ತುಮಕೂರು: ಒಂದೇ ಗ್ರಾಮದ 4 ಮಕ್ಕಳು ನಾಪತ್ತೆ, ಪೋಷಕರಲ್ಲಿ ಆತಂಕ

ಶನಿವಾರ ಮಧ್ಯಾಹ್ನ ಆಟ ಆಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿಲ್ಲ. ಎಷ್ಟೋತ್ತಾದರೂ ಮಕ್ಕಳು ಮನೆಗೆ ಬಂದಿಲ್ಲ ಎಂದು ಗಾಬರಿಗೊಂಡ ಪೋಷಕರು ಎಲ್ಲಾ ಕಡೆ ಹುಡುಕಾಡಿದ್ದಾರೆ.

ತುಮಕೂರು: ಒಂದೇ ಗ್ರಾಮದ 4 ಮಕ್ಕಳು ನಾಪತ್ತೆ, ಪೋಷಕರಲ್ಲಿ ಆತಂಕ
ನಾಪತ್ತೆಯಾದ ಮಕ್ಕಳು
Follow us
|

Updated on:May 22, 2023 | 9:36 AM

ತುಮಕೂರು: ಒಂದೇ ಗ್ರಾಮದ 4 ಮಕ್ಕಳು ನಾಪತ್ತೆಯಾಗಿರುವ ಘಟನೆ ತುಮಕೂರು(Tumkur) ಜಿಲ್ಲೆಯ ಶಿರಾ(Sira) ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ(Children Missing). ಒಂದೇ ಗ್ರಾಮದ ನಾಲ್ವರು ಮಕ್ಕಳು ಕಣ್ಮರೆಯಾಗಿದ್ದು ಗ್ರಾಮದಲ್ಲೀಗ ಆತಂಕ ಆವರಿಸಿದೆ. ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾದ ಮಕ್ಕಳು.

ಶನಿವಾರ ಮಧ್ಯಾಹ್ನ ಆಟ ಆಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿಲ್ಲ. ಎಷ್ಟೋತ್ತಾದರೂ ಮಕ್ಕಳು ಮನೆಗೆ ಬಂದಿಲ್ಲ ಎಂದು ಗಾಬರಿಗೊಂಡ ಪೋಷಕರು ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದ್ರೆ ಏನು ಪ್ರಯೋಜನವಾಗಿಲ್ಲ. ಊರೆಲ್ಲಾ ಹುಡುಕಿದರೂ ಮಕ್ಕಳು ಸಿಗದ ಕಾರಣ ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಇಲ್ಲಿ ಅಚ್ಚರಿ ಎಂದರೆ ನಾಪತ್ತೆಯಾಗಿರುವ ಎಲ್ಲರೂ 15-16 ವರ್ಷದ ವಯಸ್ಸಿನವರಾಗಿದ್ದಾರೆ. ಒಂದೇ ಗ್ರಾಮದ, ಒಂದೇ ವಯಸ್ಸಿನ ಅಂತರವಿರುವ 4 ಮಕ್ಕಳು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟಿಹಾಕಿದೆ. ಸದ್ಯ ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಇಳಿದಿದ್ದಾರೆ.

ನಾಪತ್ತೆಯಾದವರಲ್ಲಿ ಮಂಜುಳಾ-ಮಧು ಕುಮಾರ್ ಟ್ವಿನ್ಸ್ ಮಕ್ಕಳು. ಮಕ್ಕಳು ಊರಿಯಿಂದ ಸೀದಾ ಬೆಂಗಳೂರಿಗೆ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬೆಂಗಳೂರಿಗೆ ಯಾಕೆ ಹೋದರೂ ಯಾರು ಇವರನ್ನು ಕರೆಸಿಕೊಂಡರೆಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಶೋಧ ನಡೆಸುತ್ತಿದ್ದು,ಮಕ್ಕಳು ಸಿಕ್ಕ ಬಳಿಕವಷ್ಟೇ ಸತ್ಯ ಹೊರಬರಲಿದೆ.

ಇದನ್ನೂ ಓದಿ: ಮೊಮ್ಮಗನಿಗೆ 12ನೇ ತರಗತಿ ಪ್ರಮಾಣಪತ್ರ ವಿತರಿಸಿದ ಸಿದ್ದರಾಮಯ್ಯ

ಇನ್ನು ಮತ್ತೊಂದೆಡೆ ಶಿರಾ ಶಾಸಕ ಟಿ ಬಿ ಜಯಚಂದ್ರ ಅವರು ಘಟನೆ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ತಮ್ಮ ಫೇಸ್​ಬುಕ್ ಖಾತೆಯಲ್ಲಿ ಮಕ್ಕಳ ಚಿತ್ರಗಳನ್ನು ಫೋಸ್ಟ್ ಮಾಡಿ, ಘಟನೆ ಸಂಬಂಧ ನಾನು  ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾರ್ವಜನಿಕರ ಸಹಕಾರ ಕೂಡ ನಿರೀಕ್ಷಿತ ಎಂದು ಮನವಿ ಮಾಡಿದ್ದಾರೆ.

ತುಮಕೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:57 am, Mon, 22 May 23

ತಾಜಾ ಸುದ್ದಿ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,