ತುಮಕೂರು: ಮೂವರು ಅನಾಥ ಸಹೋದರಿಯರು ಸಾಮೂಹಿಕವಾಗಿ ಆತ್ಮಹತ್ಯೆಗೆ (Suicide) ಶರಣಾಗಿರುವ ದಾರುಣ ಘಟನೆ ತುಮಕೂರು (Tumakuru) ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡ ಸೋದರಿಯರು (Sisters). ಕಳೆದ 9 ದಿನಗಳ ಹಿಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಕೊಳೆತ ವಾಸನೆ ಬಂದ ಬಳಿಕ ಸ್ಥಳೀಯರು ಗಮನಿಸಿದಾಗ ಪ್ರಕರಣ ಇಂದು(ಜನವರಿ 19) ಬೆಳಕಿಗೆ ಬಂದಿದೆ.
ಹಲವು ವರ್ಷಗಳ ಹಿಂದೆಯೇ ತಂದೆ-ತಾಯಿ ಮೃತಪಟ್ಟಿದ್ದರು. ತಂದೆ-ತಂದೆಯನ್ನು ಕಳೆದುಕೊಂಡ ಅನಾಥರಾಗಿದ್ದ ಸಹೋದರಿಯರು ಅಜ್ಜಿ ಜೊತೆಯಲ್ಲಿ ವಾಸವಿದ್ದರು. ಆದ್ರೆ, ಆಸರೆಯಾಗಿದ್ದ ಅಜ್ಜಿಯೂ ಸಹ ಇತ್ತೀಚೆಗೆ ಮರಣ ಹೊಂದಿದ್ದರು. ಬಳಿಕ ಸಹೋದರಿಯರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಈ ಮೂವರು ಸಹೋದರಿಯರ ಪೈಕಿ ಇಬ್ಬರು ಕಿಬ್ಬನಹಳ್ಳಿಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಸಹೋದರಿಯರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಎಸ್ಪಿ ಸಿದ್ದಾರ್ಥ್ ಗೋಯೆಲ್, ಸಿಪಿಐ ನಿರ್ಮಲಾ, ಪಿಎಸ್ಐ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಇನ್ನಷ್ಟು ತುಮಕೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 8:32 pm, Thu, 19 January 23