ಮನೆ ಕೆಲಸಕ್ಕೆ ಬರುತ್ತಿದ್ದಾಗ ವಿದ್ಯಾರ್ಥಿಯಿಂದ ನಿರಂತರ ಅತ್ಯಾಚಾರ; ಗರ್ಭಿಣಿಯಾದ ಬಾಲಕಿ

ತಮ್ಮ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಬಾಲಕಿ ಮೇಲೆ ವಿದ್ಯಾರ್ಥಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿ ಗರ್ಭಾವತಿಯನ್ನಾಗಿ ಮಾಡಿದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.

ಮನೆ ಕೆಲಸಕ್ಕೆ ಬರುತ್ತಿದ್ದಾಗ ವಿದ್ಯಾರ್ಥಿಯಿಂದ ನಿರಂತರ ಅತ್ಯಾಚಾರ; ಗರ್ಭಿಣಿಯಾದ ಬಾಲಕಿ
ತುಮಕೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ (ಫೋಟೋ: ಸಾಂದರ್ಭಿಕ ಚಿತ್ರ)
Edited By:

Updated on: Dec 27, 2022 | 10:35 AM

ತುಮಕೂರು: ನಾಲ್ಕು ವರ್ಷದ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ 16 ವರ್ಷದ ಬಾಲಕ ಅತ್ಯಾಚಾರಕ್ಕೆ (Rape attampt) ಯತ್ನಿಸಿದ್ದ ಘಟನೆ ಕಲಬುರಗಿಯಲ್ಲಿ ನಡೆದಿತ್ತು. ಇದೀಗ ತಮ್ಮ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಬಾಲಕಿ ಮೇಲೆ ವಿದ್ಯಾರ್ಥಿಯೊಬ್ಬ ನಿರಂತರವಾಗಿ ಅತ್ಯಾಚಾರ (Girl raped by student) ಎಸಗಿ ಗರ್ಭಾವತಿಯನ್ನಾಗಿ ಮಾಡಿದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ತುಮಕೂರು ವಿವಿ ಸಂಶೋಧನಾ ವಿದ್ಯಾರ್ಥಿಯೊಬ್ಬ 17 ವರ್ಷದ ಬಾಲಕಿಯನ್ನ ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರ ವೆಸಗಿ ಗರ್ಭಿಣಿ (Pregnant) ಮಾಡಿದ್ದಾನೆ ಎನ್ನಲಾಗಿದೆ.

ಬಾಲಕಿಯ ಮನೆಯಲ್ಲಿ ಬಡತನ ಇದ್ದ ಹಿನ್ನೆಲೆ ವಿದ್ಯಾರ್ಥಿ ಮನೆಗೆ ಮನೆಕೆಲಕ್ಕೆಂದು ಬಾಲಕಿ ಬರುತ್ತಿದ್ದಳು. ಈ ವೇಳೆ ಮನೆಯಲ್ಲಿ ಯಾರು ಇಲ್ಲದಾಗ ಆಕೆಯನ್ನ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಸದ್ಯ ಸಂತ್ರಸ್ತೆ ಗರ್ಭಿಣಿಯಾಗಿದ್ದು, ಪೋಷಕರು ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿದ್ಯಾರ್ಥಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. (ವರದಿ: ಮಹೇಶ್, ಟಿವಿ9 ತುಮಕೂರು)

ಇದನ್ನೂ ಓದಿ: ಕಲಬುರಗಿಯಲ್ಲಿ ಹೆಚ್ಚಾದ ಅಪ್ರಾಪ್ತ ಬಾಲಕಿಯರ ಮೇಲೆ ಅಪ್ರಾಪ್ತರಿಂದಲೇ ಅತ್ಯಾಚಾರ ಪ್ರಕರಣಗಳು

4 ವರ್ಷದ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ 16 ವರ್ಷದ ಬಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ (Chincholi) ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಪ್ರಕರಣ ಸಂಬಂಧ ಪೊಲೀಸರು ಅಪ್ರಾಪ್ತ ಬಾಲಕನನ್ನು ವಿಚಾರಣೆ ನಡೆಸಿದ್ದು, ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ