AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಜಿಲ್ಲಾಸ್ಪತ್ರೆಗೆ ಹೈಟೆಕ್ ರೂಪ: 131 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭ

ತುಮಕೂರು ಜಿಲ್ಲಾ ಆಸ್ಪತ್ರೆಗೆ ಹೊಸ ಜೀವ ಬಂದಿದೆ. 75 ವರ್ಷಗಳ ಹಳೆಯ ಕಟ್ಟಡವನ್ನು ತೆರವುಗೊಳಿಸಿ, ₹131 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಹೊಸ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಗಣಿ ನಿಧಿ ನೆರವಿನಿಂದ 18 ತಿಂಗಳಲ್ಲಿ ಪೂರ್ಣಗೊಳ್ಳಲಿರುವ ಈ ಯೋಜನೆಯಲ್ಲಿ ಸುಸಜ್ಜಿತ ಶೌಚಾಲಯ ಮತ್ತು ಒಳಚರಂಡಿಗೆ ಆದ್ಯತೆ ನೀಡಲಾಗಿದೆ. ಇದು ಜಿಲ್ಲೆಯ ಜನರ ಆರೋಗ್ಯ ಸೇವೆಗೆ ಆಶಾಕಿರಣವಾಗಲಿದೆ.

ತುಮಕೂರು ಜಿಲ್ಲಾಸ್ಪತ್ರೆಗೆ ಹೈಟೆಕ್ ರೂಪ: 131 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭ
ತುಮಕೂರು ಜಿಲ್ಲಾ ಆಸ್ಪತ್ರೆ
ಜಗದೀಶ ಬಿ.
| Edited By: |

Updated on: Aug 17, 2026 | 5:46 PM

Share

ಮುಖ್ಯಾಂಶಗಳು

  • ತುಮಕೂರು ಜಿಲ್ಲಾಸ್ಪತ್ರೆಗೆ ಈಗ ಹೊಸ ರೂಪ ಸಿಗಲಿದೆ.
  • 131 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಜಿಲ್ಲಾಸ್ಪತ್ರೆ ನಿರ್ಮಾಣ
  • ಸಚಿವ ಜಿ. ಪರಮೇಶ್ವರ್ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಶೀಲನೆ

ತುಮಕೂರು, ಆ.17: ಕಳೆದ 75 ವರ್ಷಗಳಿಂದ ಲಕ್ಷಾಂತರ ರೋಗಿಗಳ ಆರೈಕೆ ಮಾಡಿ ಆಶಾಕಿರಣವಾಗಿದ್ದ ತುಮಕೂರು ಜಿಲ್ಲಾಸ್ಪತ್ರೆಗೆ ಈಗ ಹೊಸ ರೂಪ ಸಿಗಲಿದೆ. ಶೌಚಾಲಯ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ಕಳೆಗುಂದಿದ್ದ ಹಳೆಯ ಆಸ್ಪತ್ರೆ ಕಟ್ಟಡವನ್ನು ತೆರವುಗೊಳಿಸಲಾಗಿದ್ದು, 131 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಜಿಲ್ಲಾಸ್ಪತ್ರೆ ನಿರ್ಮಾಣ ಕಾಮಗಾರಿಗೆ ಅಧಿಕೃತ ಚಾಲನೆ ನೀಡಲಾಗಿದೆ.

ಜಿಲ್ಲಾ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿ ನಿಧಿಯ (DMF) ನೆರವಿನಿಂದ ಈ ಬೃಹತ್ ಆಸ್ಪತ್ರೆ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಸ್ವಾತಂತ್ರ್ಯಪೂರ್ವದ ಇತಿಹಾಸ ಹೊಂದಿದ್ದ ಹಳೆಯ 75 ವರ್ಷಗಳ ಪಾರಂಪರಿಕ ಕಟ್ಟಡವನ್ನು ತೆರವುಗೊಳಿಸಲಾಗುತ್ತಿದ್ದು, ಅದರ ಹಳೆಯ ಕಲ್ಲುಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮರುಬಳಕೆ ಮಾಡಲು ಯೋಜಿಸಲಾಗಿದೆ.

ಹಳೆ ಕಟ್ಟಡ ತೆರವುಗೊಳಿಸಿರುವುದರಿಂದ ಸಾರ್ವಜನಿಕರ ಚಿಕಿತ್ಸೆಗೆ ಯಾವುದೇ ತೊಂದರೆಯಾಗದಂತೆ ಆಸ್ಪತ್ರೆಯ ಇತರ ವಿಭಾಗಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಕಟ್ಟಡದ ವಾಸ್ತುಶಿಲ್ಪ, ರಚನಾತ್ಮಕ ವಿನ್ಯಾಸ ಹಾಗೂ ಆಧುನಿಕ ತಂತ್ರಾಂಶಗಳ ಬಗ್ಗೆ ಅಂತಿಮ ರೂಪುರೇಷೆ ಸಿದ್ಧವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ನಾಗರಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ದುರಂತ ಸಾವು

ಈ ಹೈಟೆಕ್ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲು ಅಂದಾಜು 1 ವರ್ಷ 8 ತಿಂಗಳು (18 ತಿಂಗಳು) ಸಮಯ ನಿಗದಿಪಡಿಸಲಾಗಿದೆ. “ಆಸ್ಪತ್ರೆಗೆ ದಿನನಿತ್ಯ ನೂರಾರು ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಹೀಗಾಗಿ ನೂತನ ಕಟ್ಟಡದಲ್ಲಿ ಅತ್ಯಾಧುನಿಕ ಶೌಚಾಲಯ ಹಾಗೂ ಸುಸಜ್ಜಿತ ಒಳಚರಂಡಿ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.” ಎಂದು ತುಮಕೂರು ಡಿಎಚ್‌ಒ ಡಾ. ಚಂದ್ರಶೇಖರ್ ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!