ಅಗ್ನಿ ನರ್ತನ: ಕಾರಿನಲ್ಲಿದ್ದ ಮೂವರು ಸಜೀವ ದಹನ

ಅಗ್ನಿ ನರ್ತನ: ಕಾರಿನಲ್ಲಿದ್ದ ಮೂವರು ಸಜೀವ ದಹನ

ತುಮಕೂರು: ಖಾಸಗಿ ಬಸ್ ಡಿಕ್ಕಿಯೊಡೆದು ಕಾರಿನಲ್ಲಿದ್ದ ಮೂವರು ಸಜೀವ ದಹನವಾಗಿರುವ ಘಟನೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದ ಕೆರೆ ಏರಿ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ವಸಂತಕುಮಾರ್, ನರಸಮ್ಮ, ರಾಮಯ್ಯ ಮೃತಪಟ್ಟಿದ್ದಾರೆ.

ಎನ್.ಹೊಸಹಳ್ಳಿಯಿಂದ ನಿಟ್ಟೂರು ಆಸ್ಪತ್ರೆಗೆ ಓಮ್ನಿ ಕಾರಿನಲ್ಲಿ ತೆರಳುತ್ತಿದ್ದಾಗ ಬೆಳಗಿನ ಜಾವ 3.30ಕ್ಕೆ ಅಪಘಾತವಾಗಿದೆ. ಕಾರು ಮತ್ತು ಖಾಸಗಿ ಬಸ್ ಡಿಕ್ಕಿಯ ರಭಸಕ್ಕೆ ಬೆಂಕಿ ತಗುಲಿ ಬಸ್, ಕಾರು ಸುಟ್ಟು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದವರು ಸಜೀವ ದಹನವಾಗಿದ್ದಾರೆ. ಇನ್ನುಳಿದ ನಾಲ್ವರಿಗೆ ಗಾಯ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.  ಬೆಂಕಿ ಅವಘಡದಲ್ಲಿ ಖಾಸಗಿ ಬಸ್‌ನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ.

Click on your DTH Provider to Add TV9 Kannada