ತುಮಕೂರು: ಜಿಎಸ್​ಟಿ ಹಣ ಕಡಿತಗೊಳಿಸಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ

ತುಮಕೂರಿನ(Tumakuru) ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ(Lokayukta) ದಾಳಿ ನಡೆಸಲಾಗಿದ್ದು, 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಮಂಜುನಾಥ್ ವಿ.ಕೆ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ.

ತುಮಕೂರು: ಜಿಎಸ್​ಟಿ ಹಣ ಕಡಿತಗೊಳಿಸಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ
ಲೋಕಾಯುಕ್ತ ಬಲೆಗೆ ಬಿದ್ದ ತುಮಕೂರು ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 12, 2024 | 4:18 PM

ತುಮಕೂರು, ಮಾ.12: ಜಿ.ಎಸ್.ಟಿ ಹಣ ಕಡಿತಗೊಳಿಸಲು ತುಮಕೂರಿನ(Tumakuru) ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ(Lokayukta) ದಾಳಿ ನಡೆಸಲಾಗಿದ್ದು, 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಮಂಜುನಾಥ್ ವಿ.ಕೆ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ. ಇವರು ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದ‌ರು. ಈ ಕುರಿತು ಜಿ.ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇವರ ದೂರಿನ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಯನ್ನು ಅರೆಸ್ಟ್​ ಮಾಡಿದ್ದಾರೆ.

ಇನ್ನು ಇದೇ ಮಾರ್ಚ್​ 07 ರಂದು ಧಾರವಾಡ ಜಿಲ್ಲೆಯ ಕಲಘಟಗಿ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್ ಸುರೇಶ್ ಅಡವಿ, ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದ. ಭೂ ನ್ಯಾಯ ಮಂಡಳಿ ಆದೇಶದಂತೆ ಖಾತೆ ಬದಲಿಸಿಕೊಡಲು ರೈತ ಮಲ್ಲಿಕಾರ್ಜುನ ಕುರುಬರ ಎಂಬುವವರ ಬಳಿ ಬರೊಬ್ಬರಿ 45 ಸಾವಿರ ರೂ. ಲಂಚ ಪಡೆಯುವಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದ. ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಇಂತಹ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಿದ್ದರೂ, ಇದಕ್ಕೆ ಬ್ರೇಕ್​ ಹಾಕಲಾಗಿಲ್ಲ ಎಂಬುದು ದುರಂತ.

ಇದನ್ನೂ ಓದಿ:ಬಳ್ಳಾರಿಯಲ್ಲಿ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಇಂಜಿನಿಯರ್

ಕೋಲಾರ: ತಾಲ್ಲೂಕಿನ ಕುರುಗಲ್ ಗ್ರಾಮದ ಬಳಿ ಕೋಳಿ ಫಾರಂ ಶೆಡ್​ನಲ್ಲಿದ್ದ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 260 ಅಕ್ರಮ ಸಿಲಿಂಡರ್​ಗಳು, ರೀಫಿಲ್ಲಿಂಗ್ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕೆ.ಆರ್​.ಪುರಂ ಮೂಲದ ಶಫಿ ಹಾಗೂ ಪಾಪಣ್ಣ ಎಂಬುವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ