AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಶಿಕ್ಷಕ ಅಮಾನತು

ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಿ ಡಿಡಿಪಿಐ ಕೆ.ಜಿ.ರಂಗಯ್ಯ ಆದೇಶ ಹೊರಡಿಸಿದ್ದಾರೆ.

Tumkur: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಶಿಕ್ಷಕ ಅಮಾನತು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Feb 22, 2023 | 10:34 AM

Share

ತುಮಕೂರು: ವಿದ್ಯಾರ್ಥಿನಿಯರಿಗೆ (Students) ಅಶ್ಲೀಲ ಸಂದೇಶ (Obscene Messages) ಕಳುಹಿಸುತ್ತಿದ್ದ ಶಿಕ್ಷಕನನ್ನು (Teacher) ಅಮಾನತು ಮಾಡಿ ಡಿಡಿಪಿಐ ಕೆ.ಜಿ.ರಂಗಯ್ಯ ಆದೇಶ ಹೊರಡಿಸಿದ್ದಾರೆ. ಕೊಟಗಾರಲಹಳ್ಳಿ ಸರ್ಕಾರಿ ಪ್ರೌಢಶಾಲೆ (Government High School) ಪಿ.ನಾಗಭೂಷಣ್ ಅಮಾನತುಗೊಂಡ ಶಿಕ್ಷಕ. ಮಧುಗಿರಿ (Madhugiri) ತಾಲೂಕಿನ ಕೊಟಗಾರಲಹಳ್ಳಿ ಪ್ರೌಢಶಾಲೆಯ ಶಿಕ್ಷಕ ಪಿ.ನಾಗಭೂಷಣ್ ಪರೀಕ್ಷೆಯಲ್ಲಿ ಕಡಿಮೆ‌ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಉತ್ತರ ಬರೆದುಕೊಟ್ಟು ಹೆಚ್ಚು ಅಂಕ ನೀಡುತ್ತಿದ್ದ ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಈ ಸಂಬಂಧ ಕಾರಣ ಕೇಳಿ ಶಿಕ್ಷಕ ಪಿ.ನಾಗಭೂಷಣ್​ಗೆ, ಮುಖ್ಯ ಶಿಕ್ಷಕರು ನೋಟಿಸ್ ನೀಡಿದ್ದರು. ತನ್ನ ತಪ್ಪನ್ನು ತಿದ್ದಿಕೊಳ್ಳುವುದಾಗಿ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದನು.

ಈಗ ಶಿಕ್ಷಕ ಪಿ.ನಾಗಭೂಷಣ್ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪ ಕೇಳಿ ಬಂದಿದೆ. ಹೀಗಾಗಿ ಈತನ ದುರ್ವರ್ತನೆಯಿಂದ ವಿದ್ಯಾರ್ಥಿಗಳ ಕಲಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆ ಅಮಾನತು ಮಾಡಲಾಗಿದೆ.

ಕಾಲೇಜಿನಲ್ಲಿ ಪ್ರಜ್ಞೆತಪ್ಪಿ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಮಿತಾ(16) ಅನುಮಾನಾಸ್ಪದ ರೀತಿಯಲ್ಲಿ ಕಾಲೇಜಿನಲ್ಲಿ ಪ್ರಜ್ಞೆತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿತ್ತು. ಟಿ.ನರಸೀಪುರ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನಮಿತಾ ಕಾಲೇಜಿನಲ್ಲಿ ನಡೆದ ಡ್ಯಾನ್ಸ್​ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಳು. ಡ್ಯಾನ್ಸ್ ಬಳಿಕ ಕಾಲೇಜಿನಲ್ಲೇ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ಕೂಡಲೇ ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ನಮಿತಾ ಸಾವನ್ನಪ್ಪಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:34 am, Wed, 22 February 23

Follow Us
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ