ಚಿನ್ನದ ಸರ, ಬೈಕ್ ಕಳವು ಮಾಡುತ್ತಿದ್ದ ಮೂವರು ಕುಖ್ಯಾತ ಕಳ್ಳರ ಬಂಧನ: 14.45 ಲಕ್ಷ ಮೌಲ್ಯದ ಚಿನ್ನಾಭರಣ ವಶ
ತಮ್ಮ ತೋಟದ ಮರವೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಜೊನಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ತುಮಕೂರು: ಚಿನ್ನದ ಸರ, ಬೈಕ್ ಕಳವು ಮತ್ತು ಕೊಲೆ ಸುಲಿಗೆಯಲ್ಲಿ ತೊಡಗಿದ್ದ ಮೂವರ ಕಳ್ಳರ (Thieves) ಬಂಧಿಸಿದ್ದು, 14.45 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಪಲ್ಸರ್ ಬೈಕ್ ವಶಕ್ಕೆ ಪಡೆಯಲಾಗಿದೆ. ಕ್ಯಾತ್ಸಂದ್ರ ಹಾಗೂ ಹೆಬ್ಬೂರು ಪೊಲೀಸರ ಕಾರ್ಯಾಚರಣೆ ಮಾಡಿ, ಯತೀಶ್ (26) ಜಯಂತ್ (23) ಚಂದ್ರಶೇಖರ್ (26) ಮೂವರು ಆರೋಪಿಗಳು. ಬಂಧಿತರು ಚಿಕ್ಕಮಗಳೂರು ಹಾಗೂ ರಾಮನಗರ ಜಿಲ್ಲೆಯವರು ಎನ್ನಲಾಗಿದೆ. ಕ್ಯಾತ್ಸಂದ್ರ ಹಾಗೂ ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಬೈಕ್ ಅಡ್ಡಗಟ್ಟಿ ಚಿನ್ನಾಭರಣ ದೋಚಿದ್ದರು ಎನ್ನಲಾಗಿದೆ. ಚಾಕು ತೋರಿಸಿ ಮಾಂಗಲ್ಯ ಸರ, ಚೈನ್ ಸೇರಿದಂತೆ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದರು. ಕ್ಯಾತ್ಸಂದ್ರ ಹಾಗೂ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಅಪಾರ್ಟ್ಮೆಂಟ್ನಲ್ಲಿ ಕಳವು: ಇಬ್ಬರ ಬಂಧನ
ಬೆಂಗಳೂರು: ಅಪಾರ್ಟ್ಮೆಂಟ್ನಲ್ಲಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇಸೈರಾಜ್, ಆನಂದ್ನನ್ನ ಬಂಧಿಸಿ 19 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ; ಶಂಕಿತರನ್ನು ಪೊಲೀಸರು ಚೇಸ್ ಮಾಡಿರುವ ಈ ವಿಡಿಯೋ ನಿಮ್ಮನ್ನು ದಂಗಾಗಿಸುತ್ತದೆ!
ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ತುಮಕೂರು: ತಮ್ಮ ತೋಟದ ಮರವೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಜೊನಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಪ್ರಸಾದ್ 34 ಮೃತ ದುರ್ದೈವಿ. ಜೀವನದಲ್ಲಿ ಜಿಗುಪ್ಸೆ ಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಬೈಕ್ ಕಳ್ಳನ ಬಂಧನ
ಚಿತ್ರದುರ್ಗ: ನಗರ ಠಾಣೆ ಪೊಲೀಸರ ಕಾರ್ಯಾಚರಣೆಯಿಂದ ಬೈಕ್ ಕಳ್ಳನ ಬಂಧನ ಮಾಡಿದ್ದು, ಆರು ಬೈಕ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆರೆಕೋಡಿಹಳ್ಳಿಯ ಮಂಜುನಾಥ್(30) ಬಂಧಿತ ಆರೋಪಿ. ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಿಂದ ಆರೋಪಿ 6 ಬೈಕ್ ಕದ್ದಿದ್ದ. ಇತರೆ ಕಳ್ಳತನ ಪ್ರಕರಣಗಳಲ್ಲಿ ಕೂಡ ಭಾಗಿಯಾಗಿದ್ದಾನೆ.
ಜಮೀನು ಉಳುವೆ ಮಾಡುವ ವೇಳೆ ಟ್ರ್ಯಾಕ್ಟರ್ ಕುಂಟೆಗೆ ಸಿಲುಕಿ ರೈತ ಸಾವು
ವಿಜಯಪುರ: ಟ್ರ್ಯಾಕ್ಟರ್ ಮೂಲಕ ಜಮೀನು ಉಳುವೆ ಮಾಡುವ ವೇಳೆ ಅವಘಡ ಸಂಭವಿಸಿದ್ದು, ಟ್ರ್ಯಾಕ್ಟರ್ ಕುಂಟೆಗೆ ಸಿಲುಕಿ ರೈತ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಇಂಗಳಗೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮಲ್ಲಣ್ಣ ಏರಡ್ಡಿ (48) ಮೃತ ರೈತ. ಟ್ರ್ಯಾಕ್ಟರ್ ಗೆ ಕಬ್ಬಿಣದ ಕುಮಟೆ ಜೋಡಿಸಿ ಉಳುವೆ ಮಾಡುವ ವೇಳೆ ಕುಂಟೆ ಅಡಿಯಲ್ಲಿ ಸಿಲುಕಿ ಮಲ್ಲಣ್ಣ ಮೃತಪಟ್ಟಿದ್ದಾರೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.