AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕನಾಯಕನಹಳ್ಳಿ ಬಳಿ ಭೀಕರ ಸರಣಿ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿಗೆ ಮಗು ಸೇರಿ ನಾಲ್ವರು ಬಲಿ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೋಕ್ಸ್‌ವ್ಯಾಗನ್ ಮತ್ತು ಕಿಯಾ ಸೋನೆಟ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಓವರ್‌ಟೇಕ್ ಪ್ರಯತ್ನವೇ ದುರಂತಕ್ಕೆ ಕಾರಣವಾಗಿದೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕನಾಯಕನಹಳ್ಳಿ ಬಳಿ ಭೀಕರ ಸರಣಿ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿಗೆ ಮಗು ಸೇರಿ ನಾಲ್ವರು ಬಲಿ
ಸಾಂದರ್ಭಿಕ ಚಿತ್ರ
ಜಗದೀಶ ಬಿ.
| Edited By: |

Updated on: Aug 28, 2026 | 10:01 PM

Share

ತುಮಕೂರು, ಆ.28: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೆ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ವೋಕ್ಸ್‌ವ್ಯಾಗನ್ (Volkswagen) ಹಾಗೂ ಕಿಯಾ ಸೋನೆಟ್ (Kia Sonet) ಕಾರುಗಳ ನಡುವೆ ಈ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಚಿಕ್ಕನಾಯಕನಹಳ್ಳಿ ಕಡೆಯಿಂದ ಮೂವರು ಪ್ರಯಾಣಿಸುತ್ತಿದ್ದ ವೋಕ್ಸ್‌ವ್ಯಾಗನ್‌ ಕಾರು ಚಾಲಕ ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ತುರುವೇಕೆರೆ ಕಡೆಯಿಂದ ಬಂದ ಐವರು ಪ್ರಯಾಣಿಸುತ್ತಿದ್ದ ಕಿಯಾ ಸೋನೆಟ್ ಕಾರಿಗೆ ನೇರವಾಗಿ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯಾದ ರಭಸಕ್ಕೆ ವೋಕ್ಸ್‌ವ್ಯಾಗನ್‌ ಕಾರಿನಲ್ಲಿದ್ದ ಚಿಕ್ಕನಾಯಕನಹಳ್ಳಿ ಮೂಲದ ವಿವೇಕ್ ಹಾಗೂ ಪವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಿಯಾ ಸೋನೆಟ್ ಕಾರಿನಲ್ಲಿದ್ದ ತುರುವೇಕೆರೆ ಮೂಲದ ಚಾಲಕ ದಾವೂದ್ ಹಾಗೂ ಮೂರು ವರ್ಷದ ಮುಗ್ಧ ಮಗು ಪ್ರಾಣ ಕಳೆದುಕೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಉಳಿದ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ‘ನಾಗೇಂದ್ರ ನಿರಪರಾಧಿ, ಬಿಜೆಪಿ ನಡೆಗೆ ಜ‌ನತೆ ನೊಂದಿದ್ದಾರೆ’: ಡಿ.ಕೆ. ಶಿವಕುಮಾರ್ ಸಮರ್ಥನೆ

ಘಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!