ತುಮಕೂರು: ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ: ಓರ್ವ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

Tumakuru News: ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಯಿಂದ ಓರ್ವ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿಯ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಡೆದಿದೆ. 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ತುಮಕೂರು: ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ: ಓರ್ವ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 20, 2023 | 7:54 PM

ತುಮಕೂರು, ನವೆಂಬರ್​​ 20: ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ (bee attack) ಯಿಂದ ಓರ್ವ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿಯ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಡೆದಿದೆ. 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವೀರಭದ್ರಯ್ಯ(47) ಮೃತ ವ್ಯಕ್ತಿ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೆಜ್ಜೇನು ದಾಳಿಗೆ ಅಸುನೀಗಿದ ರೈತ

ಮೈಸೂರು‌: ಹೆಜ್ಜೇನು ದಾಳಿಯಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದ ರೈತ ಚಿಕಿಕ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮೈಸೂರು‌ ಜಿಲ್ಲೆಯ ಹುಣಸೂರು ತಾಲ್ಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿತ್ತು. ಲಕ್ಷ್ಮಣ್(58) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ರೈತ.

ಇದನ್ನೂ ಓದಿ: ಪೊಲೀಸ್ ಆಫೀಸರ್ಸ್ ಹೆಸರಲ್ಲೇ ಆನ್ಲೈನ್ ಮಾರಾಟ‌ ದಂಧೆ: 55 ಸಾವಿರ ರೂ. ಕಳೆದುಕೊಂಡ ವ್ಯಕ್ತಿ

ಇತ ಮೇಕೆಯ ಮೇವಿಗಾಗಿ ಮರದಲ್ಲಿ ಸೊಪ್ಪು ಕೀಳುತ್ತಿದ್ದಾಗ ಜೇನು ಹುಳುಗಳು ದಾಳಿ ಮಾಡಿದ್ದವು. ಇದರಿಂದ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ರೈತ, ಇದೀಗ ಚಿಕಿತ್ಸೆ ಫಲಿಸಿದೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾನ್ಸ್​ಟೇಬಲ್ ಮೇಲೆ ಹೆಲ್ಮೆಟ್​ನಿಂದ ಹಲ್ಲೆ

ಕೊಡಗು: ಕಾನ್ಸ್​ಟೇಬಲ್ ಮೇಲೆ ಹೆಲ್ಮೆಟ್​ನಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಂತೋಷ್ ಚೌಹಾಣ್ ಹಲ್ಲೆಗೊಳಗಾದ ಪೊಲೀಸ್ ಕಾನ್ಸ್​ಟೇಬಲ್​. ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಗಣಪತಿ ಎಂಬುವನನ್ನು ಬಂಧಿಸಲಾಗಿದೆ. ಹಲ್ಲೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಾಡುಹಗಲೇ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕಸಿದು ಕಳ್ಳ ಎಸ್ಕೇಪ್

ಹಾಸನ: ಹಾಡುಹಗಲೇ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕಸಿದು ಕಳ್ಳ ಎಸ್ಕೇಪ್​ ಆಗಿರುವಂತಹ ಘಟನೆ ನಗರದ ಮಹಾರಾಜ ಪಾರ್ಕ್ ರಸ್ತೆಯಲ್ಲಿ ನಡೆದಿದೆ. ಭಾಗ್ಯ (63) ಸರ ಕಳೆದುಕೊಂಡ ಮಹಿಳೆ. ತನ್ನ ಅಕ್ಕನ ಮನೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಮದ್ವೆ ಮುಂಚೆಯೇ ವರನ ಮನೆಯಲ್ಲಿ ಮಧು ಆತ್ಮಹತ್ಯೆ: ಐಶ್ವರ್ಯ ಸಾವಿಗೆ ಜಾತಿಯೇ ಕಾರಣವಾಯ್ತಾ?

ಹೆಲ್ಮೆಟ್ ಹಾಕಿಕೊಂಡು ಮಹಿಳೆಯನ್ನು ಬೈಕ್‌ನಲ್ಲಿ ಹಿಂಭಾಲಿಸಿದ್ದು, ಮನೆಯ ಗೇಟ್ ತೆಗೆಯುತ್ತಿದ್ದಂತೆ ಸರ ಕಸಿದು ಪರಾರಿ ಆಗಿದ್ದಾರೆ. ಸ್ಥಳಕ್ಕೆ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.