ತುಮಕೂರು, ಅ.03: ಸಿಎಂ ಸಿದ್ದರಾಮಯ್ಯಗೆ (Siddaramaiah) ಮುಡಾ ಕೇಸ್ (MUDA Case) ಸಂಕಷ್ಟ ತಂದಿಟ್ಟಿದೆ. ಸಿಎಂ ರಾಜೀನಾಮೆ ನೀಡಲೇ ಬೇಕು ಎಂದು ವಿಪಕ್ಷ ಒತ್ತಾಯಿಸುತ್ತಿದೆ. ಇದರ ನಡುವೆ ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ್ (Dr G Parameshwar) ಅವರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಇತ್ತ ಪರಮೇಶ್ವರ್ ಗೆ ಸಿಎಂ ಸ್ಥಾನ ಸಿಗಲಿ ಎಂದು ಎಲೆರಾಂಪುರ ಮಠದ ಹನುಮಂತನಾಥ ಸ್ವಾಮಿಜೀ ಅವರು ದಸರಾ ವೇದಿಕೆ ಮೇಲೆ ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ.
ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆದ ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ಸಿಎಂ ಖುರ್ಚಿಗಾಗಿ ಕೂಗು ಎದ್ದಿದೆ. ನನಗೂ ಒಂದು ಆಸೆ ಇದೆ, ನಮ್ಮ ಜಿಲ್ಲೆಗೆ ಸಿಎಂ ಸ್ಥಾನ ಬರುವ ದಿನಗಳು ಬರಲಿ ಎಂದು ಎಲೆರಾಂಪುರ ಮಠದ ಹನುಮಂತನಾಥ ಸ್ವಾಮಿಜೀ ಅವರು ಪರೋಕ್ಷವಾಗಿ ನುಡಿದಿದ್ದಾರೆ.
ಪರಮೇಶ್ವರ್ ಹೆಸರೇಳದೇ ಜಿಲ್ಲೆಗೆ ಸಿಎಂ ಸ್ಥಾನ ಸಿಗಲಿ ಎಂದಿದ್ದಾರೆ. ನಮ್ಮ ಜಿಲ್ಲೆಗೆ ಒಂದು ಅವಕಾಶ ಸಿಗಲಿ ಎಂದು ಸಿಎಂ ಸ್ಥಾನಕ್ಕೆ ಪರಮೇಶ್ವರ್ ಹೆಸರು ಸೂಚಿಸಿದ್ದಾರೆ. ನಮ್ಮ ಜಿಲ್ಲೆಗೂ ಸಿಎಂ ಸ್ಥಾನ ಒದಗಿ ಬರಲಿ, ಯಾರು ಕೂಡ ತಪ್ಪಾಗಿ ಅರ್ಥಮಾಡಿಕೊಳ್ಳಬೇಡಿ. ನಮ್ಮ ಜಿಲ್ಲೆ ಕೂಡ ಸಾಕಷ್ಟು ಕೊಡುಗೆ ಕೊಟ್ಟಿದೆ ಎಂದು ಪರಮೇಶ್ವರ್ ಪಕ್ಕದಲ್ಲಿ ನಿಂತುಕೊಂಡೇ ಸ್ವಾಮಿಜಿ ಹೇಳಿದ್ದಾರೆ.
ಇದನ್ನೂ ಓದಿ: ಜಿಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣಭೈರೇಗೌಡ ಮತ್ತು ಸತೀಶ್ ಜಾರಕಿಹೊಳಿ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ರು. ಲೊಟ್ಟೆಗೊಲ್ಲಹಳ್ಳಿ ಸರ್ವೆ ನಂಬರ್ 10/1 ರಲ್ಲಿ 32 ಗುಂಟೆ ಜಮೀನನ್ನು ಬಿಡಿಎ ನೋಟಿಫೈ ಮಾಡಿತ್ತು. 1977 ಫೆಬ್ರವರಿಯಲ್ಲಿ ಬಿಡಿಎ ಭೂಸ್ವಾಧೀನಕ್ಕೆ ಮೊದಲ ನೊಟಿಫಿಕೇಷನ್ ಹೊರಡಿಸಿತ್ತು. 26 ಫೆಬ್ರವರಿ 2003ರಲ್ಲಿ ಹಾಗೂ 2007ರಲ್ಲಿ ಈ ಜಮೀನನ್ನು ಅಕ್ರಮವಾಗಿ ಕಬಳಿಸಲಾಗಿದೆ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ