ತುಮಕೂರು: ವಿದ್ಯಾರ್ಥಿನಿಯರಿಗೆ (Students) ಅಶ್ಲೀಲ ಸಂದೇಶ (Obscene Messages) ಕಳುಹಿಸುತ್ತಿದ್ದ ಶಿಕ್ಷಕನನ್ನು (Teacher) ಅಮಾನತು ಮಾಡಿ ಡಿಡಿಪಿಐ ಕೆ.ಜಿ.ರಂಗಯ್ಯ ಆದೇಶ ಹೊರಡಿಸಿದ್ದಾರೆ. ಕೊಟಗಾರಲಹಳ್ಳಿ ಸರ್ಕಾರಿ ಪ್ರೌಢಶಾಲೆ (Government High School) ಪಿ.ನಾಗಭೂಷಣ್ ಅಮಾನತುಗೊಂಡ ಶಿಕ್ಷಕ. ಮಧುಗಿರಿ (Madhugiri) ತಾಲೂಕಿನ ಕೊಟಗಾರಲಹಳ್ಳಿ ಪ್ರೌಢಶಾಲೆಯ ಶಿಕ್ಷಕ ಪಿ.ನಾಗಭೂಷಣ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಉತ್ತರ ಬರೆದುಕೊಟ್ಟು ಹೆಚ್ಚು ಅಂಕ ನೀಡುತ್ತಿದ್ದ ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಈ ಸಂಬಂಧ ಕಾರಣ ಕೇಳಿ ಶಿಕ್ಷಕ ಪಿ.ನಾಗಭೂಷಣ್ಗೆ, ಮುಖ್ಯ ಶಿಕ್ಷಕರು ನೋಟಿಸ್ ನೀಡಿದ್ದರು. ತನ್ನ ತಪ್ಪನ್ನು ತಿದ್ದಿಕೊಳ್ಳುವುದಾಗಿ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದನು.
ಈಗ ಶಿಕ್ಷಕ ಪಿ.ನಾಗಭೂಷಣ್ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪ ಕೇಳಿ ಬಂದಿದೆ. ಹೀಗಾಗಿ ಈತನ ದುರ್ವರ್ತನೆಯಿಂದ ವಿದ್ಯಾರ್ಥಿಗಳ ಕಲಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆ ಅಮಾನತು ಮಾಡಲಾಗಿದೆ.
ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಮಿತಾ(16) ಅನುಮಾನಾಸ್ಪದ ರೀತಿಯಲ್ಲಿ ಕಾಲೇಜಿನಲ್ಲಿ ಪ್ರಜ್ಞೆತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿತ್ತು. ಟಿ.ನರಸೀಪುರ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನಮಿತಾ ಕಾಲೇಜಿನಲ್ಲಿ ನಡೆದ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಳು. ಡ್ಯಾನ್ಸ್ ಬಳಿಕ ಕಾಲೇಜಿನಲ್ಲೇ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ಕೂಡಲೇ ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ನಮಿತಾ ಸಾವನ್ನಪ್ಪಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:34 am, Wed, 22 February 23