Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ 10 ವರ್ಷ ಜೈಲು, 25 ಸಾವಿರ ದಂಡ ವಿಧಿಸಿದ ನ್ಯಾಯಾಲಯ

2021 ಅಕ್ಟೋಬರ್ 16 ರಂದು ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಘಟನೆ ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗೆ 10 ವರ್ಷ ಜೈಲು, 25 ಸಾವಿರ ದಂಡ ವಿಧಿಸಿದೆ.

Tumakuru News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ 10 ವರ್ಷ ಜೈಲು, 25 ಸಾವಿರ ದಂಡ ವಿಧಿಸಿದ ನ್ಯಾಯಾಲಯ
ಅತ್ಯಾಚಾರ ಆರೋಪಿಗೆ ಶಿಕ್ಷೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 22, 2023 | 11:25 AM

ತುಮಕೂರು: ಕಳೆದ 2021 ಅಕ್ಟೋಬರ್ 16 ರಂದು ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ ಅತ್ಯಾಚಾರ(Rape) ಎಸಗಿದ್ದ ಘಟನೆ ಶಿರಾ(Sira) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಆರೋಪಿ ರವಿ ಎಂಬಾತ ಈ ಕೃತ್ಯ ಎಸಗಿದ್ದ. ಈ ಘಟನೆ ಸಂಬಂಧ ಅಂದಿನ ತನಿಖಾಧಿಕಾರಿ ಹನುಮಂತಪ್ಪ ತನಿಖೆ ನಡೆಸಿ‌, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಇದೀಗ ತುಮಕೂರಿನ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾರಾವ್ ಆರೋಪಿಗೆ 10 ವರ್ಷ ಜೈಲು, 25 ಸಾವಿರ ದಂಡ ವಿಧಿಸಿದ್ದಾರೆ. ಜೊತೆಗೆ ಕಾನೂನು ಸೇವಾ ಪ್ರಾಧಿಕಾರಕ್ಕೆ, ಸಂತ್ರಸ್ತ ಬಾಲಕಿಗೆ 4 ಲಕ್ಷ ಹಣವನ್ನ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ 52 ವರ್ಷದ ಕಾಮುಕ

ರಾಯಚೂರು: 4ನೇ ತರಗತಿ ವಿದ್ಯಾರ್ಥಿನಿಗೆ ಚಾಕೊಲೇಟ್ ಆಸೆ ತೋರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಆರ್​ಎಚ್ ಕ್ಯಾಂಪ್ 3ರಲ್ಲಿ ನಡೆದಿದೆ. ಸಪನ್ ಮಂಡಲ್(52) ಆರೋಪಿ. ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಸ್ಕೂಟರ್​ನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ:ಉಜಿರೆ ಸೌಜನ್ಯ ಅತ್ಯಾಚಾರ, ಕೊಲೆ ಕೇಸ್: 2012 ಅ.9ರಿಂದ 2023 ಜೂ.16ರ ವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಟೈಮ್​ಲೈನ್

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ಐವರ ಬಂಧನ

ಬೆಂಗಳೂರು ನಗರ: ಆನೇಕಲ್ ಪೋಲೀಸ್ ಉಪವಿಭಾಗದ ಅತ್ತಿಬೆಲೆಯ ಬಳ್ಳೂರು ಸಮೀಪದ ರಾಮರೆಡ್ಡಿ ಎಂಬುವವರ ಜಮೀನಿನ ಬಳಿ ಜೂಜಾಟ ಆಡುತ್ತಿದ್ದ ಮಾಹಿತಿ ಮೇರೆಗೆ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಐವರನ್ನು ಬಂಧಿಸಿದ್ದು, 33 ಸಾವಿರ ರೂಪಾಯಿ ನಗದು ಮತ್ತು ಬೈಕ್​ಗಳನ್ನ ಅತ್ತಿಬೆಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ್(23) ಮಣಿ(26) ಮುನಿಯಪ್ಪ(28) ಜಗದೀಶ್(24) ಶ್ರೀರಾಮ್(22) ಬಂಧಿತರು. ಈ ಕುರಿತು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ