ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವ ಮೊದಲೇ ಟೋಲ್ ವಸೂಲಿ, ಸಿಡಿದೆದ್ದ ವಾಹನ ಸವಾರರು
ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇನ್ನೂ ಸಂಪೂರ್ಣ ಕಾಮಗಾರಿ ಮುಗಿಯದಿದ್ದರೂ ಇದೀಗ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದು, ಸಾರ್ವಜನಿಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಮಕೂರು: ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇನ್ನೂ ಸಂಪೂರ್ಣ ಕಾಮಗಾರಿ ಮುಗಿಯದಿದ್ದರೂ ಇದೀಗ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ. ಹೌದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಜತಾದ್ರಿ ಪುರ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು, ಇನ್ನೂ ಸಮರ್ಪಕವಾಗಿ ರಸ್ತೆ, ಬ್ರಿಡ್ಜ್ಗಳು ಆಗಿಲ್ಲ, ಸರ್ವೀಸ್ ರಸ್ತೆ ಸೇರಿ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 40, 60 ರೂ. ಯಿಂದ ಬೃಹತ್ ವಾಹನಗಳಿಗೆ 400 ರೂ. ವರೆಗೂ ಟೋಲ್ ವಸೂಲಿಗೆ ಮುಂದಾಗಿದ್ದಾರೆ.
ಸಿದ್ಧತೆಯಿಲ್ಲದೇ ಟೋಲ್ ಸಂಗ್ರಹ, ಟೆಕ್ನಿಕಲ್ ಸಮಸ್ಯೆಯಿಂದ ವಾಹನ ಸವಾರರ ಪರದಾಟ
ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ NHAI ಟೋಲ್ ಸಂಗ್ರಹ ಆರಂಭಿಸಿದೆ. ನಿನ್ನೆಯಷ್ಟೇ (ಮಾರ್ಚ್ 14) ಆರಂಭವಾದ ಟೋಲ್ ಸಂಗ್ರಹಕ್ಕೆ ಅನೇಕ ವಿರೋಧಗಳು ವ್ಯಕ್ತವಾಗಿದ್ದವು. ಎಕ್ಸ್‌ಪ್ರೆಸ್ ವೇನಲ್ಲಿ ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ. ಟೆಕ್ನಿಕಲ್ ಎರರ್ ಆಗುತ್ತಿದೆ. ಫಾಸ್ಟ್ಯಾಗ್ ಇದ್ರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ. ಸ್ಕ್ಯಾನ್ ಆಗೋದ್ರಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಟೋಲ್ ಕಂಬಿ ಕೂಡ ಸರಿಯಾಗಿ ವರ್ಕ್ ಆಗುತ್ತಿಲ್ಲ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಹೀಗಾಗಿ ವಾಹನ ಚಾಲಕರು ಗರಂ ಆಗಿದ್ದರು. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್ ತಗೋತಿರಿ ಎಂದು ಅವಾಜ್ ಹಾಕುತ್ತಿದ್ದರು.
ಇನ್ನು ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆಯಲ್ಲಿರುವ ಟೋಲ್ ಪ್ಲಾಜಾ ಬಳಿ ಕನ್ನಡಪರ ಸಂಘಟನೆ, ಸಮಾನ ಮನಸ್ಕ ವಕೀಲರು ಪ್ರತಿಭಟನೆ ನಡೆಸಿದ್ದರು. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿ ಕಪ್ಪು ಬಾವುಟ ಮತ್ತು ಹಾಲಿನ ಕ್ಯಾನ್ ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕೇಂದ್ರ ಸರ್ಕಾರ, NHAI ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿತ್ತು. ಸದ್ಯ ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಬಿ.ಟಿ.ಶ್ರೀಧರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಶಪಥ ರಸ್ತೆ ಅಲ್ಲ
ಟೋಲ್ ದರ ಬಗ್ಗೆ ಈಗಾಗಲೇ ಪತ್ರಿಕೆಗಳ ಮೂಲಕ ತಿಳಿಸಿದ್ದೇವೆ. ಕೇಂದ್ರ ಸರ್ಕಾರದ ಗೆಜೆಟ್ನಲ್ಲೂ ಟೋಲ್ ಬಗ್ಗೆ ಮಾಹಿತಿ ಇದೆ. 20 ಕಿಲೋ ಮೀಟರ್ ಒಳಗೆ ಇರುವವರಿಗೆ ತಿಂಗಳ ಪಾಸ್ ಇದೆ. ಸ್ಥಳೀಯರಿಗೆ ಡಿಸ್ಕೌಂಟ್ ಇದೆ. ರೋಡ್ ಟೂಲ್ ಪಾಲಿಸಿ ಪ್ರಕಾರ ತಿಳಿಸಿದ್ದೇವೆ. ಕೆಲವು ಕಡೆ ಹೈಕೋರ್ಟ್ ನಿಂದ ತಡೆ ಇತ್ತು. ಇದೀಗ ಅದು ಕ್ಲಿಯರ್ ಆಗಿದೆ. ಕಾನೂನು ತೊಡಕು ಹಿನ್ನೆಲೆ ಸರ್ವಿಸ್ ರಸ್ತೆ ಮಾಡಲು ಆಗಿರಲಿಲ್ಲ ಎಂದಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ