ತುಮಕೂರು, ಅ.26: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗುತ್ತಿದ್ದಂತೆ ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ (Tiger Claw Locket Row). ಮತ್ತೊಂದೆಡೆ ಅರಣ್ಯಾಧಿಕಾರಿಗಳು (Forest Officials) ಫುಲ್ ಅಲರ್ಟ್ ಆಗಿದ್ದು ಹುಲಿ ಉಗುರಿನ ಪೆಂಡೆಂಟ್ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಹಾಗೂ ಹಲವೆಡೆ ದಾಳಿ ನಡೆಸಿ ಅರಣ್ಯ ಪಕ್ಷಗಳ ಭಕ್ಷಕರ ಎಡೆ ಮುರಿ ಕಟ್ಟುತಿದ್ದಾರೆ. ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಬಂಧಿಸಲಾಗಿದೆ.
ತುಮಕೂರಿನ ಮಾರನಾಯಕನಪಾಳ್ಯದಲ್ಲಿ ತುಮಕೂರು ವಲಯ ಅರಣ್ಯಾಧಿಕಾರಿ ಪವಿತ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಓರಿಸ್ಸಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತರು.
ಮಾರನಾಯಕನಪಾಳ್ಯದ ಇಟ್ಟಿಗೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು, ಕಳೆದ ಹಲವು ದಿನಗಳಿಂದ ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಈ ವೇಳೆ 1.5 ಕೆಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು, ಮಾಂಸ ಬೇಯಿಸಿದ್ದ ಪಾತ್ರೆಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನ ಎಫ್ಎಸ್ಎಲ್ ಗೆ ಕಳುಹಿಸಲಾಗುತ್ತೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಬಾಗಲಕೋಟೆಯಲ್ಲೂ ಹುಲಿ ಉಗುರು ಕಲರವ: ಗಣ್ಯ ವ್ಯಕ್ತಿ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್ ಪತ್ತೆ!
ಇನ್ನೂ ಚಿಕ್ಕಮಗಳೂರಲ್ಲಿ ಹುಲಿ ಹುಗುರು ಬೇಟೆ ಮುಂದುವರಿದಿದ್ದು, ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಇಬ್ಬರು ಅರ್ಚಕರ ಬಂಧನವಾಗಿದೆ. ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ದೇವಸ್ಥಾನದ ಅರ್ಚಕ ಕೃಷ್ಣಾನಂದವಳ್ಳ, ನಾಗೇಂದ್ರ ಬಂಧನವಾಗಿದ್ದು, ಮೂರು ಹುಲಿ ಉಗುರು ವಶಕ್ಕೆ ಪಡೆಯಲಾಗಿದೆ. ಬಾಳೆಹೊನ್ನೂರು ವಲಯ ಅರಣ್ಯ ಅಧಿಕಾರಿಗಳು ವಿಚಾರಣೆ ನಡೆಸ್ತಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:32 pm, Thu, 26 October 23