ಮತ್ತಷ್ಟು ಹೆಚ್ಚಾಯ್ತು ಹೇಮಾವತಿ ಹೋರಾಟದ ಕಿಚ್ಚು: ಸರ್ಕಾರಕ್ಕೆ ಪಾಠ ಕಲಿಸಲು ಮುಂದಾದ ರೈತರು

ತುಮಕೂರಿನ ಹೇಮಾವತಿ ಲಿಂಕ್ ಕಾಲುವೆ ಯೋಜನೆ ವಿರೋಧಿ ಹೋರಾಟ ತೀವ್ರಗೊಂಡಿದೆ. ಪ್ರತಿಭಟನೆಯಲ್ಲಿ ಭಾಗಿಯಾದ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದರಿಂದ ಕೆರಳಿದ ಹೋರಾಟಗಾರರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಹೋರಾಟ ಸಮಿತಿಯು ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲು ಇಂದು ಸಭೆ ಕರೆಯಲಾಗಿದ್ದು, ಮಹತ್ವದ ಚರ್ಚೆ ನಡೆಯಲಿದೆ.

ಮತ್ತಷ್ಟು ಹೆಚ್ಚಾಯ್ತು ಹೇಮಾವತಿ ಹೋರಾಟದ ಕಿಚ್ಚು: ಸರ್ಕಾರಕ್ಕೆ ಪಾಠ ಕಲಿಸಲು ಮುಂದಾದ ರೈತರು
ರೈತರಿಂದ ಪ್ರತಿಭಟನೆ
Edited By:

Updated on: Jun 02, 2025 | 11:01 AM

ತುಮಕೂರು, ಜೂನ್​​ 02: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ (Hemavati canal)​​ ಕಿಚ್ಚು ಜೋರಾಗಿದೆ. ನಿನ್ನೆ ಪ್ರತಿಭಟನೆ ನಡೆಸಿದ್ದ ಮೂವರು ಶಾಸಕರು, ಇಬ್ಬರು ಸ್ವಾಮೀಜಿಗಳು ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಎಫ್​ಐಆರ್ (FIR) ದಾಖಲಿಸಲಾಗಿದೆ. ಸದ್ಯ ಈ ವಿಚಾರ ರಾಜಕೀಯ ಜಟಾಪಟಿಗೂ ಕಾರಣವಾಗಿರುವ ಬೆನ್ನಲ್ಲೇ ಇಂದು ಮಹತ್ವದ ಸಭೆ ನಡೆಸಲು ಹೋರಾಟಗಾರರು ಮುಂದಾಗಿದ್ದಾರೆ. ಹೀಗಾಗಿ ಹೇಮಾವತಿ ಲಿಂಕ್ ಕೆನಾಲ್ ಹೋರಾಟ ಸಮಿತಿ ಇಂದು ಸಭೆ ಕರೆದಿದ್ದು, ಸರ್ಕಾರಕ್ಕೆ ಯಾವ ರೀತಿ ಪಾಠ ಕಲಿಸಬೇಕು ಎಂದು ಸಭೆಯಲ್ಲಿ ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಇಂದು ಹೇಮಾವತಿ ಲಿಂಕ್ ಕೆನಾಲ್ ಹೋರಾಟ ಸಮಿತಿ ಸಭೆ

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್​​ ಕಿಚ್ಚು ಮತ್ತಷ್ಟು ಹೆಚ್ಚಾದೆ. ಇತ್ತ ಪೊಲೀಸರು ಎಫ್ಐಆರ್ ದಾಖಲಿಸಿರುವುದು ಹೋರಾಟಗಾರರನ್ನು ಮತ್ತಷ್ಟು ಕೇರಳಿಸಿದೆ. ಹೀಗಾಗಿ ಹೇಮಾವತಿ ಲಿಂಕ್ ‌ಕೆನಾಲ್ ವಿರೋಧಿ ಹೋರಾಟ ಸಮಿತಿ, ಬಿಜೆಪಿ ಹಾಗೂ ವಿವಿಧ ರೈತ ಪರ ಸಂಘಟನೆಗಳ ಮುಖಂಡರಿಂದ ಸಭೆ ನಡೆಸಲು ಚಿಂತನೆ ನಡೆಸಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ತುಮಕೂರಿನ ಖಾಸಗಿ ಹೋಟೆಲ್​ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಹೋರಾಟ ಸಮಿತಿ ಸಭೆ ನಡೆಯಲಿದ್ದು, ಶಾಸಕರಾದ ಜ್ಯೋತಿಗಣೇಶ್, ಬಿ.ಸುರೇಶ್ ಗೌಡ, ಎ‌ಂ.ಟಿ.ಕೃಷ್ಣಪ್ಪ, ರೈತ ಮುಖಂಡರು ಹಾಗೂ ಹೋರಾಟಗಾರರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ
ಹೇಮಾವತಿ ಕೆನಾಲ್: ಸ್ವಾಮೀಜಿ, ಶಾಸಕರು ಸೇರಿ 11 ಮಂದಿ ವಿರುದ್ಧ ಎಫ್​ಐಆರ್
ಡಿಕೆಶಿ ಕನಸಿನ ಯೋಜನೆಗೆ ವಿರೋಧ ಏಕೆ? ಏನಿದು ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್
144 ಸೆಕ್ಷನ್ ಮಧ್ಯೆಯೂ ಹೋರಾಟ, ಹೇಮಾವತಿ ಎಕ್ಸ್‌ಪ್ರೆಸ್‌ ಗೆ ವಿರೋಧ ಏಕೆ?
ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿದ್ದ ಇಬ್ಬರು ಸ್ವಾಮೀಜಿ, ಮೂವರು ಶಾಸಕರು ಸೇರಿ 11 ಮಂದಿ ವಿರುದ್ಧ ಎಫ್​ಐಆರ್

ರೈತರೋ ಇಲ್ಲಾ ಸರ್ಕಾರವೋ ನೋಡಿಯೇ ಬಿಡೋಣಾ ಎಂಬ ನಿರ್ಧಾರಕ್ಕೆ ಮುಂದಾಗಿದ್ದಾರೆ. ಶತಾಯಗಾತಯ ಸರ್ಕಾರ ಏನೇ ತೀರ್ಮಾನ ತೆಗೆದುಕೊಂಡರು ಯಾವುದಕ್ಕೂ ಬಗ್ಗದಿರಲು ಚರ್ಚೆ ಸೇರಿಂದತೆ ರೈತರ ಒಗ್ಗಟ್ಟು ಬಿಟ್ಟು ಕೊಡದಂತೆ ಸಭೆಯಲ್ಲಿ ತಿರ್ಮಾನ ಮಾಡಲು ಸಿದ್ದತೆ ಮಾಡಲಾಗುತ್ತಿದೆ. ನಮ್ಮ ಪ್ರಾಣ ಹೋದರು ಪರವಾಗಿಲ್ಲ, ಕಾಮಗಾರಿ ನಡೆಸಲು ಬಿಡಲ್ಲ ಎಂದು ಪಟ್ಟು ಹಿಡಿದು ಸರ್ಕಾರಕ್ಕೆ ಎಚ್ಚರಿಕೆ ಕೊಡಲು ಸಿದ್ದತೆ ನಡೆಸಿದ್ದಾರೆ.

13 ಎಫ್ಐಆರ್​ ದಾಖಲು

ಇನ್ನು ಯೋಜನೆ ವಿರೋಧಿಸಿ ಪ್ರತಿಭಟನೆ ವಿಚಾರವಾಗಿ ಮತ್ತೆರಡು ಎಫ್ಐಆರ್​ಗಳು ದಾಖಲಾಗಿದೆ. ಇಂಜಿನಿಯರ್​​ಗಳು ಕೊಟ್ಟ ದೂರಿನ ಮೇರೆಗೆ ಎಫ್ಐಆರ್​ ದಾಖಲಾಗಿದ್ದು, ಒಟ್ಟಾರೆ ಈವರೆಗೆ 13 ಎಫ್ಐಆರ್​ಗಳು ದಾಖಲಾಗಿವೆ.

ಬಿಜೆಪಿ ಮತ್ತು ಜೆಡಿಎಸ್ ಶಾಸಕರ ವಿರುದ್ಧ ಎಫ್​ಐಆರ್​​ ದಾಖಲು

ಕಾಮಗಾರಿ ಗುತ್ತಿಗೆ ಪಡೆದ ಕಂಪನಿ ನೀಡಿದ ದೂರಿನ ಮೇರೆಗೆ ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್​ ಠಾಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಎ1 ತುರುವೇಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ಎ2 ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ, ಎ3 ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿಗಣೇಶ್, ಎ4 ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ, ಎ5 ಜಿಲ್ಲಾ ರೈತ ಸಂಘದ ಅಧ್ಯಕ್ಷ ಗೊವಿಂದರಾಜು, ಎ6 ಬಿಜೆಪಿ ಮುಖಂಡ ದಿಲೀಪ್ ಕುಮಾರ್, ಎ7 ಚೇತನ್, ಎ8 ಇತರ 25 ರಿಂದ 30 ಮಂದಿ ಹೆಸರು ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.