Tumakuru News: ಪ್ರತ್ಯೇಕ ಘಟನೆ: ತುಮಕೂರಿನಲ್ಲಿ 3 ಅಪಘಾತ, ಮೂವರು ಸಾವು

ತುಮಕೂರಿನ ವಿವಿಧ ಸ್ಥಳಗಳಲ್ಲಿ ಮೂರು ರಸ್ತೆ ಅಪಘಾತಗಳು ಸಂಭವಿಸಿದ್ದು, ಈ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ.ಈ 3 ಪ್ರಕರಣಗಳ ವಿವರ ಇಲ್ಲಿದೆ.

Tumakuru News: ಪ್ರತ್ಯೇಕ ಘಟನೆ: ತುಮಕೂರಿನಲ್ಲಿ 3 ಅಪಘಾತ, ಮೂವರು ಸಾವು
ಪ್ರಾತಿನಿಧಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 16, 2023 | 11:01 AM

ತುಮಕೂರು, ಅಗಸ್ಟ್ ( 16): ರಸ್ತೆ ಅಪಘಾತಗಳಲ್ಲಿ  (Road Accidents) ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಬಗ್ಗೆ ಪೊಲೀಸರು ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಅಪಘಾತಗಳು ಕಡಿಮೆಯಾಗುತ್ತಿಲ್ಲ. ಇದಕ್ಕೆ ಪೂರಕವೆಂಬಂತೆ ಶನಿವಾರ (ಆಗಸ್ಟ್ 12) ಕರ್ನಾಟಕದಲ್ಲಿ ಬರೋಬ್ಬರಿ 32 ಜನರು ಈ ರಸ್ತೆ ಅಪಘಾತದಲ್ಲಿ ಬಲಿಯಾಗಿದ್ದರು. ಇದರ ಬೆನ್ನಲ್ಲೇ ಇದೀಗ ತಮಕೂರಿನಲ್ಲಿ (Tumakuru) ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ ಮೂವರು ಮೃತಪಟ್ಟಿದ್ದಾರೆ.  ಈ ಮೂರು ಪ್ರತ್ಯೇಕ ಘಟನೆಗಳ ವಿವರ ಈ ಕೆಳಗಿನಂತಿದೆ ನೋಡಿ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ಸಾವು

ತಮಕೂರಿನ ಮದ್ದೇನಹಳ್ಳಿ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿದ್ದಾನೆ. ಕೋರಾ ನಿವಾಸಿಯಾದ ಶಂಕರ್ (21) ಮೃತಪಟ್ಟ ವ್ಯಕ್ತಿಯಾಗಿದ್ದು, ಕೋರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತುಮಕೂರು: ಕಾಂಗ್ರೆಸ್ ಮುಖಂಡ ಅನುಮಾನಸ್ಪದ ಸಾವು, ಪರಮೇಶ್ವರ್​ಗೆ ಮತ ಹಾಕಿದ್ದಕ್ಕೆ ಕೊಲೆ ಶಂಕೆ

ತಿಮ್ಮರಾಜನಹಳ್ಳಿ ಬಳಿ ಕಾರು ಪಲ್ಟಿ

ತಮಕೂರಿನ ತಿಮ್ಮರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ-48ರ ಬಳಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ. ಬೆಂಗಳೂರಿನಿಂದ ಚಿತ್ರದುರ್ಗ ತೆರಳುತ್ತಿದ್ದ ಮಾರ್ಗ ಮಧ್ಯೆ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ 4 ಜನರ ಪೈಕಿ ಪ್ರಕಾಶ್ ಎನ್ನುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊರ್ವ ಗಂಭೀರ ಗಾಯಗೊಂಡಿದ್ದು, ಉಳಿದ ಇಬ್ಬರು ಪ್ರಯಾಣಿಕರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕೋರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲಿಯೇ ಮೃತ್ಯು

ಕುಣಿಗಲ್ ತಾಲೂಕಿನ ಸಂತೆ ಮಾವತ್ತೂರು ಬಳಿ ಕಾರು ಡಿಕ್ಕಿಯಾದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗಂಗಹುಚ್ಚಯ್ಯ(54) ಎನ್ನುವಾತ ನಿನ್ನೆ (ಆಗಸ್ಟ್ 15) ತಡರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದಿದ್ದು, ಗಂಗಹುಚ್ಚಯ್ಯ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಕುಣಿಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ತುಮಕೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾಜಾ ಸುದ್ದಿ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’