ತುಮಕೂರು ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ: 1 ತಿಂಗಳ ಹಸುಗೂಸು, ಬಾಣಂತಿಯನ್ನ ಊರಾಚೆ ಇರಿಸಿದ ಗ್ರಾಮಸ್ಥರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಮತ್ತೆ ಮೌಢ್ಯಾಚರಣೆ ಮುಂದುವರೆದಿದೆ. ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನ ಗ್ರಾಮಸ್ಥರು ಊರಾಚೆ ಇರಿಸಿದ್ದಾರೆ. ಹೆರಿಗೆ ಬಳಿಕ 25 ವರ್ಷದ ಬಾಣಂತಿ ಬಾಲಮ್ಮ ಹಾಗೂ ಒಂದು ತಿಂಗಳ ಮಗುವನ್ನ ಗ್ರಾಮದ ಹೊರಗಿನ ಗುಡಿಸಲಿನಲ್ಲಿರಿಸಿದ್ದಾರೆ. ಗ್ರಾಮಕ್ಕೆ ಶಿರಾ ಜೆಎಂಎಫ್‌ಸಿ ಕೋರ್ಟ್‌ನ ಜಡ್ಜ್‌ ಗೀತಾಂಜಲಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ: 1 ತಿಂಗಳ ಹಸುಗೂಸು, ಬಾಣಂತಿಯನ್ನ ಊರಾಚೆ ಇರಿಸಿದ ಗ್ರಾಮಸ್ಥರು
ಹಸುಗೂಸು, ಬಾಣಂತಿ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 10, 2024 | 3:53 PM

ತುಮಕೂರು, ಫೆಬ್ರವರಿ 10: ಜಿಲ್ಲೆಯಲ್ಲಿ ಮೌಢ್ಯಾಚರಣೆ (Superstition) ಮುಂದುವರೆದಿದೆ. ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನ ಗ್ರಾಮಸ್ಥರು ಊರಾಚೆ ಇರಿಸಿದ್ದಾರೆ. ಹೆರಿಗೆ ಬಳಿಕ 25 ವರ್ಷದ ಬಾಣಂತಿ ಬಾಲಮ್ಮ ಹಾಗೂ ಒಂದು ತಿಂಗಳ ಮಗುವನ್ನ ಗ್ರಾಮದ ಹೊರಗಿನ ಗುಡಿಸಲಿನಲ್ಲಿರಿಸಿದ್ದಾರೆ. ದೂರನ್ನು ಆಧರಿಸಿ ಗ್ರಾಮಕ್ಕೆ ಭೇಟಿ ನೀಡಿದ ಶಿರಾ ಜೆಎಮ್​​ಎಫ್​ಸಿ ನ್ಯಾಯಾಧೀಶೆ ಗೀತಾಂಜಲಿ ಪರಿಶೀಲನೆ ಮಾಡಿದ್ದಾರೆ. ಗ್ರಾಮದಲ್ಲಿ ಮೌಡ್ಯದ ವಿರುದ್ಧ ಜಾಗೃತಿ ಮೂಡಿಸಿ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನು ವಾಪಸ್ ಮನೆಗೆ ಸೇರಿಸಿದ್ದಾರೆ. ಮತ್ತೆ ಘಟನೆ ಮರುಕಳಿಸಿದರೇ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ಸಹ ನೀಡಿದ್ದಾರೆ.

ಮೃತಪಟ್ಟ 1 ತಿಂಗಳ ಕಂದಮ್ಮ 

ಇತ್ತೀಚೆಗೆ ಇದೇ ಗ್ರಾಮದಲ್ಲಿ ಮೌಢ್ಯಕ್ಕೆ 1 ತಿಂಗಳ ಮಗು ಬಲಿಯಾಗಿತ್ತು. ದೇವರಿಗೆ ಸೂತಕ ಆಗುತ್ತೆ ಎಂದು ಬಾಣಂತಿ, ಮಗುವನ್ನು ಊರಿನ ಹೊರಗೆ ಗುಡಿಸಲಲ್ಲಿಟಲಾಗಿತ್ತು. ಮಗುವಿಗೆ ವಿಪರೀತ ಶೀತವಾಗಿದ್ದು ಮಗುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿತ್ತು. ಕುಟುಂಬಸ್ಥರ ಮೂಢನಂಬಿಕೆಗೆ 1 ತಿಂಗಳ ಕಂದಮ್ಮ ಸಾವನ್ನಪ್ಪಿತ್ತು.

ಇದನ್ನೂ ಓದಿ: ಬಾಣಂತಿ, ಶಿಶುವನ್ನು ಊರಿಂದ ಹೊರಗಿಟ್ಟ ಕಾಡುಗೊಲ್ಲ ಕುಟುಂಬ; ನಮ್ಮ ದೇವರಿಗೆ ಸೂತಕ ಆಗಲ್ಲ, ನಾವು ಬಿಟ್ಟುಕೊಳ್ಳಲ್ಲ ಎಂದ ಹಿರಿಯರು

ಸಂಪ್ರದಾಯದ ಹೆಸರಿನಲ್ಲಿ ತಾಯಿ, ಮಗುವಿನ ಜೀವಕ್ಕೆ ಕುತ್ತು ತರುವಂತ ಮೌಡ್ಯಾಚರಣೆ ಮಾಡಲಾಗಿತ್ತು. ಆದರೆ ಮಗುವಿಗೆ ವಿಪರೀತ ಶಿತವಾಗಿ ಪುಟ್ಟ ಕಂದಮ್ಮ ಪ್ರಾಣ ಕಳೆದುಕೊಂಡಿತ್ತು. ತಾಯಿ ಒಡಲ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: ಅಂಟುಜಾಡ್ಯದಂತೆ ಇಂದಿಗೂ ಪ್ರಪಂಚದಾದ್ಯಂತ ಮಹಿಳೆಯರಲ್ಲಿದೆ ಮುಟ್ಟು, ಋತುಚಕ್ರ, ಹೊರಗಾಗುವ ಗೊಡ್ಡು ಸಂಪ್ರದಾಯ -ಫಿಲಿಪೈನ್ಸ್​​ನಲ್ಲಿದೆ ಶಾಕಿಂಗ್​ ಆಚರಣೆ

ಇತ್ತೀಚೆಗ ಇದೇ ಗ್ರಾಮದಲ್ಲಿ ಮುಟ್ಟಾದ ಸಂದರ್ಭದಲ್ಲಿ ಮಹಿಳೆಯರನ್ನ ಗ್ರಾಮದಿಂದ ಹೊರಗಿಟ್ಟು ಮೌಢ್ಯಾಚರಣೆ ನಡೆಸಿರುವುದು ಬೆಳಕಿಗೆ ಬಂದಿತ್ತು. ಗೊಲ್ಲ‌ ಸಮುದಾಯದಲ್ಲಿ ಮತ್ತೆ ಈ ಮೌಢ್ಯಾಚರಣೆ ಕಂಡುಬಂದಿತ್ತು. ಗ್ರಾಮದ ಅಂಗನವಾಡಿ ಶಿಕ್ಷಕಿ ಸುಜಾತ ಹಾಗೂ ಬಿಸಿಯೂಟದ ಕಾರ್ಯಕರ್ತೆ ಸಾವಿತ್ರಮ್ಮ ಜೊತೆಗೆ ಓರ್ವ ಮಹಿಳೆಯನ್ನು ಗ್ರಾಮದಿಂದ ಹೊರಗಿಡಲಾಗಿತ್ತು.

ಋತುಚಕ್ರ ಗೊಡ್ಡುನಂಬಿಕೆ:ಗ್ರಾಮಸ್ಥರಿಗೆ ಛೀಮಾರಿ ಆರತಿ ಎತ್ತಿದ ತಹಶೀಲ್ದಾರ್ ಆರತಿ!

ಗ್ರಾಮಕ್ಕೆ ತಹಶೀಲ್ದಾರ್ ಆರತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಅಂಗನವಾಡಿ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿದ್ದರು. ಇಷ್ಟಾದರೂ ಮತ್ತೆ ಮೌಢ್ಯ ವಾಡಿಕೆಯಂತೆ ಗೋಮೂತ್ರ ಪ್ರೋಕ್ಷಿಸಿ, ಗ್ರಾಮಸ್ಥರು ಆ ಮಹಿಳೆಯರನ್ನು ಅವರವರ ಮನೆಯೊಳಕ್ಕೆ ಬಿಟ್ಟುಕೊಂಡಿದ್ದರು. ಚಿಕ್ಕನೆಟ್ಟಗುಂಟೆ ಗ್ರಾಮಸ್ಥರು ಋತುಚಕ್ರವಾದ ಮಹಿಳೆಯರನ್ನು ಮೂರು ದಿನಗಳ ಕಾಲ ಊರಿನಿಂದ ಹೊರಗಿಡುವ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ