ತುಮಕೂರು: ಪ್ರತಿಭಟನೆ ವೇಳೆ ಡಿವೈಎಸ್ಪಿ ಮೇಲೆ ಹಲ್ಲೆ, ಬಿಜೆಪಿ ಕಾರ್ಯಕರ್ತ ಅರೆಸ್ಟ್

ರಾಜ್ಯ ಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್​ ಸದಸ್ಯ ನಾಸೀರ್ ಹುಸೇನ್ (Nasser Hussain) ಬೆಂಬಲಿಗರು ಗೆಲುವಿನ ಸಂಭ್ರಮದ ನಡುವೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಆರೋಪಗಳು ಕೇಳಿ ಬಂದಿತ್ತು. ಈ ಹಿನ್ನಲೆ ತುಮಕೂರು ಕಾಂಗ್ರೆಸ್ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ತುಮಕೂರು (Tumakuru) ನಗರ ಡಿವೈಎಸ್ ಪಿ.ಚಂದ್ರಶೇಖರ್ ಮೇಲೆ ಹಲ್ಲೆ ನಡೆಸಲಾಗಿತ್ತು.

ತುಮಕೂರು: ಪ್ರತಿಭಟನೆ ವೇಳೆ ಡಿವೈಎಸ್ಪಿ ಮೇಲೆ ಹಲ್ಲೆ, ಬಿಜೆಪಿ ಕಾರ್ಯಕರ್ತ ಅರೆಸ್ಟ್
ತುಮಕೂರು ಪ್ರತಿಭಟನೆ ವೇಳೆ ಡಿವೈಎಸ್ಪಿ ಮೇಲೆ ಹಲ್ಲೆ, ಬಿಜೆಪಿ ಕಾರ್ಯಕರ್ತ ಅರೆಸ್ಟ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 28, 2024 | 9:30 PM

ತುಮಕೂರು, ಫೆ.28: ವಿಧಾನಸೌಧದಲ್ಲಿ ನಿನ್ನೆ(ಫೆ.27) ಪಾಕಿಸ್ತಾನ ಪರ ಘೋಷಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ವೇಳೆ ತುಮಕೂರು(Tumakuru) ನಗರ ಡಿವೈಎಸ್ ಪಿ.ಚಂದ್ರಶೇಖರ್ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾನ್ ಹ್ಯಾಂಡಲ್ ಮಾಡಿದ್ದ ಆರೋಪಿ ವಿರುದ್ಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ 353 ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಿಜೆಪಿ ಕಾರ್ಯಕರ್ತ ವೆಂಕಟೇಶ (42) ಬಂಧಿತ ಆರೋಪಿ. ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ನೂಕಾಟ ತಳ್ಳಾಟವಾಗಿತ್ತು. ಈ ಸಂದರ್ಭದಲ್ಲಿ ಡಿವೈಎಸ್​ಪಿ ಮೇಲೆ ಹಲ್ಲೆ ಆಗಿತ್ತು. ಜೊತೆಗೆ ಡಿವೈಎಸ್ ಪಿ ಮೂಗಿನ ಮೇಲೆ ರಕ್ತಸ್ರಾವ ಆಗಿತ್ತು. ಈ ಹಿನ್ನಲೆ ಇದೀಗ ಆರೋಪಿಯನ್ನ ಬಂಧಿಸಲಾಗಿದೆ.

ಮಂಗಳೂರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನಿಸಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು

ಇನ್ನು ವಿಧಾನಸೌಧದ ಆವರಣದಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ ಬೆನ್ನಲ್ಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದರು. ಅದರಂತೆ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಆಕ್ರೋಶ ಹೊರ ಹಾಕಿ, ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನಿಸಿದ್ದರು. ನಂತರ ಕೆಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲಾಗಿತ್ತು. ಕಾಂಗ್ರೆಸ್ ಕಚೇರಿ ಒಳಗೆ ನುಗ್ಗದಂತೆ ಪೊಲೀಸರು ಮೊದಲೇ ಬ್ಯಾರಿಕೇಡ್ ಅಳವಡಿಸಿದ್ದರು. ಪ್ರತಿಭಟನಾಕಾರರು ಕಚೇರಿ ಬಳಿ ಆಗಮಿಸುವ ಮೊದಲೇ ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ:ಪಾಕಿಸ್ತಾನ ಪರ ಘೋಷಣೆ ಆರೋಪ, ರಾತ್ರಿ ಬಿಜೆಪಿ ಭಾರಿ ಪ್ರತಿಭಟನೆ: ಕಮಲ ನಾಯಕರು ಪೊಲೀಸ್ ವಶಕ್ಕೆ, ಸಿಎಆರ್​ ಮೈದಾನದಲ್ಲಿ ಹೈಡ್ರಾಮಾ!

ಅಷ್ಟೇ ಅಲ್ಲ, ವಿಧಾನಸೌಧದ ಲಾಂಜ್​ನಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಿಡಿದೆದ್ದಿತ್ತು. ನಂದೀಶ್​ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಧರಣಿ ಮಾಡಿದ್ದರು. ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದರು. ಕೂಡಲೇ  ಪ್ರತಿಭಟನಾ ನಿರತರನ್ನು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಗಿತ್ತು. ಇದೀಗ ತುಮಕೂರಿನಲ್ಲಿ ಪ್ರತಿಭಟನೆ ವೇಳೆ ಆಗಿದ್ದ ಅವಘಡಕ್ಕೆ ಓರ್ವನನ್ನು ಅರೆಸ್ಟ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ