ತುಮಕೂರು, ಡಿಸೆಂಬರ್ 28: ಹೊಸ ವರ್ಷಾಚರಣೆ (New Year) ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ. ಡಿ. 31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ಸಾರ್ವಜನಿಕರಿಗೆ ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ನಿರ್ಬಂಧಿಸಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷಾಚರಣೆ ವೇಳೆ ದೇವರಾಯನದುರ್ಗ, ನಾಮದ ಚಿಲುಮೆ ಮತ್ತು ಬಸದಿ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗಾಗಿ ಕಾನೂನು ಬಾಹಿರ ಚಟುವಟಿಕೆಗಳನ್ನ ಮಾಡುವ ಸಾಧ್ಯತೆ ಇರುತ್ತದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ
ಬೆಟ್ಟದ ರಸ್ತೆಗಳಲ್ಲಿ ತಿರುವುಗಳು ಹೆಚ್ಚಾಗಿದ್ದು, ಅಪಘಾತಗಳು ನಡೆಯುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಒಂದು ವೇಳೆ ಕಾನೂನು ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಡಿಸಿ ರವೀಂದ್ರ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇದನ್ನೂ ಓದಿ: ಹೊಸ ವರ್ಷ ಸಂಭ್ರಮ: ಕ್ಲಬ್, ಪಬ್, ರೆಸ್ಟೋರೆಂಟ್ಗೆ ಎಂಟ್ರಿಯಾಗಲು ಬೇಕು ಆಧಾರ್! ಕಾರಣ ಇಲ್ಲಿದೆ
2023ರ ಹೊಸ ವರ್ಷದ ಮೊದಲ ದಿನದಂದೂ ಸಹ ಜಿಲ್ಲಾಡಳಿತ ನಂದಿಬೆಟ್ಟ, ಸ್ಕಂದಗಿರಿ ಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಿತ್ತು. ಜತೆಗೆ ಈ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಿಸಲು ಚೆಕ್ ಪೋಸ್ಟ್ ತೆರೆದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.