AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲು

ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ತುಮಕೂರಿನ ನ್ಯಾಯಾಲಯವು ಜೈಲು ಶಿಕ್ಷೆ ಜೊತೆಗೆ ದಂಡವೂ ವಿಧಿಸಿ ಆದೇಶ ಹೊರಡಿಸಿದೆ. 2020ರ ಅಕ್ಟೋಬರ್​ 25ರಂದು ನಡೆದಿದ್ದ ಅತ್ಯಾಚಾರ ಪ್ರಕರಣ ಇದಾಗಿದೆ.

ಅಣ್ಣನ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲು
ಅಣ್ಣನ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ವಿಧಿಸಿದ ತುಮಕೂರಿನ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ (ಸಾಂದರ್ಭಿಕ ಚಿತ್ರ)Image Credit source: istock
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Jul 11, 2023 | 9:13 PM

Share

ತುಮಕೂರು: ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತುಮಕೂರಿನ (Tumakuru) ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯವು ಆದೇಶ ಹೊರಡಿಸಿದೆ. ಅಲ್ಲದೆ, ಕಾನೂನು ಸೇವಾ ಪ್ರಾಧಿಕಾರದಿಂದ ಸಂತ್ರಸ್ತೆಗೆ 6 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ವಿಶೇಷ ಅಭಿಯೋಜಕರಾಗಿ ಕೆ.ಎಸ್.ಆಶಾ ಅವರು ವಾದ ಮಂಡಿಸಿದ್ದರು.

ರಾಕೇಶ್ ಅಲಿಯಾಸ್ ಧನಂಜಯ ಎಂಬಾತ 2020ರ ಅಕ್ಟೋಬರ್​ 25 ರಂದು ತನ್ನ ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿದ್ದನು. ಬಳಿಕ ಬಾಲಕಿಯ ಬೆತ್ತಲೆ ಫೋಟೋ ತೆಗೆದು ಬ್ಯಾಕ್​ಮೇಲ್ ಮಾಡಿದ್ದನು. ವಿಷಯ ಬಾಯಿಬಿಟ್ಟರೆ ನಿನ್ನ ತಂದೆ ತಾಯಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು.

ಇದನ್ನು ಓದಿ: Tumkur News: ತೆಂಗಿನಕಾಯಿ ಕಾರ್ಖಾನೆಗಳ ಮೇಲೆ ದಿಢೀರ್​ ದಾಳಿ: 10ಕ್ಕೂ ಹೆಚ್ಚು ಬಾಲಕಾರ್ಮಿಕರ ರಕ್ಷಣೆ

ಸಂತ್ರಸ್ತ ಬಾಲಕಿಯು ತನ್ನ ಮೇಲೆ ಚಿಕ್ಕಪ್ಪ ಎಸಗಿದ ಕೃತ್ಯವನ್ನು ಪೋಷಕರ ಮುಂದೆ ಹೇಳಿಕೊಂಡಿದ್ದಾಳೆ. ಅದರಂತೆ ಪೋಷಕರು, ತುಮಕೂರಿನ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ರಾಕೇಶ್​ನನ್ನು ಬಂಧಿಸಿದ್ದರು.

ಆರೋಪಿಯನ್ನು ಬಂಧಿಸಿದ ನಂತರ ಅಂದಿನ ತನಿಖಾಧಿಕಾರಿಯಾಗಿದ್ದ ಟಿ.ಎಸ್ ರಾಧಾಕೃಷ್ಣ ಅವರು ತನಿಖೆ ನಡೆಸಿ‌ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಅದರಂತೆ ಅತ್ಯಾಚಾರ ಎಸಗಿರುವುದು ಸಾಬೀತಾದ ಹಿನ್ನೆಲೆ ನ್ಯಾಯಾಲಯವು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು