ಶ್ರೀ ಸಿದ್ದಗಂಗಾ ಮಠದಲ್ಲಿ ಸಂಕ್ರಾತಿ ಸಡಗರ; ಎಳ್ಳು-ಬೆಲ್ಲ ಇಟ್ಟು ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಅಲಂಕಾರ

ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಹೀಗಾಗಿ ಶ್ರೀಮಠದ ಮಕ್ಕಳಿಗೆ ಎಳ್ಳು-ಬೆಲ್ಲ ನೀಡಿ ಸಂಕ್ರಾಂತಿಯನ್ನು ಆಚರಣೆ ಮಾಡಲಾಗಿದೆ.

ಶ್ರೀ ಸಿದ್ದಗಂಗಾ ಮಠದಲ್ಲಿ ಸಂಕ್ರಾತಿ ಸಡಗರ; ಎಳ್ಳು-ಬೆಲ್ಲ ಇಟ್ಟು ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಅಲಂಕಾರ
ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿದೆ
Follow us
TV9 Web
| Updated By: preethi shettigar

Updated on:Jan 15, 2022 | 11:36 AM

ತುಮಕೂರು: ಇಂದು ರಾಜ್ಯದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ (Makar Sankranti 2022) ಸಂಭ್ರಮ ಕಳೆಗಟ್ಟಿದೆ. ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಶ್ರೀ ಸಿದ್ದಗಂಗಾ ಮಠದಲ್ಲಿ ಕೂಡ ಸಂಕ್ರಾಂತಿ ಹಬ್ಬವನ್ನು (Sankranti 2022) ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿದೆ. ಎಳ್ಳು, ಬೆಲ್ಲ, ಕಬ್ಬು, ಕಡಲೆಕಾಯಿ, ಅವರೆಕಾಯಿ ಸೇರಿದಂತೆ ಸಾಂಪ್ರದಾಯಿಕ ತಿನಿಸುಗಳನ್ನು ಇಟ್ಟು ಗದ್ದುಗೆಗೆ ವಿಶೇಷ ಅಲಂಕಾರ ಮಾಡಲಾಗಿದೆ. ಸಂಕ್ರಮಣ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೂ ವಿಶೇಷ ಪೂಜೆ ಹೋಮ-ಹವನ ನೆರವೇರಿಸಲಾಗಿದೆ. ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಎಂದಿನಂತೆ ಶಿವ ಪೂಜೆ ನೆರವೇರಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ವೀಕೆಂಡ್ ಕರ್ಫ್ಯೂ (Weekend curfew) ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಹೀಗಾಗಿ ಶ್ರೀಮಠದ ಮಕ್ಕಳಿಗೆ ಎಳ್ಳು-ಬೆಲ್ಲ ನೀಡಿ ಸಂಕ್ರಾಂತಿಯನ್ನು ಆಚರಣೆ ಮಾಡಲಾಗಿದೆ.

ಮಕರ ಸಂಕ್ರಾಂತಿ ಮಹತ್ವ: ಈ ದಿನ ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯನ ಉತ್ತರಾಯಣ ಪ್ರಾರಂಭವಾಗುತ್ತದೆ. ಕರ್ಕಸಂಕ್ರಾಂತಿಯಿಂದ ಮಕರ ಸಂಕ್ರಾಂತಿಯ ವರೆಗಿನ ಕಾಲವನ್ನು ‘ದಕ್ಷಿಣಾಯನ’ ಎನ್ನುತ್ತಾರೆ. ದಕ್ಷಿಣಾಯನ ಕಾಲದಲ್ಲಿ ಮೃತನಾದ ವ್ಯಕ್ತಿಯು, ಉತ್ತರಾಯಣದಲ್ಲಿ ಮೃತನಾದ ವ್ಯಕ್ತಿಗಿಂತ ದಕ್ಷಿಣಲೋಕಕ್ಕೆ (ಯಮಲೋಕಕ್ಕೆ) ಹೋಗುವ ಸಾಧ್ಯತೆ ಹೆಚ್ಚಿರುತ್ತದೆ.

ಸಾಧನೆಯ ದೃಷ್ಟಿಯಿಂದ ಮಹತ್ವ: ಈ ದಿನ ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗಿನ ವಾತಾವರಣವು ಅಧಿಕ ಚೈತನ್ಯಮಯವಾಗಿರುವುದರಿಂದ ಸಾಧನೆಯನ್ನು ಮಾಡುವವರಿಗೆ ಈ ಸಮಯ ಚೈತನ್ಯದ ಲಾಭವಾಗುತ್ತದೆ.

ಹಬ್ಬವನ್ನು ಆಚರಿಸುವ ಪದ್ಧತಿ: ಮಕರಸಂಕ್ರಾಂತಿಯ ಕಾಲದಲ್ಲಿ ತೀರ್ಥಸ್ನಾನವನ್ನು ಮಾಡುವುದರಿಂದ ಮಹಾಪುಣ್ಯವು ದೊರೆಯುವುದು. ‘ಮಕರಸಂಕ್ರಾಂತಿಯ ದಿನ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗಿನ ಕಾಲವು ಪುಣ್ಯಕಾಲವಾಗಿರುತ್ತದೆ. ಈ ಕಾಲದಲ್ಲಿ ತೀರ್ಥಸ್ನಾನಕ್ಕೆ ವಿಶೇಷ ಮಹತ್ವವಿದೆ. ಗಂಗಾ, ಯಮುನಾ, ಗೋದಾವರಿ, ಕೃಷ್ಣಾ ಮತ್ತು ಕಾವೇರಿ ನದಿಗಳ ದಡದಲ್ಲಿರುವ ಕ್ಷೇತ್ರದಲ್ಲಿ ಸ್ನಾನ ಮಾಡಿದರೆ ಮಹಾಪುಣ್ಯವು ಲಭಿಸುತ್ತದೆ.’

ಇದನ್ನೂ ಓದಿ:

ಶಬರಿಮಲೆ ಪೊನ್ನಂಬಲಮೇಡುನಲ್ಲಿ ಬೆಳಗಿದ ಮಕರ ಜ್ಯೋತಿ; ದರ್ಶನ ಪಡೆದ ಅಯ್ಯಪ್ಪ ಭಕ್ತರು

Makar Sankranti: ಮಕರ ಸಂಕ್ರಾಂತಿ ಹಬ್ಬದ ಮಹತ್ವ ಮತ್ತು ಈ ವರ್ಷ ಸಂಕ್ರಾಂತಿ ಜನವರಿ 15 ಏಕೆ?

Published On - 11:34 am, Sat, 15 January 22