ಎಂಥ ಕಾಲ ಬಂತೋ ಮಾರ್ರೆ! ಬಾಡಿಗೆ ಕೇಳಿದ್ದಕ್ಕೆ ಹಲ್ಲೆ, ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟ

ಎಂಥ ಕಾಲ ಬಂತೋ ಮಾರ್ರೆ, ಕಟ್ಟಡದ ಬಾಡಿಗೆ ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರಿನಲ್ಲಿದ್ದರೆ, ಮತ್ತೊಂದೆಡೆ ಬುದ್ದಿವಾದ ಹೇಳಿದ್ದಕ್ಕೆ ಪೊಲೀಸ್ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಈ ಎರಡು ಸುದ್ದಿ ವಿವರ ಈ ಕೆಳಗಿನಂತಿದೆ.

ಎಂಥ ಕಾಲ ಬಂತೋ ಮಾರ್ರೆ! ಬಾಡಿಗೆ ಕೇಳಿದ್ದಕ್ಕೆ ಹಲ್ಲೆ, ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 28, 2023 | 9:42 AM

ತುಮಕೂರು, (ಸೆಪ್ಟೆಂಬರ್, 28): ಕಟ್ಟಡದ ಬಾಡಿಗೆ (Rent) ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು(Tumakuru) ಜಿಲ್ಲೆ ತಿಪಟೂರು ಪಟ್ಟಣದಲ್ಲಿ ನಡೆದಿದೆ. ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಲಿಂಗರಾಜು ಎನ್ನುವಾತ ಕಳೆದ ಎರಡೂವರೆ ವರ್ಷಗಳಿಂದ ಕಟ್ಟಡದ ಬಾಡಿಗೆ ಕೊಡದೆ ಸತಾಯಿಸುತ್ತಿದ್ದ. ನಿನ್ನೆ(ಸೆ.27) ಬಾಡಿಗೆ ಕೇಳಲು ಹೋಗಿದ್ದ ಕಟ್ಟಡದ ಮಾಲೀಕರಾದ ಶಾಹಿನ್ ತಾಜ್ ಮತ್ತು ಗುಜರ್ ಬಾನು ಮೇಲೆ ಹಲ್ಲೆ ಮಾಡಿದ್ದಾರೆ. ಬಾಡಿಗೆ ಕೊಡುವುದಿಲ್ಲ ಎಂದು ಅವಾಜ್ ಹಾಕಿ ಹಲ್ಲೆ ಮಾಡಿದ್ದು, ಇದೀಗ ಗಲಾಟೆ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಹಲ್ಲೆ ಸಂಬಂಧ ಮಹಿಳೆಯರು ತಿಪಟೂರು ಠಾಣೆಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಲಿಂಗರಾಜ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ಬಂದ್ ವೇಳೆ ಹೋಟೆಲ್​ ಮೇಲೆ ದಾಳಿ ಪ್ರಕರಣ; ಬಿಜೆಪಿ ಕಾರ್ಯಕರ್ತರ ಬಂಧನ

ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ಐ ಸ್ಕೂಟಿಗೆ ಬೆಂಕಿ

ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಗುಡಿಬಂಡೆ ಪೊಲೀಸ್ ಠಾಣೆಯ ಎಎಸ್​ಐ ನಂಜುಂಡ ಶರ್ಮ ಅವರಿಗೆ ಸೇರಿದ ಸ್ಕೂಟಿಗೆ ಸಲೀಂ ಎನ್ನುವಾತ ಬೆಂಕಿ ಹಚ್ಚಿದ್ದಾನೆ. ಅಣ್ಣ ತಮ್ಮಂದಿರ ಗಲಾಟೆ ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. ಈ ಸಂಬಂಧ ಎಎಸ್​ಐ ನಂಜುಂಡ ಶರ್ಮ ಅವರು ಆಸ್ಪತ್ರೆಗೆ ಹೋಗಿ ಬುದ್ದಿವಾದ ಹೇಳಿದ್ದರು. ಇದರಿಂದ ಕುಪಿತಗೊಂಡ ಸಲೀಂ ಎನ್ನುವಾತ ನಂಜುಂಡ ಶರ್ಮ ಅವರ ನಿವಾಸದ ಬಳಿ ಹೋಗಿ ಸ್ಕೂಟಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:40 am, Thu, 28 September 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?