ತುಮಕೂರು: ರಾಷ್ಟ್ರೀಯ ಹೆದ್ದಾರಿ(National Highway)ಯಲ್ಲಿ ಲಾರಿಗಳನ್ನ ತಡೆದು ಹಣ ವಸೂಲಿ ಮಾಡುತ್ತಿದ್ದ ಓರ್ವ ಎಎಸ್ಐ(ASI) ಸೇರಿ ಇಬ್ಬರು ಪೊಲೀಸರನ್ನ ಅಮಾನತು ಮಾಡಲಾಗಿದೆ. ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ, ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯ ಅವರನ್ನ ಅಮಾನತು ಮಾಡಿ ತುಮಕೂರು ಎಸ್.ಪಿ ರಾಹುಲ್ ಕುಮಾರ್ ಶಹಪುರ್ ವಾಡ್ ಆದೇಶ ಹೊರಡಿಸಿದ್ದಾರೆ.
ಶಿರಾ ಟು ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಲಾರಿಗಳನ್ನ ತಡೆದು 200, 300 ರೂಪಾಯಿ ಹಣ ವಸೂಲಿ ಮಾಡುತ್ತಿದ್ದರು. ಈ ವೇಳೆ ಲಾರಿ ಚಾಲಕರಿಂದ ಹಣ ಪಡೆಯುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಅದರಲ್ಲಿ ಹಣ ಪಡೆಯುತ್ತಿದ್ದ ಇಬ್ಬರು ಪೊಲೀಸರಿಗೆ ಕ್ಲಾಸ್ ಸಾರ್ವಜನಿಕರು ತೆಗೆದುಕೊಂಡಿದ್ದರು. ಪೊಲೀಸರು ಹಣ ಪಡೆಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ವರದಿ ಕೊಡುವಂತೆ ಶಿರಾ ಪೊಲೀಸ್ ಇನ್ಸ್ ಪೆಕ್ಟರ್ಗೆ ಸೂಚನೆ ನೀಡಿದ್ದ ತುಮಕೂರು ಎಸ್.ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್. ವರದಿಯಲ್ಲಿ ಪೊಲೀಸರು ಹಣ ಪಡೆಯುವುದು ಸಾಬೀತಾದ ಹಿನ್ನೆಲೆ ಅಮಾನತು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಕರ್ತವ್ಯಲೋಪ: ಆರ್ಡಿಪಿಆರ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್ಗಳು ಅಮಾನತು
2 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್
ಮೈಸೂರು: ಕೊಡಗು ಜಿಲ್ಲೆಯ ಕುಶಾಲನಗರದ ಕಾರ್ಯನಿರ್ವಾಹಕ ಇಂಜಿನಿಯರ್ ಪಿ.ಅಶೋಕ್ ಕುಮಾರ್ ಎಂಬಾತ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಹೌದು 49 ಕಿಲೋ ವ್ಯಾಟ್ ಚಾರ್ಜಿಂಗ್ ಪಾಯಿಂಟ್‌ಗೆ ಅನುಮತಿ ನೀಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಮುಗಂಡ 2 ಲಕ್ಷ ರೂ ಹಣವನ್ನ ಮೈಸೂರಿನ ವಿಜಯನಗರ ನಿವಾಸದಲ್ಲಿ ಪಡೆಯುತ್ತಿದ್ದಾಗ ಎಇಇ ಅಶೋಕ್ ಕುಮಾರ್ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ SP ಸುರೇಶ್ ಬಾಬು ಮಾರ್ಗದರ್ಶನಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, DySP ಪವನ್ ಕುಮಾರ್, ಇನ್ಸ್ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ