ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು

ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಮೂವುರ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು
ಆತ್ಮಹತ್ಯೆಗೆ ಶರಣಾದ ಸಹೋದರಿಯರು
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jan 19, 2023 | 8:40 PM

ತುಮಕೂರು: ಮೂವರು ಅನಾಥ ಸಹೋದರಿಯರು ಸಾಮೂಹಿಕವಾಗಿ ಆತ್ಮಹತ್ಯೆಗೆ (Suicide)  ಶರಣಾಗಿರುವ ದಾರುಣ ಘಟನೆ ತುಮಕೂರು (Tumakuru) ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡ ಸೋದರಿಯರು (Sisters). ಕಳೆದ 9 ದಿನಗಳ ಹಿಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಕೊಳೆತ ವಾಸನೆ ಬಂದ ಬಳಿಕ ಸ್ಥಳೀಯರು ಗಮನಿಸಿದಾಗ ಪ್ರಕರಣ ಇಂದು(ಜನವರಿ 19) ಬೆಳಕಿಗೆ ಬಂದಿದೆ.

ಹಲವು ವರ್ಷಗಳ ಹಿಂದೆಯೇ ತಂದೆ-ತಾಯಿ ಮೃತಪಟ್ಟಿದ್ದರು. ತಂದೆ-ತಂದೆಯನ್ನು ಕಳೆದುಕೊಂಡ ಅನಾಥರಾಗಿದ್ದ ಸಹೋದರಿಯರು ಅಜ್ಜಿ ಜೊತೆಯಲ್ಲಿ ವಾಸವಿದ್ದರು. ಆದ್ರೆ, ಆಸರೆಯಾಗಿದ್ದ ಅಜ್ಜಿಯೂ ಸಹ ಇತ್ತೀಚೆಗೆ ಮರಣ ಹೊಂದಿದ್ದರು. ಬಳಿಕ ಸಹೋದರಿಯರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಈ ಮೂವರು ಸಹೋದರಿಯರ ಪೈಕಿ ಇಬ್ಬರು ಕಿಬ್ಬನಹಳ್ಳಿಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಸಹೋದರಿಯರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಎಸ್​ಪಿ ಸಿದ್ದಾರ್ಥ್ ಗೋಯೆಲ್, ಸಿಪಿಐ ನಿರ್ಮಲಾ, ಪಿಎಸ್​ಐ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಬಗ್ಗೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನಷ್ಟು ತುಮಕೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:32 pm, Thu, 19 January 23

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​