ತುಮಕೂರು: NH 48ರಲ್ಲಿ ಸೇತುವೆಗೆ ಡಿಕ್ಕಿಯಾಗಿ ಕೆಳಗೆಬಿದ್ದ ಕಾರು, ಮೂವರ ಸಾವು
ಸ್ನೇಹಿತನ ಮದುವೆ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ಕಾರು NH 48ರಲ್ಲಿ ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಾಲದಮರದ ಬಳಿ ಸೇತುವೆ ಮೇಲಿಂದ ಬಿದ್ದಿದೆ.
ತುಮಕೂರು: ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದು ಬಳಿಕ ಅಲ್ಲಿಂದ ಕೆಳಕ್ಕೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು(ಡಿಸೆಂಬರ್ 14) ಸಂಜೆ NH 48ರಲ್ಲಿ ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಾಲದಮರದ ಬಳಿ ಸಂಭವಿಸಿದ್ದು, ಮೃತಪಟ್ಟ ಮೂವರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸೇತುವೆಯಿಂದ ಕಾರು ಕೆಳಕ್ಕೆ ಬಿದ್ದಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಕಾರು ಚಿತ್ರದುರ್ಗದಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಸೇತುವೆ ಮೇಲಿಂದ ಕೆಳಕ್ಕೆ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಇಂದು ಬೆಳಗ್ಗೆ ಅಷ್ಟೇ ಗುಬ್ಬಿ ತಾಲೂಕು ಕೊಡ್ಲಿಕ್ರಾಸ್‌ನಲ್ಲಿ ಕಾರು, ಕ್ಯಾಂಟರ್ ಮುಖಾಮುಖಿಯಾಗಿ ನಾಲ್ವರು ಮೃತಪಟ್ಟಿದ್ದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 8:13 pm, Wed, 14 December 22