ತುಮಕೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಬೆಂಗಳೂರಿನಿಂದ ಹೋಗಿ ರೈಲಿಗೆ ತಲೆ ಕೊಟ್ರು

ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಇಂದು ಬೆಳಗ್ಗೆ ಆಟೋದಲ್ಲಿ ಹೋಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ತುಮಕೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಬೆಂಗಳೂರಿನಿಂದ ಹೋಗಿ ರೈಲಿಗೆ ತಲೆ ಕೊಟ್ರು
ಪ್ರಾತಿನಿಧಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ Edited By:

Updated on: Oct 02, 2023 | 11:47 AM

ತುಮಕೂರು, (ಅಕ್ಟೋಬರ್ 02): ಒಂದೇ ಕುಟುಂಬದ ಮೂವರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತುಮಕೂರಿನ (Tumakuru) ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಸಿದ್ದಗಂಗಯ್ಯ (62),ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಪುತ್ರಿ ಜೊತೆ ದಂಪತಿ ಇಂದು(ಅಕ್ಟೋಬರ್ 02) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ, ನಿಖರ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ.

ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಕಳೆದ ಎರಡು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಇಂದು ಬೆಳಗ್ಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಗುದ್ದಿದ ಪರಿಣಾಮ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸದ್ಯ ಮೃತ ದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us