AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಕೇಸ್​ಗೆ ಟ್ವಿಸ್ಟ್; ವೈದ್ಯಾಧಿಕಾರಿ ಮೇಲೆ ಹಲ್ಲೆ; 15 ಮಂದಿ ವಿರುದ್ಧ FIR

ತುಮಕೂರಿನ ತಿಮ್ಮಸಂದ್ರ ಗ್ರಾಮದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ವಿಫಲ ಹಿನ್ನೆಲೆ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಚಿರತೆ ಸೆರೆ ಹಿಡಿಯಲು ಬಂದಿದ್ದ ವೈದ್ಯರ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿ, ಬೆದರಿಕೆ ಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಪೊಲೀಸ್​​ ಠಾಣೆ ಮೆಟ್ಟಿಲೇರಿದೆ.

ತುಮಕೂರಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಕೇಸ್​ಗೆ ಟ್ವಿಸ್ಟ್; ವೈದ್ಯಾಧಿಕಾರಿ ಮೇಲೆ ಹಲ್ಲೆ; 15 ಮಂದಿ ವಿರುದ್ಧ FIR
ಅಧಿಕಾರಿಗಳು ಮತ್ತು ಗ್ರಾಮಸ್ಥರ ಮಧ್ಯೆ ನಡೆದ ಮಾಹಿತಿ ಚಕಮಕಿ
ಜಗದೀಶ ಬಿ.
| Edited By: |

Updated on: Oct 23, 2026 | 5:19 PM

Share

ಮುಖ್ಯಾಂಶಗಳು

  • ಚಿರತೆ ಸೆರೆ ಹಿಡಿಯಲು ಬಂದ ವೈದ್ಯರ ಮೇಲೆ ಗ್ರಾಮಸ್ಥರಿಂದ ಬೆದರಿಕೆ, ಹಲ್ಲೆ ಆರೋಪ
  • ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರ ವಿರುದ್ಧ FIR ದಾಖಲು
  • ಗ್ರಾಮಸ್ಥರು ಹಾಗೂ ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ

ತುಮಕೂರು, ಅಕ್ಟೋಬರ್​​ 23: ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ಸಮೀಪ ಚಿರತೆ ಪ್ರತ್ಯಕ್ಷ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಿರತೆ ಸೆರೆ ಹಿಡಿಯಲು ಬಂದ ಪಶುವೈದ್ಯಾಧಿಕಾರಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಇದೀಗ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಪಶುವೈದ್ಯಾಧಿಕಾರಿ ನೀಡಿರುವ ದೂರಿನನ್ವಯ 15 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಗ್ರಾಮಸ್ಥರು ಹಾಗೂ ಅಧಿಕಾರಿಗಳ ಮಾತಿನ ಚಕಮಕಿ ಮಧ್ಯೆ ತಪ್ಪಿಸಿಕೊಂಡ ಚಿರತೆ 

ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ಸಮೀಪದ ಗ್ರಾಮದಲ್ಲಿ ನಿನ್ನೆ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿದ್ದ ಚಿರತೆ, ಕೋಳಿಯನ್ನು ಹಿಡಿದಿತ್ತು. ಬಳಿಕ ತೆಂಗಿನ ಮರವೇರಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಸ್ಥಳಕ್ಕೆ ಪಶುವೈದ್ಯಾಧಿಕಾರಿ ಡಾ. ಪ್ರಯಾಗ್ ಹೆಚ್.ಎಸ್. ಕೂಡ ಆಗಮಿಸಿದ್ದರು. ಆದರೆ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಗ್ರಾಮಸ್ಥರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ಅಧಿಕಾರಿಗಳ ಕಣ್ಣೆದುರೇ ಚಿರತೆ ತಪ್ಪಿಸಿಕೊಂಡಿತ್ತು.

ವೈದ್ಯಾಧಿಕಾರಿ ಸುತ್ತುವರೆದ ಗ್ರಾಮಸ್ಥರು: ತಳ್ಳಾಟ, ನೂಕಾಟ

ಚಿರತೆ ಪರಾರಿಯಾಗುತ್ತಿದ್ದಂತೆ ಗ್ರಾಮಸ್ಥರ ಆಕ್ರೋಶ ಮತ್ತಷ್ಟು ಹೆಚ್ಚಾಗಿತ್ತು. ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಅಧಿಕಾರಿಗಳ ಸೂಚನೆಯಂತೆ ಸುರಕ್ಷಿತ ಸ್ಥಳಕ್ಕೆ ತೆರಳುವ ಬದಲು, ಚಿರತೆ ಹಿಡಿಯುವಂತೆ ಪಟ್ಟು ಹಿಡಿದ ಜನರ ಗುಂಪು, ವೈದ್ಯಾಧಿಕಾರಿ ಡಾ. ಪ್ರಯಾಗ್ ಅವರನ್ನು ಸುತ್ತುವರೆದಿದ್ದಾರೆ. ಈಗಲೇ ಚಿರತೆ ಹಿಡಿಯದಿದ್ದರೆ ಬಟ್ಟೆ ಬಿಚ್ಚಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಇದೇ ವೇಳೆ ತಳ್ಳಾಟ, ನೂಕಾಟ ನಡೆದು ವೈದ್ಯಾಧಿಕಾರಿಯ ಬೆನ್ನಿಗೆ ಹೊಡೆಯಲಾಗಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

LIVE TV

ಗಲಾಟೆಯ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆ

ಇನ್ನು ಈ ಗಲಾಟೆಯ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ವೈದ್ಯಾಧಿಕಾರಿಯನ್ನು ಸುತ್ತುವರಿದಿದ್ದ ಗ್ರಾಮಸ್ಥರು, ತಳ್ಳಾಟ ಹಾಗೂ ನೂಕಾಟದ ದೃಶ್ಯಗಳು ಸೆರೆಯಾಗಿವೆ. ಈ ದೃಶ್ಯಗಳನ್ನು ಆಧಾರವಾಗಿಟ್ಟುಕೊಂಡು ವೈದ್ಯಾಧಿಕಾರಿ ಡಾ. ಪ್ರಯಾಗ್​ ಪೊಲೀಸರಿಗೆ ದೂರು ನೀಡಿದ್ದಾರೆ. ‘ಚಿರತೆ ಸೆರೆ ಕಾರ್ಯಾಚರಣೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ’ ಎಂಬ ಆರೋಪದಡಿ ದೂರು ಸಲ್ಲಿಸಿದ್ದಾರೆ. ‘ಅಷ್ಟೇ ಅಲ್ಲ, ಆಸ್ಪತ್ರೆಗೆ ತೆರಳುತ್ತಿದ್ದ ಇಲಾಖೆಯ ವಾಹನವನ್ನು ಅಡ್ಡಗಟ್ಟಿ ತಡೆದಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಹೆಬ್ಬೂರು ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

ಇದನ್ನೂ ಓದಿ: ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಇದೀಗ ಪ್ರಕರಣದ ತನಿಖೆಯನ್ನು ಹೆಬ್ಬೂರು ಪೊಲೀಸರು ಕೈಗೆತ್ತಿಕೊಂಡಿದ್ದಾರೆ. ಗಲಾಟೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಗ್ರಾಮಸ್ಥರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಇತ್ತ ಚಿರತೆ ಇನ್ನೂ ಸೆರೆ ಸಿಗದಿರುವುದರಿಂದ ತಿಮ್ಮಸಂದ್ರ ಗ್ರಾಮ ಹಾಗೂ ಜ್ಞಾನಸಿರಿ ಕ್ಯಾಂಪಸ್ ಸುತ್ತಮುತ್ತಿಲಿನ ಜನರು ಆತಂಕಗೊಂಡಿದ್ದಾರೆ. ಜನವಸತಿ ಪ್ರದೇಶದಲ್ಲಿ ಚಿರತೆ ಸಂಚಾರದಿಂದ ಜನರು ಭಯದಲ್ಲಿದ್ದರೆ, ಮತ್ತೊಂದೆಡೆ ಚಿರತೆ ಕಾರ್ಯಾಚರಣೆ ವೇಳೆ ನಡೆದ ಗಲಾಟೆ ಪೊಲೀಸ್ ತನಿಖೆಯ ಹಂತ ತಲುಪಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!