AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೂವರ ದುರ್ಮರಣ!

ತುಮಕೂರು ತಾಲೂಕಿನ ನೆಲಹಾಳ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ಮೂವರು ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರವಾಸ ಮುಗಿಸಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತುಮಕೂರು: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೂವರ ದುರ್ಮರಣ!
ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೂವರ ದುರ್ಮರಣ!
Jagadish PB
| Edited By: |

Updated on: Jan 26, 2026 | 8:30 AM

Share

ತುಮಕೂರು, ಜನವರಿ 26: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು (Tumakuru) ತಾಲೂಕಿನ ನೆಲಹಾಳ್ ಸಮೀಪ ಇಂದು ಬೆಳಗ್ಗೆ ನಡೆದಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ಹೇಳಲಾಗಿದೆ.

ಮೃತರು ಬೆಂಗಳೂರಿನ ನಿವಾಸಿಗಳು

ಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ.

ಪ್ರವಾಸಕ್ಕೆ ತೆರಳಿ ವಾಪಸ್ ಬರುವಾಗ ದುರಂತ

ಮೃತರು ಗೋಕರ್ಣ, ಮುರುಡೇಶ್ವರ ಹಾಗೂ ಉಡುಪಿ ಕಡೆ ಪ್ರವಾಸಕ್ಕೆ ತೆರಳಿದ್ದು, ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆವಿ ಹಾಗೂ ಕೋರಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!