AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SR Srinivas: ಯಾವ ಗೊಡ್ಡು ಬೆದರಿಕೆಗಳಿಗೂ ಜಗ್ಗಲ್ಲ: ಎಸ್​ಆರ್ ಶ್ರೀನಿವಾಸ್

ಈ ಬಾರಿಯ ಚುನಾವಣೆಯಲ್ಲಿ ದುಡ್ಡು ಕೆಲಸ ಮಾಡುತ್ತಾ ಇಲ್ಲಾ, ಜನ ಬೆಂಬಲ ಕೆಲಸ ಮಾಡುತ್ತಾ ನೋಡೇ ಬಿಡೋಣ ಎಂದು ಪ್ರತಿಸ್ಪರ್ಧಿಗಳಿಗೆ ಮಾಜಿ ಸಚಿವ ಎಸ್​. ಆರ್​ ಶ್ರೀನಿವಾಸ್​ ಸವಾಲು ಎಸೆದಿದ್ದಾರೆ.

SR Srinivas: ಯಾವ ಗೊಡ್ಡು ಬೆದರಿಕೆಗಳಿಗೂ ಜಗ್ಗಲ್ಲ: ಎಸ್​ಆರ್ ಶ್ರೀನಿವಾಸ್
ಎಸ್ .ಆರ್ ಶ್ರೀನಿವಾಸ್Image Credit source: news18.com
ಗಂಗಾಧರ​ ಬ. ಸಾಬೋಜಿ
|

Updated on:Apr 07, 2023 | 10:45 PM

Share

ತುಮಕೂರು: ಈ ಬಾರಿಯ ಚುನಾವಣೆಯಲ್ಲಿ ದುಡ್ಡು ಕೆಲಸ ಮಾಡುತ್ತಾ ಇಲ್ಲಾ, ಜನ ಬೆಂಬಲ ಕೆಲಸ ಮಾಡುತ್ತಾ ನೋಡೇ ಬಿಡೋಣ ಎಂದು ಪ್ರತಿಸ್ಪರ್ಧಿಗಳಿಗೆ ಮಾಜಿ ಸಚಿವ ಎಸ್​. ಆರ್​ ಶ್ರೀನಿವಾಸ್ (SR Srinivas) ಸವಾಲು ಎಸೆದಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಸ್ ಆರ್ ಶ್ರೀನಿವಾಸ್ ಅವರು, ಮನೆ ಮನೆ ಪ್ರಚಾರ ಕಾರ್ಯ ಆರಂಭಿಸಿದ್ದು, ಕ್ಷೇತ್ರದ ಕಾರ್ಯಕರ್ತರು ಮತ್ತು ಮತದಾರರನ್ನು ಉದ್ದೇಶಿಸಿ ಮಾತನಾಡುತ್ತ, ಈ ಬಾರಿಯ ಚುನಾವಣೆಯಲ್ಲಿ ಹಣ ಕೆಲಸ ಮಾಡುತ್ತಾ ಇಲ್ಲಾ, ಜನ ಬೆಂಬಲ ಕೆಲಸ ಮಾಡುತ್ತಾ ನೋಡಿಯೇ ಬಿಡೋಣ ಎಂದು ಪ್ರತಿಸ್ಪರ್ಧಿ ನಾಗರಾಜು ಅವರಿಗೆ ಸವಾಲು ಹಾಕಿದ್ದಾರೆ.

ಗುಬ್ಬಿ ಕ್ಷೇತ್ರದ ಮತದಾರರು ಪ್ರಜ್ಞಾವಂತರು. ಅವರು ಹಣ, ಹೆಂಡ ಇತ್ಯಾದಿ ಆಮೀಷಗಳಿಗೆ ಸೊಪ್ಪು ಹಾಕುವುದಿಲ್ಲ. ನಾನೇನು, ಎಂತಹ ವ್ಯಕ್ತಿ ಎಂಬುದು ಕ್ಷೇತ್ರದ ಜನರಿಗೆ ಗೊತ್ತಿದೆ. ನಾನು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ. ಏನಿದ್ದರೂ ನನಗೆ ಮತ ನೀಡಿ ಆಶೀರ್ವದಿಸುವ ಜನತೆಗೆ ಹಾಗೂ ಕಾರ್ಯಕರ್ತರಿಗೆ ಮಾತ್ರ ನಾನು ತಲೆ ಬಾಗುವುದು. ಮೇ 13ರಂದು ಹೊರಬೀಳಲಿರುವ ಫಲಿತಾಂಶ, ಮತದಾರರಿಗೆ ಹಣ, ಹೆಂಡದ ಆಮೀಷ ಒಡ್ಡುವ ನನ್ನ ಪ್ರತಿಸ್ಪರ್ಧಿ ನಾಗರಾಜು ಅವರಿಗೆ ತಕ್ಕ ಪಾಠ ಆಗಲಿದೆ ಎಂದು ಅವರು ಟೀಕಿಸಿದರು.

ಈ ವೇಳೆ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ಜೊತೆಗಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಆನಂದ್ ಸಭೆ ವಿಫಲ; ಪಕ್ಷೇತರ ಅಭ್ಯರ್ಥಿಯಾಗುವ ಸುಳಿವು ನೀಡಿದ ವೈಎಸ್‌ವಿ ದತ್ತಾ

ಎಸ್.ಆರ್.ಶ್ರೀನಿವಾಸ್ ರಾಜೀನಾಮೆ  

ಜೆಡಿಎಸ್​ ಶಾಸಕ ಎಸ್.ಆರ್.ಶ್ರೀನಿವಾಸ್​​ ಅವರು ಇತ್ತೀಚೆಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ವಿಧಾನಸೌಧದ ಸ್ಪೀಕರ್​ ಕಚೇರಿಗೆ ತೆರಳಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಕೆಲವೇ ದಿನಗಳಲ್ಲಿ ಕಾಂಗ್ರೆಸ್​ ಪಕ್ಷ ಸೇರಲು ಸಜ್ಜಾಗಿದ್ದರು. ರಾಜೀನಾಮೆ ನೀಡಿದ ನಂತರ ಮಾತನಾಡಿದ ಶ್ರೀನಿವಾಸ್, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.

ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಎಸ್.ಆರ್.ಶ್ರೀನಿವಾಸ್ ರಾಜೀನಾಮೆ; ಕಾಂಗ್ರೆಸ್ ಸೇರಲು ಸಜ್ಜು

ಮಾರ್ಚ್ 31ಕ್ಕೆ ನಾನು ಅಧೀಕೃತವಾಗಿ ಕಾಂಗ್ರೆಸ್ ಸೇರುತ್ತೇನೆ. ಶಿವಲಿಂಗೇಗೌಡ, ಎಟಿ ರಾಮಸ್ವಾಮಿ ಕೂಡ ಕಾಂಗ್ರೆಸ್ ಪಕ್ಷ ಸೇರುತ್ತಾರೆ. ಗುಬ್ಬಿಯಲ್ಲಿ ಎಲ್ಲ ಕಾಂಗ್ರೆಸ್ ನಾಯಕರು ಒಟ್ಟಾಗಿ ಇದ್ದಾರೆ. ಅವರ ಬೆಂಬಲದೊಂದಿಗೆ ಕಾಂಗ್ರೆಸ್​ನಿಂದ ಕಣಕ್ಕಿಳಿದು ಕ್ಷೇತ್ರದಲ್ಲಿ ಮತ್ತೆ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದ್ದರು.

ರಾಜೀನಾಮೆಗೂ ಮುನ್ನ ಮಾತನಾಡಿದ್ದ ಶ್ರೀನಿವಾಸ್, ತುಂಬಾ ದುಃಖದಿಂದ ಜೆಡಿಎಸ್ ಪಕ್ಷವನ್ನು ಬಿಡುತ್ತಿದ್ದೇನೆ. ದೇವೆಗೌಡರು ಮಗನಂತೆ ನೋಡಿಕೊಂಡಿದ್ದರು. ಕುಮಾರಸ್ವಾಮಿ ಮತ್ತು ನನ್ನ ಒಡನಾಟ ಸಾಕಷ್ಟು ಆತ್ಮೀಯವಾಗಿತ್ತು. ಅದರೆ ಕಳೆದ ಒಂದೂವರೆ ವರ್ಷದ ಹಿಂದೆ ಯಾರು ಏನು ಹೇಳಿದರೋ ಗೊತ್ತಿಲ್ಲ, ಹೊಸ ಅಭ್ಯರ್ಥಿ ಘೋಷಣೆ ಮಾಡಿದ್ದರು. ಅದರ ಉದ್ದೇಶ ನನಗೆ ಗೊತ್ತಗಲಿಲ್ಲ. ಅವರು ಅಭ್ಯರ್ಥಿ ಘೋಷಣೆ ಮಾಡಿದ ಮೇಲೆ ನಾನು ನನಗೆ ಗೌರವ ಇಲ್ಲದ ಸ್ಥಳದಿಂದ ಹೊರ ಬಂದಿದ್ದೆನೆ ಎಂದಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:45 pm, Fri, 7 April 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ