ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ

ತುಮಕೂರು ನಗರದ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ 206 ಅಗಲೀಕರಣ ಕಾಮಗಾರಿಗೆ ಕೊನೆಗೂ ಚಾಲನೆ ದೊರೆತಿದೆ. ಬಟವಾಡಿ-ಮಲ್ಲಸಂದ್ರ ನಡುವಿನ 12 ಕಿ.ಮೀ ದ್ವಿಪಥ ರಸ್ತೆಯನ್ನು 86 ಕೋಟಿ ರೂ ವೆಚ್ಚದಲ್ಲಿ ಚತುಷ್ಪಥವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಹತ್ತು ವರ್ಷಗಳಿಂದ ವಾಹನ ಸವಾರರಿಗೆ ಕಿರಿಕಿರಿಯಾಗಿದ್ದ ಈ ಮಾರ್ಗ ಈಗ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.

ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಚಾಲನೆ
Image Credit source: tv9 kannada
Edited By:

Updated on: Feb 01, 2026 | 6:54 PM

ತುಮಕೂರು, ಫೆಬ್ರವರಿ 01: ನಗರದ ವಾಹನ ಸವಾರರಿಗೆ ಕೊನೆಗೂ ಸಿಹಿ ಸುದ್ದಿ ದೊರೆತಂತಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಆ ಮೂಲಕ ಕಾಮಗಾರಿ ಆರಂಭದ ತಯಾರಿ ನಡೆದಿದೆ. ತುಮಕೂರು ನಗರದ ಒಳಗೆ ಹಾದುಹೋಗುವ ಬಟವಾಡಿ- ಮಲ್ಲಸಂದ್ರದ (Batavadi-Mallasandra) ನಡುವಿನ 12 ಕಿ.ಮಿ ರಸ್ತೆ ದ್ವಿಪಥವನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಅಧಿಕೃತವಾಗಿ ಚಾಲನೆ ದೊರೆತಿದೆ.

ರಸ್ತೆ ಇಕ್ಕಟ್ಟಿನಿಂದ ವಾಹನ ಸವಾರರಿಗೆ ಕಿರಿಕಿರಿ

ತುಮಕೂರು ನಗರದಿಂದ ಭೀಮಸಂದ್ರವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ಸವಾರರಿಗೆ ಕೊಂಚ ಕಿರಿಕಿರಿಯಾಗಿತ್ತು. ಈ ಮಾರ್ಗ ರಾಷ್ಟ್ರೀಯ ಹೆದ್ದಾರಿಯಾದರೂ ಸಹ ಅಗಲೀಕರಣವಾಗದೇ ಹಾಗೆ ಉಳಿದಿತ್ತು. ಕಳೆದ ಹತ್ತು ವರ್ಷಗಳಿಂದ ಅಗಲೀಕರಣದ ನಿರೀಕ್ಷೆಯಲ್ಲೇ ಉಳಿದಿತ್ತು. ರಸ್ತೆ ಇಕ್ಕಟ್ಟಿನಿಂದ ದಿನ ನಿತ್ಯ ವಾಹನ ಸವಾರರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದರು. ಆದರೆ ಇದೀಗ ಆ ಕಿರಿಕಿರಿಗೆ ಅಂತ್ಯ ಹಾಡುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ: 1 ವರ್ಷದಲ್ಲಿ 50ಕ್ಕೂ ಅಧಿಕ ಜನ ಸಾವು, ಜಾಗೃತಿ ಮೂಡಿಸಲು ಬಂದ ಯಮ

ಇತ್ತೀಚೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಮೂಲಕ ಹಲವು ವರ್ಷಗಳ ಕನಸು ನನಸಾಗಿದೆ. ಸುಮಾರು 13 ಕಿ.ಮೀ ದೂರದವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ನಡೆಯಲಿದ್ದು, ಈ ಯೋಜನೆಗೆ ಒಟ್ಟು 86 ಕೋಟಿ ರೂ ವೆಚ್ಚ ಅಂದಾಜಿಸಲಾಗಿದೆ. ನಾಲ್ಕು ಲೇನ್ ರಸ್ತೆ ನಿರ್ಮಾಣದಿಂದ ಸಂಚಾರ ಮತ್ತಷ್ಟು ಸುಗಮವಾಗಲಿದೆ.

ಇನ್ನು ಈ ಹೆದ್ದಾರಿ ಅಗಲೀಕರಣದಿಂದ ತುಮಕೂರು ನಗರದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ. ವಾಣಿಜ್ಯ, ಸಾರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಿಂಗಳಲ್ಲಿ 15 ಮಂದಿ ಸಾವು: ಮೃತ್ಯುಕೂಪವಾಯ್ತಾ ತುಮಕೂರು ರಾಷ್ಟ್ರೀಯ ಹೆದ್ದಾರಿ?

ಒಟ್ಟಿನಲ್ಲಿ ಹಲವು ವರ್ಷಗಳ ಕಾಯುವಿಕೆಗೆ ತೆರೆ ಎಳೆದಿರುವ ರಾಷ್ಟ್ರೀಯ ಹೆದ್ದಾರಿ, ಕೊನೆಗೂ ಅಗಲೀಕರಣ ಕಾಮಗಾರಿ ಆರಂಭಿಸಿದೆ. ಈ ಮೂಲಕ ತುಮಕೂರು ನಗರದ ಸಂಚಾರ ವ್ಯವಸ್ಥೆಗೆ ಹೊಸ ಆಯಾಮ ನೀಡಲಿದೆ ಅನ್ನೊದು ಎಲ್ಲರ ಮಾತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us