AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿಗೆ ಜನ್ಮ ನೀಡಿದ 16ರ ಶಾಲಾ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ 16 ವರ್ಷದ ಶಾಲಾ ಬಾಲಕಿ ಸಂಬಂಧಿಕನಿಂದಲೇ ದೌರ್ಜನ್ಯಕ್ಕೊಳಗಾಗಿ ಗಂಡು ಮಗುವಿಗೆ ಜನ್ಮ ನೀಡಿರುವಂತಹ ಘಟನೆ ನಡೆದಿದೆ. ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ. ಸದ್ಯ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮಗುವಿಗೆ ಜನ್ಮ ನೀಡಿದ 16ರ ಶಾಲಾ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ
ಪ್ರಾತಿನಿಧಿಕ ಚಿತ್ರ
ಜಗದೀಶ ಬಿ.
| Edited By: |

Updated on:Dec 01, 2025 | 3:14 PM

Share

ತುಮಕೂರು, ಡಿಸೆಂಬರ್​ 01: ಶಾಲಾ ಬಾಲಕಿ (girl) ಮೇಲೆ ಸಂಬಂಧಿಕನಿಂದಲೇ ನೀಚ ಕೃತ್ಯವೆಸಗಿದ್ದು, ಇದೀಗ 16 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ (Birth) ನೀಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಪೋಕ್ಸೋ ಪ್ರಕರಣದಡಿ ಆರೋಪಿ ಮಲ್ಲೇಶ್​​ (35)ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.

ನಡೆದದ್ದೇನು? 

ಆರೋಪಿ ಮಲ್ಲೇಶ್​​​ ಬಾಲಕಿಯ ಮೇಲೆ ದೌರ್ಜನ್ಯವೆಸಗಿದ್ದ. ಆಗಸ್ಟ್​ನಲ್ಲಿ ಕೃತ್ಯ ಬೆಳಕಿಗೆ ಬಂದಿತ್ತು. ಇನ್ನು  ಬಾಲಕಿಯನ್ನು ಪೊಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರಿಂದ ತಪಾಸಣೆ ವೇಳೆ ಬಾಲಕಿ ಏಳು ತಿಂಗಳು ಗರ್ಭಿಣಿಯಾಗಿರುವುದ ಪತ್ತೆ ಆಗಿದೆ. ನವೆಂಬರ್ 18ರಂದು ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ.

ಇದನ್ನೂ ಓದಿ: ಬೆಳಗಾವಿ: ಪಿಚ್​ಡಿ ಗೈಡ್​ನಿಂದ ಲೈಂಗಿಕ ಕಿರುಕುಳ, 19ಕ್ಕೂ ಹೆಚ್ಚು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಆ ಬಳಿಕ ಹುಲಿಯೂರುದುರ್ಗಾ ಪೊಲೀಸ್ ಠಾಣೆಗೆ ಪೊಷಕರು ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಮಲ್ಲೇಶ್ ನಾಪತ್ತೆಯಾಗಿದ್ದ. ಸದ್ಯ ಆರೋಪಿಯನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ.

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ 

ಮತ್ತೊಂದು ಪ್ರಕರಣದಲ್ಲಿ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಕೆರೆಯಲ್ಲಿ ಅಪರಿಚಿತ ಶವ ಪತ್ತೆ ಆಗಿರುವ ಘಟನೆ ನಡೆದಿದೆ. ಸುಮಾರು 40ರಿಂದ 45 ವರ್ಷ ಆಸುಪಾಸಿನ ವ್ಯಕ್ತಿ ಶವ ಪತ್ತೆ ಆಗಿದೆ.  ಮೂರ್ನಾಲ್ಕು ದಿನದ ಹಿಂದೆ ನೀರಿನಲ್ಲಿ ಬಿದ್ದು ಮೃತಪಟ್ಟಿರು ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ 2 ವರ್ಷಗಳಿಂದ ಅತ್ಯಾಚಾರ,ಉಪನ್ಯಾಸಕ ಅರೆಸ್ಟ್

ನಿನ್ನೆ ಕರೆಯಲ್ಲಿ ಇದ್ದಕಿದ್ದಂತೆ ಶವ ತೇಲಿ ಬಂದಿದೆ. ಶವ ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಶಿರಾ ಪೊಲೀಸರಿಂದ ಪರಿಶೀಲನೆ ಮಾಡಲಾಗಿದೆ.

ಕಳ್ಳತನಕ್ಕೆ ಯತ್ನ: ಸಿಕ್ಕಿಬಿದ್ದ ಕಳ್ಳನಿಗೆ ಸ್ಥಳೀಯರಿಂದ ಧರ್ಮದೇಟು

ಜಿಲ್ಲೆಯ ತಿಪಟೂರು ಪಟ್ಟಣದ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಕಳ್ಳನಿಗೆ ಸ್ಥಳೀಯರಿಂದ ಥಳಿಸಿರುವಂತಹ ಘಟನೆ ನಡೆದಿದೆ. ಧರ್ಮದೇಟು ನೀಡಿ ತಿಪಟೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳನ ಬಳಿ ಎರಡು ತಾಳಿ, ಸ್ಕ್ರೂ ಡ್ರೈವರ್, ಚಾಕು, ಮೊಬೈಲ್ ಪತ್ತೆ ಆಗಿದೆ. ಸದ್ಯ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:09 pm, Mon, 1 December 25

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್