ತುಮಕೂರು: ಬಾಲ ಮಂದಿರದಲ್ಲಿ ಸಂತ್ರಸ್ತ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 25, 2024 | 5:27 PM

ತುಮಕೂರು(Tumakuru) ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಮೈಸೂರು ಮೂಲದ ಅಪ್ರಾಪ್ತ ಬಾಲಕಿಗೆ ಆಶ್ರಯ ನೀಡಲಾಗಿತ್ತು. ಇದೀಗ ಬೆಳ್ಳಂ ಬೆಳಗ್ಗೆ ಬಾಲ ಮಂದಿರದಲ್ಲಿಯೇ ನೇಣಿಗೆ ಶರಣಾಗಿದ್ದಾರೆ.

ತುಮಕೂರು: ಬಾಲ ಮಂದಿರದಲ್ಲಿ ಸಂತ್ರಸ್ತ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ
ತುಮಕೂರು ಬಾಲಮಂದಿರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ
Follow us on

ತುಮಕೂರು, ಜ.25: ಸಂತ್ರಸ್ತ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು(Tumakuru) ನಗರದ ಬಾಲಕಿಯರ ಬಾಲ ಮಂದಿರದಲ್ಲಿ ನಡೆದಿದೆ. ಮೈಸೂರು ಮೂಲದ ಅಪ್ರಾಪ್ತ ಬಾಲಕಿಗೆ ಆಶ್ರಯ ನೀಡಲಾಗಿತ್ತು. ಇದೀಗ ಬೆಳ್ಳಂ ಬೆಳಗ್ಗೆ ಬಾಲ ಮಂದಿರದಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಇನ್ನು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೊತ್ತಿ ಉರಿದ ಕಾರು; ಕಾರ್​​ನಲ್ಲಿದ್ದ ಒಂದು ಮಗು ಸೇರಿ ಐವರು ಪ್ರಾಣಾಪಾಯದಿಂದ ಪಾರು

ಕೋಲಾರ: ಜಿಲ್ಲೆಯ ಮುಳಬಾಗಿಲು ಎನ್​​.ವಡ್ಡಹಳ್ಳಿ ಬಳಿಯ ಹೆದ್ದಾರಿಯಲ್ಲಿ ಕಾರು ಹೊತ್ತಿ ಉರಿದ ಘಟನೆ ನಡೆದಿದೆ. ಅದೃಷ್ಟವಶಾತ್​ ಕಾರ್​​ನಲ್ಲಿದ್ದ ಒಂದು ಮಗು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಮಹೇಶ್​​ ಎಂಬುವರಿಗೆ ಸೇರಿದ ಕಾರು ಇದಾಗಿದ್ದು, ಕಾರಿನಲ್ಲಿ ತಾಂತ್ರಿಕ ದೋಷದ ಹಿನ್ನೆಲೆ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಂಗಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಮೀಟರ್​ ಬಡ್ಡಿ ದಂಧೆ ಹಾವಳಿ, ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಎಚ್ಚೆತ್ತ ತುಮಕೂರು ಪೊಲೀಸರಿಂದ ಸಹಾಯವಾಣಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ….

Published On - 4:58 pm, Thu, 25 January 24