ಹೊಸ ವರ್ಷಾಚರಣೆ: ತುಮಕೂರಿನ ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ನಿರ್ಬಂಧ

ಹೊಸ ವರ್ಷಾಚರಣೆ ಹಿನ್ನೆಲೆ ಡಿ. 31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ಸಾರ್ವಜನಿಕರಿಗೆ ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ನಿರ್ಬಂಧಿಸಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್​ ಆದೇಶ ಹೊರಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.

ಹೊಸ ವರ್ಷಾಚರಣೆ: ತುಮಕೂರಿನ ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ನಿರ್ಬಂಧ
ದೇವರಾಯನದುರ್ಗ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 28, 2023 | 4:19 PM

ತುಮಕೂರು, ಡಿಸೆಂಬರ್​​ 28: ಹೊಸ ವರ್ಷಾಚರಣೆ (New Year) ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ. ಡಿ. 31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ಸಾರ್ವಜನಿಕರಿಗೆ ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ನಿರ್ಬಂಧಿಸಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್​ ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ದೇವರಾಯನದುರ್ಗ, ನಾಮದ ಚಿಲುಮೆ ಮತ್ತು ಬಸದಿ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗಾಗಿ ಕಾನೂನು ಬಾಹಿರ ಚಟುವಟಿಕೆಗಳನ್ನ ಮಾಡುವ ಸಾಧ್ಯತೆ ‌ಇರುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ

ಬೆಟ್ಟದ ರಸ್ತೆಗಳಲ್ಲಿ ತಿರುವುಗಳು ಹೆಚ್ಚಾಗಿದ್ದು, ಅಪಘಾತಗಳು ನಡೆಯುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಒಂದು ವೇಳೆ ಕಾನೂನು ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ನೋ ಎಂಟ್ರಿ

ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಡಿಸಿ ರವೀಂದ್ರ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ: ಹೊಸ ವರ್ಷ ಸಂಭ್ರಮ: ಕ್ಲಬ್,‌ ಪಬ್, ರೆಸ್ಟೋರೆಂಟ್​ಗೆ ಎಂಟ್ರಿಯಾಗಲು ಬೇಕು ಆಧಾರ್! ಕಾರಣ ಇಲ್ಲಿದೆ

2023ರ ಹೊಸ ವರ್ಷದ ಮೊದಲ ದಿನದಂದೂ ಸಹ ಜಿಲ್ಲಾಡಳಿತ ನಂದಿಬೆಟ್ಟ, ಸ್ಕಂದಗಿರಿ ಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಿತ್ತು. ಜತೆಗೆ ಈ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಿಸಲು ಚೆಕ್​ ಪೋಸ್ಟ್ ತೆರೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್