Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾಮೀಜಿಗೆ 35 ಲಕ್ಷ ವಂಚಿಸಿದ ಯುವತಿ: ಕಂಬಾಳು ಮಠಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದ ಸಿದ್ಧಗಂಗಾ ಮಠ

ಕಂಬಾಳು ಸಂಸ್ಥಾನ ಮಠವು ಸಿದ್ದಗಂಗಾ ಮಠದ ಶಾಖಾ ಮಠವೆಂಬ ಸುದ್ದಿ ಹರಿದಾಡುತ್ತಿದ್ದು, ಇದಕ್ಕೆ ಇದೀಗ ಸ್ವತಃ ಸಿದ್ಧಗಂಗಾ ಮಠ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ.

ಸ್ವಾಮೀಜಿಗೆ 35 ಲಕ್ಷ ವಂಚಿಸಿದ ಯುವತಿ: ಕಂಬಾಳು ಮಠಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದ ಸಿದ್ಧಗಂಗಾ ಮಠ
ಸಿದ್ಧಗಂಗಾ ಮಠ
Follow us
ರಮೇಶ್ ಬಿ. ಜವಳಗೇರಾ
|

Updated on: Jun 09, 2023 | 3:15 PM

ತುಮಕೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಂಬಾಳು ಮಠದ(Kambalu Samsthana Mutt) ಸ್ವಾಮೀಜಿ, ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ ಯುವತಿ ಮಾತಿಗೆ ಮರುಳಾಗಿ 35 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ಆಗುತ್ತಿವೆ. ಇನ್ನು ಇದರ ಮಧ್ಯೆ ಕಂಬಾಳು ಮಠವು ಸಿದ್ಧಗಂಗಾ ಮಠದ ಶಾಖಾ ಮಠ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ತುಮಕೂರಿನ ಸಿದ್ಧಗಂಗಾ ಮಠದ (Tumakuru Siddaganga Math) ಆಡಳಿತ ಮಂಡಳಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಂಬಾಳು ಮಠಕ್ಕೂ ಸಿದ್ಧಗಂಗಾ ಮಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: Facebook ಮೂಲಕ ಪರಿಚಯವಾಗಿದ್ದ ಯುವತಿ, ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿ 35 ಲಕ್ಷ ದೋಖಾ- ಕಂಬಾಳು ಪೀಠಾಧಿಪತಿ ಆರೋಪ

ಇತ್ತೀಚೆಗೆ ಕಂಬಾಳು ಸಂಸ್ಥಾನ ಮಠವು ಸಿದ್ದಗಂಗಾ ಮಠದ ಶಾಖಾ ಮಠವೆಂದು ಹಲವು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಿಸಲಾಗುತ್ತಿದೆ. ಕಂಬಾಳು ಸಂಸ್ಥಾನ ಮಠ ತುಮಕೂರಿನ ಸಿದ್ದಗಂಗಾ ಮಠದ ಶಾಖಾ ಮಠವಲ್ಲ. ಕಂಬಾಳು ಮಠವು ಶ್ರೀ ಶೈಲ ಸೂರ್ಯಸಿಂಹಾಸ‌ನ ಗುರುಪರಂಪರೆಗೆ ಸೇರಿದ ಮಠವಾಗಿದೆ. ಹೀಗಾಗಿ ಸಿದ್ದಗಂಗಾ ಮಠಕ್ಕೂ ಕಂಬಾಳು ಮಠಕ್ಕೂ ಯಾವುದೇ ಸಂಬಂಧವಿಲ್ಲ. ಸಿದ್ದಗಂಗಾ ಮಠವು ಕರ್ನಾಟಕದ ಪ್ರಸಿದ್ಧ ಮಠಗಳಲ್ಲಿ ಒಂದಾಗಿದ್ದು, ತ್ರೀವಿಧ ದಾಸೋಹದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಸಂಸ್ಥೆಯಾಗಿರುತ್ತದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಆಡಳಿತ ಮಂಡಳಿಯು ಪ್ರತಿಕಾ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದೆ.

ಪ್ರಕರಣ ಹಿನ್ನೆಲೆ

ತಮ್ಮ ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿದ ವರ್ಷ ಎಂಬ ಹೆಸರಿನ ಮಹಿಳೆಯೊಬ್ಬರು ಹಂತಹಂತವಾಗಿ 35 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡು, ವಂಚನೆ ಎಸಗಿದ್ದಾರೆ ಎಂದು ಕಂಬಾಳು ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಆರೋಪಿಸಿದ್ದರು.

ಫೇಸ್‌ಬುಕ್ ನಲ್ಲಿ ಪರಿಚಯವಾಗಿ ವಿಡಿಯೋ ಕರೆ ಮೂಲಕ ಸಲುಗೆಯಿಂದ ಮಾತನಾಡುತ್ತಿದ್ದ ಯುವತಿಯೊಬ್ಬರ ಬಲೆಗೆ ಬಿದ್ದು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸುಮಾರು 35 ಲಕ್ಷ ರು ಕಳೆದುಕೊಂಡಿದ್ದಾರೆ, ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸ್ವಾಮೀಜಿ ಅವರನ್ನು 2020ರಲ್ಲಿ ಪರಿಚಯ ಮಾಡಿಕೊಂಡಿದ್ದ ಯುವತಿ, ನಾನಾ ಕಾರಣ ನೀಡಿ ಹಣ ಪಡೆದಿದ್ದಾಳೆ. ಫೇಸ್‌ಬುಕ್‌ ನಲ್ಲಿ ವರ್ಷಾ ಹೆಸರಿನ ಖಾತೆಯಿಂದ 2020ರಲ್ಲಿ ಫ್ರೆಂಡ್‌ ರಿಕ್ವೆಸ್ಟ್ ಬಂದಿತ್ತು. ಅದನ್ನು ಸ್ವೀಕರಿಸಿದ್ದೆ. ನಂತರ, ಯುವತಿ ಚಾಟಿಂಗ್ ಮಾಡಲಾರಂಭಿಸಿದ್ದಳು. ಆಧ್ಯಾತ್ಮಿಕವಾಗಿ ಆಸಕ್ತಿ ಇದೆ ಎಂದು ಹೇಳಿ, ಮೊಬೈಲ್ ನಂಬರ್ ಪಡೆದುಕೊಂಡಿದ್ದಳು. ತನ್ನ ಮೊಬೈಲ್‌ ನಂಬರ್ ಸಹ ಕೊಟ್ಟಿದ್ದಳು ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ