ 30 ರಿಂದ 40 ವಿದ್ಯಾರ್ಥಿಗಳು ವಾಂತಿ ಮತ್ತು ಭೇದಿಯಿಂದ ಅಸ್ವಸ್ಥರಾಗಿದ್ದಾರೆ. ಕಲುಷಿತ ಆಹಾರ ಸೇವನೆಯಿಂದಾಗಿ ಅವರು ಅಸ್ವಸ್ಥರಾಗಿದ್ದಾರೆ ಎಂದು ಶಂಕಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಿರಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ತುಮಕೂರು, ಫೆಬ್ರವರಿ 19: ಹಾಸ್ಟೆಲ್ನಲ್ಲಿ ಊಟಮಾಡಿದ್ದ 30 ರಿಂದ 40 ವಿದ್ಯಾರ್ಥಿಗಳು (Student) ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಶಿರಾ ಪಟ್ಟಣದ ವಸತಿ ಶಾಲೆಯಲ್ಲಿ ನಡೆದಿದೆ. ಶಿರಾದ ಪ್ರೆಸಿಡೆನ್ಸಿ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕಲುಷಿತ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಶಿರಾ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಇತ್ತೀಚೆಗೆ ಮಂಗಳೂರು ಹೊರವಲಯದ ವಲಚ್ಚಿಲ್ ಬಳಿಯ ಶ್ರೀನಿವಾಸ ಕಾಲೇಜಿನಲ್ಲಿ ಹಾಸ್ಟೆಲ್ ಊಟ ಮಾಡಿದ್ದ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಘಟನೆ ನಡೆದಿತ್ತು. ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವಿನಿಂದ ಒದ್ದಾಡಿದ್ದರು.
ಇದನ್ನೂ ಓದಿ: ಆನೇಕಲ್: ಇಲಿ ಬಿದ್ದ ಪಲ್ಯ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ
ಬಳಿಕ ವಿದ್ಯಾರ್ಥಿಗಳನ್ನು ಮಂಗಳೂರು ಮತ್ತು ತುಂಬೆಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಿದ್ದ ಹುಳ ಊಟವನ್ನು ಸೇವಿಸಿದ್ದರಿಂದಾಗಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಶಂಕೆ ವ್ಯಕ್ತವಾಗಿತ್ತು.
ಸರ್ಕಾರಿ ಶಾಲೆಗೆ ಪೂರೈಕೆಯಾಗುವ ಹುಳು, ನುಸಿ ಹತ್ತಿರುವ ಆಹಾರ ಧಾನ್ಯಗಳು
ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಧ್ಯಾಹ್ನದ ಬಿಸಿ ಊಟಕ್ಕೆ ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುಧಾನಿತ ಶಾಲೆಗಳ ಮಕ್ಕಳು ಸೇರಿ ಒಟ್ಟು ಎರಡು ಲಕ್ಷ ಎಂಟು ಸಾವಿರ ಮಕ್ಕಳಿಗೆ ಪ್ರತಿನಿತ್ಯ ಮಧ್ಯಾಹ್ನದ ಬಿಸಿ ಊಟವನ್ನು ನೀಡಲಾಗುತ್ತದೆ. ಜಿಲ್ಲೆಯ ಬಹುತೇಕ ಕಡೆ ಶಾಲೆಯಲ್ಲಿಯೇ ಆಹಾರವನ್ನು ತಯಾರು ಮಾಡಿ ನೀಡಲಾಗುತ್ತದೆ. ಆದರೆ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟವನ್ನು ಕಷ್ಟಪಟ್ಟು ತಿನ್ನುವಂತಾಗಿದೆ. ಇದಕ್ಕೆ ಕಾರಣ, ಅನ್ನ, ಸಾರಿನಲ್ಲಿ ಹುಳು, ನುಸಿ ಬರ್ತಿರೋದು.
ಇದನ್ನೂ ಓದಿ: ಬೆಂಗಳೂರು ವಿವಿ ಹಾಸ್ಟೆಲ್ನಲ್ಲಿ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥ: ರಸ್ತೆ ತಡೆದು ಧರಣಿ
ಜಿಲ್ಲೆಯ ಬಹುತೇಕ ಶಾಲೆಯಲ್ಲಿ ಅಡುಗೆಯಲ್ಲಿ ನುಸಿ, ಹುಳುಗಳು ಬಂದಿವೆ. ಇದಕ್ಕೆ ಕಾರಣ, ಶಾಲೆಗಳಿಗೆ ಪೂರೈಕೆಯಾಗುತ್ತಿರುವ ಕಳಪೆ ಆಹಾರ ಧಾನ್ಯಗಳು. ಆಹಾರ ಧಾನ್ಯಗಳನ್ನು ಪ್ರತಿ ತಿಂಗಳು ಆಯಾ ಶಾಲೆಗೆ ಬೇಕಾಗುವಷ್ಟು ಸರಬರಾಜು ಮಾಡಲಾಗುತ್ತದೆ. ಜಿಲ್ಲೆಯ ವಿವಿಧ ಗೂಡೌನ್ ಗಳಿಂದ ಅಕ್ಕಿ ಪೂರೈಕೆಯಾದ್ರೆ, ತೊಗರಿಬೇಳೆ, ಎಣ್ಣೆ ಸೇರಿದಂತೆ ಬೇರೆ ಪದಾರ್ಥಗಳು ಟೆಂಡರ್ ಪಡೆಯುವ ಏಜನ್ಸಿಗಳು ಶಾಲೆಗೆ ಪೂರೈಗೆ ಮಾಡುತ್ತವೆ. ಬಂದಿದ್ದ ಕಳಪೆ ಆಹಾರ ಧಾನ್ಯಗಳನ್ನು ಸ್ವಚ್ಚಗೊಳಿಸಿ, ಅಡುಗೆ ಮಾಡಿ ನೀಡ್ತಿದ್ದಾರೆ. ಆದರು ಕೂಡ ನುಸಿ, ಹುಳುಗಳು ಆಹಾರದಲ್ಲಿ ಪತ್ತೆಯಾಗುತ್ತಿದ್ದವು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:20 pm, Wed, 19 February 25