Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವರನ್ನು ಹುಲಿ ಉಗುರು ಪರಚುತ್ತಿರುವ ಮಧ್ಯ ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರು ಅರೆಸ್ಟ್

ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಬಂಧಿಸಲಾಗಿದೆ. ತುಮಕೂರಿನ ಮಾರನಾಯಕನಪಾಳ್ಯದಲ್ಲಿ ತುಮಕೂರು ವಲಯ ಅರಣ್ಯಾಧಿಕಾರಿ ಪವಿತ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರು ಓರಿಸ್ಸಾ ಮೂಲದವರು.

ಹಲವರನ್ನು ಹುಲಿ ಉಗುರು ಪರಚುತ್ತಿರುವ ಮಧ್ಯ ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರು ಅರೆಸ್ಟ್
ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರು ಅರೆಸ್ಟ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು

Updated on:Oct 26, 2023 | 1:38 PM

ತುಮಕೂರು, ಅ.26: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗುತ್ತಿದ್ದಂತೆ ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ (Tiger Claw Locket Row). ಮತ್ತೊಂದೆಡೆ ಅರಣ್ಯಾಧಿಕಾರಿಗಳು (Forest Officials) ಫುಲ್ ಅಲರ್ಟ್ ಆಗಿದ್ದು ಹುಲಿ ಉಗುರಿನ ಪೆಂಡೆಂಟ್​ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಹಾಗೂ ಹಲವೆಡೆ ದಾಳಿ ನಡೆಸಿ ಅರಣ್ಯ ಪಕ್ಷಗಳ ಭಕ್ಷಕರ ಎಡೆ ಮುರಿ ಕಟ್ಟುತಿದ್ದಾರೆ. ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಬಂಧಿಸಲಾಗಿದೆ.

ತುಮಕೂರಿನ ಮಾರನಾಯಕನಪಾಳ್ಯದಲ್ಲಿ ತುಮಕೂರು ವಲಯ ಅರಣ್ಯಾಧಿಕಾರಿ ಪವಿತ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಓರಿಸ್ಸಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತರು.

ಮಾರನಾಯಕನಪಾಳ್ಯದ ಇಟ್ಟಿಗೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು, ಕಳೆದ ಹಲವು ದಿನಗಳಿಂದ ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಈ ವೇಳೆ 1.5 ಕೆಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು, ಮಾಂಸ ಬೇಯಿಸಿದ್ದ ಪಾತ್ರೆಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನ ಎಫ್ಎಸ್ಎಲ್ ಗೆ ಕಳುಹಿಸಲಾಗುತ್ತೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲೂ ಹುಲಿ ಉಗುರು ಕಲರವ: ಗಣ್ಯ ವ್ಯಕ್ತಿ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್ ಪತ್ತೆ!

ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಇಬ್ಬರು ಅರೆಸ್ಟ್

ಇನ್ನೂ ಚಿಕ್ಕಮಗಳೂರಲ್ಲಿ ಹುಲಿ ಹುಗುರು ಬೇಟೆ ಮುಂದುವರಿದಿದ್ದು, ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಇಬ್ಬರು ಅರ್ಚಕರ ಬಂಧನವಾಗಿದೆ. ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ದೇವಸ್ಥಾನದ ಅರ್ಚಕ ಕೃಷ್ಣಾನಂದವಳ್ಳ, ನಾಗೇಂದ್ರ ಬಂಧನವಾಗಿದ್ದು, ಮೂರು ಹುಲಿ ಉಗುರು ವಶಕ್ಕೆ ಪಡೆಯಲಾಗಿದೆ. ಬಾಳೆಹೊನ್ನೂರು ವಲಯ ಅರಣ್ಯ ಅಧಿಕಾರಿಗಳು ವಿಚಾರಣೆ ನಡೆಸ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:32 pm, Thu, 26 October 23

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು