ತುಮಕೂರು: ಬುಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿಯಿಂದ ಮೂವರು ಸಾವು

| Updated By: ವಿವೇಕ ಬಿರಾದಾರ

Updated on: Aug 27, 2024 | 9:16 AM

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ಶನಿವಾರ ಗ್ರಾಮದ ದೇವರ ಮಹೋತ್ಸವ ಆಯೋಜಿಸಲಾಗಿತ್ತು. ಉತ್ಸವದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದರು. ಉತ್ಸವದ ಬಳಿಕ ಗ್ರಾಮದ 14 ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು. ಇದರಲ್ಲಿ ಮೂವರು ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ತುಮಕೂರು: ಬುಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿಯಿಂದ ಮೂವರು ಸಾವು
ಅಸ್ವಸ್ಥಗೊಂಡವರು
Follow us on

ತುಮಕೂರು, ಆಗಸ್ಟ್​ 26: ಮಧುಗಿರಿ (Madhugiri) ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿಯಿಂದ ಮೂವರು ಮೃತಪಟ್ಟಿದ್ದು, 11ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ಗ್ರಾಮದ ತಿಪ್ಪಮ್ಮ (40), ತಿಮ್ಮಕ್ಕ (85) ಗಿರಿಯಮ್ಮ (75) ಮೃತ ದುರ್ದೈವಿಗಳು. ಶ್ರಾವಣ ಮಾಸ (Shravana Masa) ಹಿನ್ನೆಲೆಯಲ್ಲಿ ಕಳೆದ ಶನಿವಾರ ಗ್ರಾಮದಲ್ಲಿ ದೇವರ ಉತ್ಸವ ಆಯೋಜಿಸಲಾಗಿತ್ತು. ಮುತ್ತರಾಯಸ್ವಾಮಿ, ಕರಿಯಮ್ಮ, ಭೂತಪ್ಪ ದೇವರ ಆರತಿ ಉತ್ಸವ ನಡೆದಿತ್ತು. ಉತ್ಸವದ ವೇಳೆ ಗ್ರಾಮಸ್ಥರು ಪ್ರಸಾದ ಸೇವಿಸಿದ್ದರು. ಪ್ರಸಾದ ಸೇವಿದ್ದರಿಂದ 11 ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು, ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.

ಅಸ್ವಸ್ಥರಿಗೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಮೇಲ್ನೋಟಕ್ಕೆ ಪ್ರಸಾದ ಸೇವಿಸಿದ್ದರಿಂದ ದುರ್ಘಟನೆ ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಮಕ್ಕೆ ತಹಶಿಲ್ದಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೀಗರೂಟ ಸೇವಿಸಿದ್ದ 24 ಜನರು ವಾಂತಿ, ಭೇದಿಯಿಂದ ಅಸ್ವಸ್ಥ; ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಹೇಳಿದ್ದಿಷ್ಟು

ಕಲುಷಿತ ನೀರು ಸೇವಿಸಿ ಮೂವರು ಸಾವು

ಇದೇ ವರ್ಷ ಜೂನ್​ನಲ್ಲಿ ಮಧುಗಿರಿ ತಾಲೂಕಿನ ಚೆನ್ನೇಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂರು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದರು. ಚೆನ್ನೇಹಳ್ಳಿ ಗ್ರಾಮದ ಓವರ್​ ಹೆಡ್​ ಟ್ಯಾಂಕ್​ ಮತ್ತು ಶುದ್ಧ ನೀರಿನ ಘಟಕದಿಂದ ಪೂರೈಸುವ ನೀರು ಸೇವಿಸಿ ವಾಂತಿಮ ಭೇದಿಯಿಂದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಸಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಮೂವರು ಮೃತಪಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Tue, 27 August 24