ತುಮಕೂರು, ಫೆಬ್ರವರಿ 8: ಬಿಸಿಯೂಟ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು (Student) ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ವಿದ್ಯಾರ್ಥಿಗಳು ಮೊಸರನ್ನ ಸೇವಿಸಿದ್ದಾರೆ. ಬಳಿಕ ರಾತ್ರಿ ಮಕ್ಕಳು ಮನೆಗೆ ಹೋದಾಗ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ರಾತ್ರೋರಾತ್ರಿ ಅಸ್ವಸ್ಥ ಮಕ್ಕಳನ್ನು ಪೋಷಕರು ಕುಣಿಗಲ್ ತಾಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. 10 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಕುಣಿಗಲ್ ಟಿಹೆಚ್ಒ ಡಾ. ಮರಿಯಪ್ಪ, ಹಾಗೂ ಆರೋಗ್ಯಾಧಿಕಾರಿ ಬೋರೆಗೌಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಯಾವುದೇ ತೊಂದರೆ ಇಲ್ಲ.
ಮಂಗಳೂರು: ನಗರದ ಹೊರವಲಯದ ವಲಚ್ಚಿಲ್ ಬಳಿಯ ಶ್ರೀನಿವಾಸ್ ಕಾಲೇಜ್ ಹಾಸ್ಟೆಲ್ನಲ್ಲಿ ರಾತ್ರಿ ಆಹಾರ ಸೇವಿಸಿದ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿದೆ. ರಾತ್ರಿ ಊಟ ಮಾಡಿದ ಬಳಿಕ ಹೊಟ್ಟೆ ನೋವಿನಿಂದ ನರಳಿದ ಕಾರಣ ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಊಟದಲ್ಲಿ ಹುಳ ಬಿದ್ದು ಫುಡ್ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಕಾಲೇಜಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ದಾವಣಗೆರೆ: ವಿಷಪೂರಿತ ಆಹಾರ ಸೇವಿಸಿ 38 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಇತ್ತೀಚೆಗೆ ದಾವಣಗೆರೆ ತಾಲೂಕಿನ ಮಾಯಕೊಂಡ ಸರ್ಕಾರಿ ಮೊರಾರ್ಜಿ ಬಾಲಕಿಯರ ವಸತಿ ಪ್ರೌಢಶಾಲೆಯಲ್ಲಿ ನಡೆದಿತ್ತು. ರಾತ್ರಿ ಮಕ್ಕಳು ಕೊಳೆತಿರುವ ನವೀಲು ಕೋಸ್, ಮುಳುಗಾಯಿ, ಟೊಮೆಟೊ ಸೇರಿದಂತೆ ತರಕಾರಿ ಹಾಕಿದ ಬೇಳೆ ಸಾರು, ರಾಗಿ ಮುದ್ದೆ, ಅನ್ನ ಊಟ ಮಾಡಿದ್ದರು ಎನ್ನಲಾಗಿತ್ತು.
ಇದನ್ನೂ ಓದಿ: ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ಪ್ರಿನ್ಸಿಪಾಲ್, ಮೇಲ್ವಿಚಾರಕಿ ಅಮಾನತು ಮಾಡಿದ ಡಿಸಿ
ಅಲ್ಲದೇ ಬೆಳಗ್ಗೆ ಪುಳಿಯೋಗರೆ ಸೇವಿಸಿದ ಮೇಲೆ ಅಸ್ವಸ್ಥರಾಗಿದ್ದರು. ಕೂಡಲೇ ಅಸ್ವಸ್ಥಗೊಂಡ 38 ಮಕ್ಕಳನ್ನು ಮಾಯಕೊಂಡ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗಿತ್ತು.
ಇದನ್ನೂ ಓದಿ: ಚಿಕ್ಕಮಗಳೂರು; ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ, ಆಸ್ಪತ್ರೆಗೆ ಶಾಸಕ ಭೇಟಿ
ಗಂಭೀರವಾಗಿ ಅಸ್ವಸ್ಥರಾಗಿ ಆರು ಜನ ಮಕ್ಕಳನ್ನು ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಎಲ್ಲಾ ಮಕ್ಕಳು ಆರೋಗ್ಯವಾಗಿದ್ದರು. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕ ಕೆ.ಎಸ್.ಬಸವಂತಪ್ಪ ಆಸ್ಪತ್ರೆಗೆ ಭೇಟಿ ನೀಡಿದ್ದರು. ಮಾಯಕೊಂಡ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಮಕ್ಕಳಿಗೆ ಮತ್ತು ಪೋಷಕರಿಗೆ ಧೈರ್ಯ ತುಂಬಿದ್ದರು. ಈ ಶಾಲೆಯ 250 ಮಕ್ಕಳಲ್ಲಿ 38 ಮಕ್ಕಳಿಗೆ ವಾಂತಿ ಬೇಧಿ ಶುರುವಾಗಿತ್ತು. ಇದರಲ್ಲಿ 16 ಜನರ ಸ್ಥಿತತಿ ಗಂಭೀರವಾಗಿತ್ತು. ಇವರನ್ನ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:52 pm, Thu, 8 February 24