ತುಮಕೂರು: ವಾಯವ್ಯ ಸಾರಿಗೆ ಬಸ್ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು, 6 ಜನರಿಗೆ ಗಾಯ
ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ವಾಯವ್ಯ ಸಾರಿಗೆ ಬಸ್ ಮೇಲೆ ತುಮಕೂರು ಜಿಲ್ಲೆಯ ಶಿರಾ ಟೋಲ್ ಬಳಿ ತಡರಾತ್ರಿ 1:20 ರ ಸುಮಾರಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಬಸ್ನ ಮುಂಭಾಗದ ಗಾಜು ಸಂಪೂರ್ಣ ಪುಡಿಪುಡಿಯಾಗಿದೆ. ಕಲ್ಲು ತೂರಾಟದಿಂದಾಗಿ 5-6 ಪ್ರಯಾಣಿಕರಿಗೆ ಗಾಯಗಳಾಗಿವೆ.
ತುಮಕೂರು, ಫೆಬ್ರವರಿ 19: ವಾಯವ್ಯ ಸಾರಿಗೆ ಬಸ್ (NWKRTC) ಮೇಲೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಶಿರಾ ಟೋಲ್ (Sira Toll) ಬಳಿ ತಡರಾತ್ರಿ ಘಟನೆ ನಡೆದಿದೆ. ಬಸ್ ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿತ್ತು. ತಡರಾತ್ರಿ 1:20 ರ ಸುಮಾರಿಗೆ ಮಾರ್ಗ ಮಧ್ಯೆ ಶಿರಾ ಟೋಲ್ ಬಳಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಬಸ್ನ ಮುಂಭಾಗದ ಗಾಜು ಸಂಪೂರ್ಣ ಪುಡಿಪುಡಿಯಾಗಿದೆ. ಕಲ್ಲು ತೂರಾಟದಿಂದಾಗಿ 5-6 ಪ್ರಯಾಣಿಕರಿಗೆ ಗಾಯಗಳಾಗಿವೆ. ದೃಷ್ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಶಿರಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುತ್ತಿದೆ