ತುಮಕೂರು: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 8 ವರ್ಷದ ಪುತ್ರನೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸದ್ಯ ಕೆರೆಯಿಂದ ತಾಯಿ, ಮಗನ ಮೃತದೇಹ ಹೊರತೆಗೆಯಲಾಗಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ತುಮಕೂರು: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಕೆರೆ
Edited By:

Updated on: Dec 29, 2025 | 5:02 PM

ತುಮಕೂರು, ಡಿಸೆಂಬರ್ 29: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ತುಮಕೂರು (Tumakuru) ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದ ತಾಯಿ ಹಂಸಲೇಖ(36) ಮತ್ತು ಪುತ್ರ ಗುರುಪ್ರಸಾದ್(8) ಮೃತರು. ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕೆರೆಯಿಂದ ತಾಯಿ, ಮಗನ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವಗಳು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

ಭೂಪಸಂದ್ರ ಗ್ರಾಮದ ನಾಗೇಶ್ ಜೊತೆಗೆ ಹಂಸಲೇಖರ ಮದುವೆಯಾಗಿತ್ತು. ಅನಾರೋಗ್ಯದಿಂದ ಹಂಸಲೇಖ ಪತಿ ನಾಗೇಶ್ ಮೃತಪಟ್ಟಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. 3 ವರ್ಷದ ಹಿಂದೆ ನಾಗೇಶ್ ಸಹೋದರ ಲೋಕೇಶ್​ ಜತೆ ಹಂಸಲೇಖಳಿಗೆ ಮದುವೆ ಮಾಡಿ ಕೊಡಲಾಗಿತ್ತು. ಆದರೆ ಏಕಾಏಕಾ ಇಂದು ಬೆಳಗ್ಗೆ ಕೆರೆಯಲ್ಲಿ ಮಗನ ಜೊತೆಗೆ ತಾಯಿಯ ಶವ ಪತ್ತೆ ಆಗಿದೆ.

ಕೆ‌ಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಬೈಕ್‌ಗೆ ಕೆ‌ಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎ.ಚೋಳೇನಹಳ್ಳಿ ಬಳಿ ನಡೆದಿದೆ. ದಡದಹಳ್ಳಿ ನಿವಾಸಿಗಳಾದ ಸುನೀಲ್(20) ಮತ್ತು ಶೃಂಗಾರ್(18) ಮೃತ ಯುವಕರು.

ಇದನ್ನೂ ಓದಿ: ಶೂಟ್​ ಮಾಡಿಕೊಂಡು ಪತಿ ಆತ್ಮಹತ್ಯೆ: ನನ್ನ ಗಂಡ ಸೈಕೋ ಎಂದ ಪತ್ನಿ, ಆಗಿದ್ದೇನು?

KA 13 EQ 1866 ಸಂಖ್ಯೆಯ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿ ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಕೆ‌ಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ಸಂಪ್ ಸ್ವಚ್ಚತೆ ವೇಳೆ ವಿದ್ಯುತ್ ಶಾಕ್​​​ ಹೊಡೆದು ಕಾರ್ಮಿಕ ಸಾವು

ನೀರಿನ ಸಂಪ್ ಸ್ವಚ್ಚತೆ ವೇಳೆ ವಿದ್ಯುತ್ ಶಾಕ್​​ ಹೊಡೆದು ಒಡಿಶಾ ಮೂಲದ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಟೌನ್ ಶಿವ ನಗರದಲ್ಲಿ ಘಟನೆ ನಡೆದಿದೆ. ಉಮಾಕಾಂತ್ ಮಾಲೀಕ್(26) ಮೃತ ಕಾರ್ಮಿಕ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್​​ ಪಲ್ಟಿ: ದೃಶ್ಯ ನೋಡಿದ್ರೆ ಎದೆ ಝಲ್​​ ಎನ್ನುತ್ತೆ!

ವೇಣುಗೋಪಾಲ ಎಂಬುವವರ ಸಂಪ್ ಸ್ವಚ್ಚತೆ ಮಾಡಲಾಗುತ್ತಿತ್ತು. ಮೊದಲು ಒಂದು ಸಂಪ್​​ ಸ್ವಚ್ಛ ಮಾಡಲಾಗಿದ್ದು, ಬಳಿಕ ಎರಡನೇ ಸಂಪ್ ಸ್ವಚ್ಚಗೊಳಿಸುವ ವೇಳೆ ಕರೆಂಟ್ ಶಾಕ್​ ಹೊಡೆದು ಸಂಪ್​ನಲ್ಲಿ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.