
ತುಮಕೂರು, ಜನವರಿ 27: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಅಪಘಾತಗಳು ನಡೆಯುತ್ತಿದ್ದು, ತಮ್ಮದಲ್ಲದ ತಪ್ಪಿಗೆ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. 2025ರ ಡಿಸೆಂಬರ್ 25ರಿಂದ 2026ರ ಜನವರಿ 26ರವರೆಗೆ ಒಟ್ಟು 31 ದಿನಗಳ ಅವಧಿಯಲ್ಲಿ ಬರೋಬ್ಬರಿ 15 ಮಂದಿ ರಸ್ತೆ ಅಪಘಾತದಲ್ಲಿ ಜೀವ ಬಿಟ್ಟಿದ್ದಾರೆ. ಹೀಗಾಗಿ ತುಮಕೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಮೃತ್ಯುಕೂಪವಾಗಿ ಮಾರ್ಪಟ್ಟಿದ್ಯಾ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಇದನ್ನೂ ಓದಿ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೂವರ ದುರ್ಮರಣ!
ಮೇಲಿಂದ ಮೇಲೆ ನಡೆಯುತ್ತಿರುವ ಈ ರೀತಿಯ ಅಪಘಾತಗಳಿಗೆ ಲಾರಿಗಳಿಂದ ಆಗುತ್ತಿರುವ ಪರೋಕ್ಷ ಸಮಸ್ಯೆಗಳೂ ಕಾರಣ. ನಡೆದಿರುವ ಎಲ್ಲ ಅಪಘಾತಗಳಲ್ಲೂ ಲಾರಿ ಹೆಸರು ಕೇಳಿಬಂದಿದ್ದು, ವಿಶ್ರಾಂತಿ ಇಲ್ಲದೆ ಚಾಲನೆ ಮಾಡುವ ಲಾರಿಗಳ ಚಾಲಕರಿಗೆ ಹೈವೇನಲ್ಲಿ ಟ್ರಕ್ ಟರ್ಮಿನಲ್ ಇಲ್ಲದಿರುವುದೂ ಅಪಘಾತಗಳಿಗೆ ಎಡೆಮಾಡಿಕೊಡುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್, ಹಿಂದೆ ಟ್ರಕ್ ಟರ್ಮಿನಲ್ ನೀಡಲಾಗಿತ್ತು. ಆದರೆ ಹಿಂದಿನ ಸರ್ಕಾರ ಅದನ್ನು ಸೈಟ್ಗಳನ್ನು ಮಾಡಿ ಮಾರಿದೆ. ಅಗತ್ಯ ಬಿದ್ರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ವ್ಯವಸ್ಥೆ ಮಾಡೋದಾಗಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಅಪಘಾತಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಮನಕ್ಕೆ ತಂದಿದ್ದೇನೆ ಎಂದಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:23 pm, Tue, 27 January 26