ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಹಿಂದೂಪರ ಸಂಘಟನೆಗಳಿಂದ ಅ.22 ರಂದು ತುಮಕೂರು ಬಂದ್​ಗೆ ಕರೆ

Tumakuru News: ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ವರೆಗೂ ಬಂದ್ ಮಾಡುವಂತೆ ಕಡೆ ನೀಡಲಾಗಿದೆ. ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ.

ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಹಿಂದೂಪರ ಸಂಘಟನೆಗಳಿಂದ ಅ.22 ರಂದು ತುಮಕೂರು ಬಂದ್​ಗೆ ಕರೆ
ಹಿಂದೂಪರ ಸಂಘಟನೆಗಳಿಂದ ಅ.22 ರಂದು ತುಮಕೂರು ಬಂದ್​ಗೆ ಕರೆ
Follow us
TV9 Web
| Updated By: ganapathi bhat

Updated on:Oct 20, 2021 | 8:56 PM

ತುಮಕೂರು: ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ‌ ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳಿಂದ ತುಮಕೂರು ಬಂದ್​ಗೆ ಕರೆ ನೀಡಲಾಗಿದೆ. ಅಕ್ಟೋಬರ್ 22 ರಂದು ತುಮಕೂರು ಬಂದ್​​ಗೆ ಕರೆ ನೀಡಲು ಹಿಂದೂಪರ ಸಂಘಟನೆಗಳು ನಿರ್ಧಾರ ಮಾಡಿವೆ. ಇಂದು (ಅಕ್ಟೋಬರ್ 20) ನಡೆದ ಸಭೆಯಲ್ಲಿ ಬಂದ್​ಗೆ ಕರೆ ನೀಡಲು ನಿರ್ಧಾರ ಮಾಡಲಾಗಿದೆ. ನಿನ್ನೆ ಮಂಜು ಭಾರ್ಗವ್ ಎಂಬವರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಇಂದು ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ತುಮಕೂರು ಬಂದ್​ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ವರೆಗೂ ಬಂದ್ ಮಾಡುವಂತೆ ಕಡೆ ನೀಡಲಾಗಿದೆ. ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. 

ಚರ್ಚ್​ನಲ್ಲಿ ಮತಾಂತರ ಆರೋಪ; ಆರೋಪಿಯನ್ನು ಬಂಧಿಸುವಂತೆ ಅರವಿಂದ್ ಬೆಲ್ಲದ್, ಹಿಂದೂ ಪರ ಸಂಘಟನೆ ಪ್ರತಿಭಟನೆ ಹುಬ್ಬಳ್ಳಿಯ ಚರ್ಚ್​ ಒಂದರಲ್ಲಿ ಮತಾಂತರ ಯತ್ನ ಆರೋಪ ವಿಚಾರಕ್ಕೆ ಸಂಬಂಧಿಸಿ ಶಾಸಕ ಅರವಿಂದ್ ಬೆಲ್ಲದ್ ಹಾಗೂ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಕ್ಟೋಬರ್ 17ರಂದು ಪ್ರತಿಭಟನೆ ನಡೆಸಿದ್ದರು. ಮತಾಂತರ ಮಾಡುತ್ತಿದ್ದವರನ್ನು ಬಂಧಿಸುವುದಾಗಿ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಟ್ಟಿದ್ದರು. ಈ ಬಗ್ಗೆ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ ಹೇಳಿಕೆ ನೀಡಿದ್ದರು.

ಆಯುಕ್ತರ ಭರವಸೆಯಂತೆ ನಾವು ಪ್ರತಿಭಟನೆ ಕೈಬಿಡುತ್ತಿದ್ದೇವೆ. ಪ್ರಕರಣದ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದೇನೆ. ಕೇಂದ್ರ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದರೂ ಒಬ್ಬ ಮತಾಂತರಿ ಬಂಧಿಸುವಂತೆ ಹೋರಾಡುವ ಸ್ಥಿತಿ ಬಂದಿದೆ. ಬೀದಿಗಿಳಿದು ಹೋರಾಡುವ ಸ್ಥಿತಿ ಬಂದಿದ್ದು ನಮ್ಮ ದೌರ್ಭಾಗ್ಯ ಎಂದು ರಾಜ್ಯ ಸರ್ಕಾರ, ಪೊಲೀಸ್ ವ್ಯವಸ್ಥೆ ಬಗ್ಗೆ ಬೆಲ್ಲದ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ತುಮಕೂರು: ಸ್ತ್ರೀಯರ ಶೌಚಾಲಯದಲ್ಲಿ ವಿಡಿಯೋ ಮಾಡುತ್ತಿದ್ದವನಿಗೆ ಗೂಸಾ

ಇದನ್ನೂ ಓದಿ: ಮತಾಂತರ ಆರೋಪ: ಹುಬ್ಬಳ್ಳಿಯ ಚರ್ಚ್​ನಲ್ಲಿ ಕುಳಿತು ಭಜನೆ ಮಾಡಿ ಪ್ರತಿಭಟಿಸಿದ ಭಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು

Published On - 8:26 pm, Wed, 20 October 21

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​