ಮಧುಗಿರಿಯಲ್ಲಿ ಬುಧವಾರ ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ -ಸಹಕಾರ ಸಚಿವ ಕೆ.ಎನ್.ರಾಜಣ್ಣ
ಮಧುಗಿರಿಯಲ್ಲಿ ನಾಳಿದ್ದು ಬುಧವಾರ ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ನೆರವೇರಲಿದೆ. ಈ ಸಂಬಂಧ ಇಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಪರಮೇಶ್ವರ್ ಮತ್ತು ಕೆ.ಎನ್. ರಾಜಣ್ಣ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಕರ್ನಾಟಕ ಹಾಲು ಮಹಾಮಂಡಲ (KMF) ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಆಯೋಜಿಸಿದೆ. ಕೆಎಂಎಫ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ತುಮಕೂರು, ಸೆಪ್ಟೆಂಬರ್ 4: ತುಮಕೂರು (Tumkur) ಜಿಲ್ಲೆ ಮಧುಗಿರಿ (Madhugiri) ಪಟ್ಟಣದಲ್ಲಿ ಸೆಪ್ಟೆಂಬರ್ 6ರಂದು ಬುಧವಾರ ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ನೆರವೇರಲಿದೆ. ಕ್ಷೀರ ಭಾಗ್ಯ (Ksheera bhagya) ಜಾರಿಯಾಗಿ 10 ವರ್ಷ ಹಿನ್ನೆಲೆಯಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ (KN Rajanna) ಸ್ವಕ್ಷೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಒಂದೂವರೆ ಲಕ್ಷ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಲು ಪ್ಲ್ಯಾನ್ ಮಾಡಲಾಗಿದೆ. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಸಚಿವರು ಭಾಗಿಯಾಗಲಿದ್ದಾರೆ. ದಶಮಾನೋತ್ಸವಕ್ಕೆ ತುಮಕೂರು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆದಿದೆ.
ಈ ಸಂಬಂಧ ಇಂದು ಬೆಳಗ್ಗೆ 11 ಗಂಟೆಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಪರಮೇಶ್ವರ್ ಮತ್ತು ಕೆ.ಎನ್. ರಾಜಣ್ಣ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಕೆಎಂಎಫ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಕರ್ನಾಟಕ ಹಾಲು ಮಹಾಮಂಡಲ (Karnataka Milk Federation -KMF) ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಆಯೋಜಿಸಿದೆ.
ತುಮಕೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ